Home namma chikmagalur chikamagalur ಬಿಜೆಪಿ ಅಧಿಕಾರದಲ್ಲಿದ್ದರೂ ಅಧಿಕಾರ ದುರುಪಯೋಗಪಡಿಸಿಕೊಳ್ಳಲಿಲ್ಲ
chikamagalurHomeLatest Newsnamma chikmagalur

ಬಿಜೆಪಿ ಅಧಿಕಾರದಲ್ಲಿದ್ದರೂ ಅಧಿಕಾರ ದುರುಪಯೋಗಪಡಿಸಿಕೊಳ್ಳಲಿಲ್ಲ

Share
Share

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಮರು ಎಣಿಕೆ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಗೆಲುವು ಸಾಧಿಸಿರುವುದರ ಹಿಂದೆ ದೊಡ್ಡ ಮಟ್ಟದ ‘ಚುನಾವಣಾ ಅಕ್ರಮ’ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರ ಆರೋಪ ಮಾಡಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಸಿ.ಟಿ ರವಿ, ತಾವು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಮಯದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ಸ್ಥಾನಗಳಲ್ಲಿ ಸೋತಿದ್ದನ್ನು ಉಲ್ಲೇಖಿಸಿ ಅಂದು ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಅಧಿಕಾರ ದುರುಪಯೋಗಪಡಿಸಿಕೊಳ್ಳಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಂದು ವೇಳೆ ಅಂದು ಅಧಿಕಾರ ದುರುಪಯೋಗವಾಗಿದ್ದರೆ ಸೋಲುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು. ನ್ಯಾಯಾಲಯದ ಆದೇಶದಂತೆ ನಡೆದ ಮತಗಳ ಮರು ಎಣಿಕೆ ಪ್ರಕ್ರಿಯೆಯನ್ನು ಸಮರ್ಥಿಸಿದ ಅವರು, ಪ್ರಸ್ತುತ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿರುವಾಗ ಮತಪೆಟ್ಟಿಗೆಗಳ ರಕ್ಷಣೆ ಮತ್ತು ಕಸ್ಟೋಡಿಯನ್ ಜವಾಬ್ದಾರಿ ಸರ್ಕಾರದ ಮೇಲೆಯೇ ಇರುತ್ತದೆ ಎಂದು ನೆನಪಿಸಿದರು.

ಮತದಾನದಲ್ಲಿ ಅಕ್ರಮ ಅಥವಾ ಮತ ದರೋಡೆ ನಡೆದಿದೆ ಎಂಬ ಮುಖ್ಯಮಂತ್ರಿಗಳ ಆರೋಪಕ್ಕೆ ತಿರುಗೇಟು ನೀಡಿದ ಅವರು, “ಇಂಟೆಲಿಜೆನ್ಸ್ ಮತ್ತು ಪೊಲೀಸ್ ಇಲಾಖೆ ನಿಮ್ಮ ಕೈಯಲ್ಲೇ ಇರುವಾಗ ಅಕ್ರಮ ಎಸಗಿದವರು ಯಾರು ಎಂಬುದನ್ನು ನೀವೇ ಪತ್ತೆ ಹಚ್ಚಬೇಕು” ಎಂದು ಸವಾಲು ಹಾಕಿದರು. ಸುಮ್ಮನೆ ಆರೋಪ ಮಾಡುವ ಬದಲು, ಅಕ್ರಮ ನಡೆದ ಬಗ್ಗೆ ಸ್ಪಷ್ಟ ಪುರಾವೆಗಳಿದ್ದರೆ ನ್ಯಾಯಾಲಯ ಅಥವಾ ಚುನಾವಣಾ ಆಯೋಗಕ್ಕೆ ಸಲ್ಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಅವರು ಒತ್ತಾಯಿಸಿದರು.

ಚುನಾವಣೆಯಲ್ಲಿ ಗೆದ್ದಾಗ ಬೀಗದೆ ಮತ್ತು ಸೋತಾಗ ಬಗ್ಗದೆ ಕೆಲಸ ಮಾಡುವುದು ತಮ್ಮ ಸಿದ್ಧಾಂತ ಎಂದು ಹೇಳುತ್ತಾ, ಅಕ್ರಮದ ಮೂಲಕ ಶಾಸಕರಾಗುವ ಅವಶ್ಯಕತೆ ತಮಗಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ರು.

Even though the BJP was in power it did not misuse its power.

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...