Home namma chikmagalur chikamagalur ಉನ್ನತ ಅರಣ್ಯಾಧಿಕಾರಿಗಳ ಮೇಲೆ ವಾಮಾಚಾರ
chikamagalurCrime NewsHomeLatest Newsnamma chikmagalur

ಉನ್ನತ ಅರಣ್ಯಾಧಿಕಾರಿಗಳ ಮೇಲೆ ವಾಮಾಚಾರ

Share
Share

ಎನ್.ಆ‌ರ್.ಪುರ: ಮೌಡ್ಯದ ಪರಾಕಾಷ್ಠೆ ಎಂಬಂತಹ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಉನ್ನತ ಅರಣ್ಯಾಧಿಕಾರಿಯನ್ನೇ ಗುರಿಯಾಗಿಸಿ ವಾಮಾಚಾರ ನಡೆಸಿರುವುದು ಸ್ಥಳೀಯವಾಗಿ ತೀವ್ರ ಆತಂಕ ಹಾಗೂ ಕುತೂಹಲ ಮೂಡಿಸಿದೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮೋಹನ್ ಅವರ ಸರ್ಕಾರಿ ನಿವಾಸದ ಗೇಟ್ ಬಳಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಕೇವಲ ಅಧಿಕಾರಿಯನ್ನಷ್ಟೇ ಅಲ್ಲದೆ, ಅವರ ಜೀಪ್ ಚಾಲಕನನ್ನೂ ಗುರಿಯಾಗಿಸಿ ಈ ಮಾಟ-ಮಂತ್ರದ ಪ್ರಯೋಗ ಮಾಡಲಾಗಿದೆ.

ಮಣ್ಣಿನ ಮಡಕೆಯೊಂದರಲ್ಲಿ ಎಸಿಎಫ್ ಮೋಹನ್ ಮತ್ತು ಅವರ ಚಾಲಕನ ಭಾವಚಿತ್ರಗಳನ್ನು ಇಟ್ಟು, ಅದಕ್ಕೆ ಅರಿಶಿನ-ಕುಂಕುಮ ಹಾಗೂ ಇತರೆ ಪೂಜಾ ಸಾಮಗ್ರಿಗಳನ್ನು ಹಾಕಿ, ಮನೆಯ ಪ್ರವೇಶ ದ್ವಾರದ ಬಳಿಯೇ ಮಡಕೆಯನ್ನು ಒಡೆದು ಹಾಕುವ ಮೂಲಕ ಭಯದ ವಾತಾವರಣ ನಿರ್ಮಿಸಲಾಗಿದೆ.

ಬೆಳಿಗ್ಗೆ ಮನೆಯಿಂದ ಹೊರಬಂದ ಅಧಿಕಾರಿ ಹಾಗೂ ಸಿಬ್ಬಂದಿಗೆ ಈ ದೃಶ್ಯ ಕಂಡುಬಂದಿದ್ದು, ತಕ್ಷಣವೇ ಆತಂಕಕ್ಕೊಳಗಾಗಿದ್ದಾರೆ. ಈ ಘಟನೆಯ ಹಿಂದೆ ಇಲಾಖೆಯೊಳಗಿನ ದ್ವೇಷವಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದ್ದು, ಸ್ವತಃ ಕಚೇರಿಯ ಸಿಬ್ಬಂದಿಯ ಮೇಲೆಯೇ ಎಸಿಎಫ್ ಮೋಹನ್ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕರ್ತವ್ಯದ ವಿಚಾರದಲ್ಲಿ ಅಥವಾ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ವಾಮಾಚಾರದ ಹಾದಿ ಹಿಡಿದಿರಬಹುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದೆ.

Witchcraft on top forest officials

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...