Home namma chikmagalur chikamagalur ಬಿಎಸ್‌ವೈ ಅಭಿಮಾನೋತ್ಸವವಕ್ಕೆ ಜಿಲ್ಲೆಯಿಂದ 25 ಸಾವಿರಕ್ಕೂ ಕಾರ್ಯಕರ್ತರು
chikamagalurHomeLatest Newsnamma chikmagalur

ಬಿಎಸ್‌ವೈ ಅಭಿಮಾನೋತ್ಸವವಕ್ಕೆ ಜಿಲ್ಲೆಯಿಂದ 25 ಸಾವಿರಕ್ಕೂ ಕಾರ್ಯಕರ್ತರು

Share
Oplus_16908288
Share

ಚಿಕ್ಕಮಗಳೂರು- ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ರವರ ಜನಸೇವೆಯ ಬದುಕಿಗೆ ೫೦ ವರ್ಷಗಳು ತುಂಬಿರುವ ಸವಿನೆನಪಿಗಾಗಿ ಮೇ. ೯ ರಂದು ಚಿತ್ರದುರ್ಗದಲ್ಲಿ ಬೃಹತ್ ಬಿಎಸ್‌ವೈ ಅಭಿಮಾನೋತ್ಸವವನ್ನು ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಅಭಿಮಾನೋತ್ಸವ ಸಮಿತಿ ಸಂಚಾಲಕ ಬೆಳ್ಳಿ ಪ್ರಕಾಶ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಾಡಿನ ಸರ್ವತೋಮುಖ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿರುವ ಜನಪರ, ಸಮಾಜಮುಖಿ ಹೋರಾಟಗಾರ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್ ಯಡಿಯೂರಪ್ಪ ರವರನ್ನು ಪಕ್ಷದ ಹಾಗೂ ನಾಡಿನ ಜನತೆಯ ಪರವಾಗಿ ಅಭಿನಂಧಿಸಲು ನಿರ್ಧರಿಸಲಾಗಿದೆ ಎಂದರು.

ಅಂದು ಮಧ್ಯಾಹ್ನ ೧೨ ಗಂಟೆಗೆ ಕಾರ್ಯಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಲಿದ್ದು ಮಾಜಿ ಉಪ ಮುಖ್ಯ ಮಂತ್ರಿ ಗೋವಿಂದ ಕಾರಜೋಳ ಅಧ್ಯಕ್ಷತೆ ವಹಿಸಲಿದ್ದಾರೆ, ಕೇಂದ್ರ ಸಚಿವರುಗಳಾದ ಪ್ರಹ್ಲಾದ್ ಜೋಷಿ, ಹೆಚ್.ಡಿ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಸಂಸದರಾದ ಜಗದೀಶ್ ಶೆಟ್ಟರ್, ಬಸವರಾಜ್ ಬೋಮ್ಮಾಯಿ, ವಿಪಕ್ಷ ನಾಯಕ ಆರ್, ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಈ ಕಾರ್ಯಕ್ರಮಕ್ಕೆ ನಾಡಿನ ಅನೇಕ ಸಿದ್ಧಗಂಗಾ ಶ್ರೀ, ರಂಭಾಪುರಿ ಶ್ರೀ ಸೇರಿದಂತೆ ಹೆಸರಾಂತ ಮಠಾಧೀಶರುಗಳು ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದ ಅವರು ಈ ಸಂಬಂದ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲೆಯಿಂದ ೨೫ ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಅಭಿಮಾನೋತ್ಸವದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು ಸುಮಾರು ೧೦ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು, ಬಿಎಸ್‌ವೈ ಅಭಿಮಾನಿಗಳು, ಹಿತೈಷಿಗಳು ಪಾಲ್ಗೋಳ್ಳಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜ್ ಶೆಟ್ಟಿ ಮಾತನಾಡಿ ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ಪಶ್ಚಿಮ ಬಂಗಾಳ, ಪುದುಚೆರಿ, ಅಸ್ಸಾಂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ, ಪಕ್ಷದ ಪರವಾಗಿ ಜನಾದೇಶ ನೀಡಿದ ಮತದಾರರಿಗೆ ಧನ್ಯವಾದ ಹೇಳುವುದಾಗಿ ತಿಳಿಸಿದರು.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ೫೪ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಡಿ.ಎನ್ ಜೀವರಾಜ್ ರವರು ಆಯ್ಕೆಯಾಗಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ ಇದಕ್ಕಾಗಿ ಕ್ಷೇತ್ರದ ಜನತೆಗೆ ಹಾಗೂ ಶಾಸಕರಾಗಿ ಆಯ್ಕೆಯಾದ ಜೀವರಾಜ್ ರವರಿಗೂ ಅಭಿನಂದಿಸುತ್ತೇನೆಂದರು.

ಮುಂದಿನ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ನಗರಸಭೆ, ಪುರಸಭೆ, ಜಿಲ್ಲಾ ಪಾಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ೨೦೨೮ರ ವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಈ ಫಲಿತಾಂಶ ಬಿಜೆಪಿ ಕಾರ್ಯಕರ್ತರಲ್ಲಿ ಹುರುಪು ಮೂಡಿಸಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರಮಂಡಲ ಅಧ್ಯಕ್ಷ ಕೆ.ಎಸ್ ಪುಷ್ವರಾಜ್, ವಕ್ತಾರ ಹೆಚ್.ಎಸ್ ಪುಟ್ಟಸ್ವಾಮಿ, ಮಾಧ್ಯಮ ಪ್ರಮುಖ್ ದಿನೇಶ್ ಕೋಟೆ, ಮುಖಂಡರಾದ ಚಂದ್ರು, ಚಮಿನ್ ಉಪಸ್ಥಿತರಿದ್ದರು.

Over 25000 activists from the district attend BSY celebration

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...