Home namma chikmagalur chikamagalur ಫಲಿತಾಂಶ ಘೋಷಣೆ ಕೋರಿ ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್ ಜಾರಿ
chikamagalurHomeLatest Newsnamma chikmagalur

ಫಲಿತಾಂಶ ಘೋಷಣೆ ಕೋರಿ ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್ ಜಾರಿ

Share
Share

ಕರ್ನಾಟಕ ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ  ಆಗಿದ್ದು, ಫಲಿತಾಂಶ ವ್ಯತಿರಿಕ್ತವಾಗಿದೆ  ಆದ್ರೆ, ಚುನಾವಣಾಧಿಕಾರಿ, ಫಲಿತಾಂಶವನ್ನು ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ತಕ್ಷಣ ಫಲಿತಾಂಶ ಘೋಷಣೆ ಕೋರಿ ಚುನಾವಣಾಧಿಕಾರಿಗೆ ಜೀವರಾಜ್ ಪರ ವಕೀಲೆ ಡಾ.ವಂದನಾ.ಪಿ.ಎಲ್‌ ಅವರು ಲೀಗಲ್​ ನೋಟಿಸ್ ನೀಡಿದ್ದಾರೆ.

ಕರ್ನಾಟಕ ಹೈಕೋರ್ಟ್ ಆದೇಶದಂತೆ ನಿನ್ನೆ (ಮೇ 02) ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳನ್ನು ಮತ್ತೊಮ್ಮೆ ಎಣಿಕೆ ಮಾಡಲಾಗಿದೆ. ಆದ್ರೆ, ಫಲಿತಾಂಶ ಮಾತ್ರ ಪ್ರಕಟಿಸಿಲ್ಲ. ಇದರಿಂದ ತಕ್ಷಣ ಫಲಿತಾಂಶ ಘೋಷಣೆ ಕೋರಿ ಜೀವರಾಜ್ ಪರ ವಕೀಲೆ ಡಾ.ವಂದನಾ.ಪಿ.ಎಲ್‌ ಅವರು ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.​​ ಹೈಕೋರ್ಟ್ ಅಂಚೆ‌ ಮತಪತ್ರಗಳ ಎಣಿಕೆ ನಂತರ ಫಲಿತಾಂಶ ಘೋಷಿಸುವಂತೆ ಆದೇಶಿಸಿದೆ. ಆದರೆ ಫಲಿತಾಂಶ ಘೋಷಣೆ ವಿಳಂಬ ಮಾಡಲಾಗುತ್ತಿದೆ. ವಿಳಂಬ ಮಾಡಿದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ಲೀಗಲ್ ನೋಟಿಸ್​​ ನಲ್ಲಿ ಎಚ್ಚರಿಕೆ ನೀಡಲಾಗಿದೆ.

ಫಲಿತಾಂಶವೇ ಈಗ ಅದಲುಬದಲಾಗೋ ಲಕ್ಷಣ ಕಾಣಿಸುತ್ತಿಲ್ಲ. ಯಾಕಂದ್ರೆ, ಕಳೆದ ಬಾರಿಯ ಎಲೆಕ್ಷನ್​ನಲ್ಲಿ ಕಾಂಗ್ರೆಸ್​ನ ರಾಜೇಗೌಡ 201 ಮತಗಳ ಅಂತರದಿಂದ ಗೆದ್ದುಬಿಗಿದ್ದರು. ಸ್ವಲ್ಪ ಮತಗಳ ಅಂತರದಿಂದ ಬಿಜೆಪಿಯ ಜೀವರಾಜ್ ಸೋತಿದ್ದರು. ಆದ್ರೆ ಅಂಚೆ ಮತಗಳಲ್ಲಿ ಹೆಚ್ಚು ಮತ ಪಡೆದಿದ್ದ ಜೀವರಾಜ್ ಅಸಿಂಧು ಆಗಿದ್ದ 279 ಮತಗಳನ್ನ ಮರು ಎಣಿಕೆ ಮಾಡುವಂತೆ ಪಟ್ಟು ಹಿಡಿದಿದ್ದರು. ಮನವಿಗೆ ಸ್ಪಂದಿಸದ ಅಂದಿನ ಚುನಾವಣಾಧಿಕಾರಿ ಫಲಿತಾಂಶ ಘೋಷಣೆ ಮಾಡಿದ್ರು. ಹೀಗಾಗಿ ಜೀವರಾಜ್ ಬೇರೆ ದಾರಿಯಿಲ್ಲದೆ ಕಾನೂನು ಹೋರಾಟ ನಡೆಸಿದ್ರು. ಸತತ ಮೂರು ವರ್ಷಗಳ ಕಾನೂನು ಹೋರಾಟದ ಬಳಿಕ ಹೈ ಕೋರ್ಟ್ ಸೂಚನೆಯಂತೆ ನಿನ್ನೆ (ಮೇ 02) ಅಂಚೆ ಮತಗಳ ಮರು ಎಣಿಕೆ ಮಾಡಲಾಗಿದ್ದು.

ಮತ ಎಣಿಕೆ ಆರಂಭವಾದಾಗಿನಿಂದ ಮುಗಿಯುವವರೆಗೂ ಸಾಕಷ್ಟು ಗೊಂದಲ ಹಾಗೂ ಹೈಡ್ರಾಮಾಗೆ ಎಡೆಮಾಡಿಕೊಟ್ಟಿತ್ತು. ಎರಡು ಪಕ್ಷಗಳ ನಾಯಕರು ತಾವೇ ಗೆದ್ದಿರೋದಾಗಿ ಘೋಷಿಸಿಕೊಂಡ್ರು.  ಆದ್ರೆ, ರಾಜೇಗೌಡರು ಪಡೆದಿದ್ದ 569 ಅಂಚೆಮತಗಳ ಪೈಕಿ 255 ಅಸಿಂಧು ಆಗಿದ್ದು, ಅವರ ಮತ 314ಕ್ಕೆ ಕುಸಿದಿದೆ. ಹೀಗಾಗಿ 201 ಮತಗಳ ಅಂತರದಲ್ಲಿ ಸೋತಿದ್ದ ಜೀವರಾಜ್‌ಗೆ 52 ಮುನ್ನಡೆ ಸಿಕ್ಕಿದೆ. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.

ಈ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಮತಚೋರಿಯ ತಿರುಗುಬಾಣ ಬಿಟ್ಟಿದ್ದಾರೆ. ಮತಚೋರಿ ಅಂತಿದ್ದವರಿಂದ್ಲೇ ಮತಗಳ್ಳತನ ನಡೆದಿದೆ ಎಂದು ಕೇಸರಿ ಪಡೆ ಆರೋಪ ಮಾಡ್ತಿದೆ. ಜೊತೆಜೊತೆಗೆ ಶೃಂಗೇರಿಯ ಫಲಿತಾಂಶವನ್ನ ಪ್ರಕಟಿಸದಂತೆ ತಡೆಯಲಾಗ್ತಿದೆ ಎಂದು ಆರೋಪಿಸಿದೆ.

ಆದ್ರೆ ಕಾಂಗ್ರೆಸ್ ನಾಯಕರು, ಬಿಜೆಪಿ ವಿರುದ್ಧ ಪ್ರತ್ಯಾರೋಪ ಮಾಡಿದ್ದು, ಅಧಿಕಾರಿಗಳನ್ನ ದುರ್ಬಳಕೆ ಮಾಡಿಕೊಂಡು, ಅಪರಾಧ ಎಸಗಿದೆ. ಮತಗಳ ಟ್ಯಾಂಪರಿಂಗ್ ಆಗಿದೆ ಎಂದು ತಿರುಗೇಟು ನೀಡಿದ್ದಾರೆ. ಇನ್ನು ಫಲಿತಾಂಶ ಘೋಷಣೆ ಮಾಡದ ಸಂಬಂಧ ಪ್ರತಿಕ್ರಿಯಿಸಿರುವ ಚುನಾವಣಾಧಿಕಾರಿ, ಹೈಕೋರ್ಟ್ ಆದೇಶದಂತೆ ಮರು ಎಣಿಕೆ ಮಾಡಲಾಗಿದೆ. ಆದ್ರೆ, ಫಲಿತಾಂಶ ಘೋಷಿಸುವಂತೆ ಆದೇಶದಲ್ಲಿ ಇಲ್ಲ. ಹೀಗಾಗಿ ಮರು ಮತ ಎಣಿಕೆ ವಿವರವನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ ಎಂದು ಸಮಾಜಾಷಿಯಿ ನೀಡಿದ್ದಾರೆ.

ಇನ್ನು ಅಂಚೆ ಮತಪತ್ರಗಳ ಮರುಎಣಿಕೆ ನಂತರ ಫಲಿತಾಂಶ ಘೋಷಿಸದ್ದಕ್ಕೆ ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್ ನೀಡಲಾಗಿದ್ದು, ಮುಂದೆ ಏನಾಗಿದೆ ಎನ್ನುವುದ್ನು ಕಾದುನೋಡಬೇಕಿದೆ.

Legal notice issued to Returning Officer seeking declaration of results

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...