Home namma chikmagalur chikamagalur ನೀರಿನಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು
chikamagalurHomeLatest Newsnamma chikmagalur

ನೀರಿನಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು

Share
Share

ಚಿಕ್ಕಮಗಳೂರು: ಆಟವಾಡುವ ಸಮಯದಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದು ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅರಿಶಿನ ಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಸೋಮವಾರ ಸಂಜೆ ನಡೆದಿದೆ.

ಬಿಸಿಲಿನ ಝಳಕ್ಕೆ ಕಾರಂಜಿ ಕೆರೆ ಖಾಲಿಯಾಗಿ ಮಧ್ಯ ಭಾಗದಲ್ಲಿ ಮಾತ್ರ ಸ್ವಲ್ಪವೇ ನೀರು ಉಳಿದಿತ್ತು. ಈ ಕೆರೆ ಪಾತ್ರದಲ್ಲಿ ಮಕ್ಕಳು ಆಟವಾಡುತ್ತಿರುವಾಗ ನಾಲ್ಕು ವರ್ಷದ ಬಾಲಕಿ ನೀರಿಗೆ ಬಿದ್ದಿದ್ದಾಳೆ. ಈ ಬಾಲಕಿಯನ್ನು ರಕ್ಷಿಸಲು ಹೋದ ನಾಲ್ಕು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಅರಳುಗುಪ್ಪೆ ಗ್ರಾಮದ ಮೈದಿಹಾ(9), ಅಬ್ದುಲ್ ರೆಹಮಾನ್(13), ನಾಯಜ್(10), ಕೈಮರ ಗ್ರಾಮದ ಅರಮಾನ್ ಮೃತಪಟ್ಟ ಮಕ್ಕಳು. ನಾಲ್ಕು ವರ್ಷದ ಮಗು ಅರ್ಮನ್ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗಾಗಿ ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಸ್ಪತ್ರೆಯ ಶವಾಗಾರದ ಎದುರು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ತಾವು ಆಟವಾಡುತ್ತಿರುವಾಗ ತಮ್ಮೊಂದಿಗಿದ್ದ ಬಾತುಕೋಳಿ ನೀರಿಗಿಳಿದಿದ್ದು ಅದನ್ನು ಹಿಡಿಯಲು ಹೋದ ವೇಳೆ ಮಕ್ಕಳು ಒಬ್ಬರ ಹಿಂದೊಬ್ಬರಂತೆ ನೀರಿಗಿಳಿದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಮ್ಮಯ್ಯ ಭೇಟಿ: ವಿಷಯ ತಿಳಿಯುತ್ತಿದ್ದಂತೆ ಶಾಸಕ ಎಚ್.ಡಿ.ತಮ್ಮಯ್ಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಮಗುವಿನ ಆರೋಗ್ಯ ವಿಚಾರಿಸಿದರಲ್ಲದೆ ಮೃತ ಮಕ್ಕಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ವೇಳೆ ಮಾತನಾಡಿದ ಶಾಸಕ ಎಚ್.ಡಿ.ತಮ್ಮಯ್ಯ, ಇಂಥ ಘಟನೆಗಳು ನಡೆಯಬಾರದು. ಮೃತ ಮಕ್ಕಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇವೆ. ಎಷ್ಟೇ ಪರಿಹಾರ ನೀಡಬಹುದು ಆದರೆ ಮಕ್ಕಳನ್ನು ಮರಳಿ ಕೊಡಲು ಸಾಧ್ಯವಿಲ್ಲ. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರ ವಹಿಸಲು ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ ಎಂದರು.

ಕೆರೆಗಳ ಬಳಿ ಯಾವ ರೀತಿಯ ಮುಂಜಾಗ್ರತ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಜಿಲ್ಲಾಧಿಕಾರಿ ಜೊತೆ ಚರ್ಚೆ ನಡೆಸಿದ್ದೇನೆ. ಕ್ಷೇತ್ರದಲ್ಲಿ ಈ ರೀತಿಯ ಹಲವು ಕೆರೆಗಳಿವೆ. ಮಕ್ಕಳ ಸುರಕ್ಷತೆಗೆ ಇಲ್ಲಿ ಯಾವ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದರು.

ನಾಲ್ಕು ವರ್ಷದ ಓರ್ವ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಮಗುವಿಗೆ ಯಾವುದೇ ಅಪಾಯವಾಗದಂತೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

Four children drowned in water

Share

Leave a comment

Leave a Reply

Your email address will not be published. Required fields are marked *

Don't Miss

ಅಂದರ್-ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ

ಚಿಕ್ಕಮಗಳೂರು: ಹೊರವಲಯದ ಹುಕ್ಕುಂದ ಗ್ರಾಮದ ಖಾಲಿ ಜಾಗದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣವನ್ನು ಪಣವಾಗಿಟ್ಟುಕೊಂಡು ಅಂದರ್-ಬಾಹರ್ ಇಸ್ಪೀಟು ಜೂಜಾಟವಾಡುತ್ತಿದ್ದ ಹೈಟೆಕ್ ಅಡ್ಡೆಯ ಮೇಲೆ ಗ್ರಾಮಾಂತರ ಠಾಣೆಯ ಪಿಎಸ್‌ಐ...

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

Related Articles

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...