Home namma chikmagalur chikamagalur ಸಂವಿಧಾನದ ಆಶಯ ಕಗ್ಗೊಲೆ ಮಾಡುತ್ತಿರುವ ಸಿಎಂ
chikamagalurHomeLatest Newsnamma chikmagalur

ಸಂವಿಧಾನದ ಆಶಯ ಕಗ್ಗೊಲೆ ಮಾಡುತ್ತಿರುವ ಸಿಎಂ

Share
Oplus_16908288
Share

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ವೋಟು ಡಕಾಯಿತಿ ಆಗಿದೆ ಎಂಬ ಪದ ಬಳಕೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಯ ಘನತೆಯನ್ನು ತಗ್ಗಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ದಕ್ಕೆ ತರುವುದರ ಜೊತೆಗೆ ಸಂವಿಧಾನದ ಆಶಯಗಳನ್ನು ಕಗ್ಗೊಲೆ ಮಾಡಲು ಹೊರಟಿದ್ದಾರೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನಬದ್ಧವಾದ ವ್ಯವಸ್ಥೆಯಲ್ಲಿ ಜಿಲ್ಲಾಡಳಿತ ಪೊಲೀಸ್ ಇಲಾಖೆ ಚುನಾವಣಾ ಆಯೋಗ ಮತ್ತು ನ್ಯಾಯಾಂಗ ವ್ಯವಸ್ಥೆಗಳ ಮೂಲಕ ಡಿ.ಎನ್. ಜೀವರಾಜ್ ಶಾಸಕರಾಗಿದ್ದಾರೆ. ಆದರೆ ಕಾಂಗ್ರೆಸ್ ಕಾರ್ಯಕರ್ತರು ಸಂವಿಧಾನ ಮತ್ತು ಅಂಬೇಡ್ಕರ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿರುವುದನ್ನು ಪ್ರಶ್ನಿಸಿ, ಜೀವರಾಜ್ ಅವರು ಹೈಕೋರ್ಟ್ ಮೊರೆ ಹೋಗಿ ಹೋರಾಟ ನಡೆಸಿದ್ದಾರೆ. ಜೀವರಾಜ್ ಅವರ ನಿರಂತರ ಹೋರಾಟದ ಫಲವಾಗಿ ನ್ಯಾಯಾಲಯ ಅಂಚೆ ಮತಗಳ ಮರು ಎಣಿಕೆಗೆ ಆದೇಶ ನೀಡಿತ್ತು. ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್ ನಡೆಸಿದ್ದ ಅಕ್ರಮ ಬಯಲಾಗಿದೆ. ಹೀಗಾಗಿ ತಮ್ಮ ಅಕ್ರಮ ಮುಚ್ಚಿ ಹಾಕಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಕಳೆದ ಮೂರು ವರ್ಷದಿಂದ ಕಾಂಗ್ರೆಸ್ ಅಧಿಕಾರದಲ್ಲಿದೆ. ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗಾಗಿ ಎರಡು ಬಾರಿ ಮನವಿ ಮಾಡಿದರು ಸರ್ಕಾರ ಏಕೆ ಅನುಮತಿ ಕೊಡಲಿಲ್ಲ ಎಂದು ಪ್ರಶ್ನಿಸಿದ ಅವರು, ಸರ್ಕಾರ ನಿಮ್ಮ ಕೈಯಲ್ಲಿದ್ದರೂ ಇಂದು ಬಿಜೆಪಿ ವಿರುದ್ಧ ಆರೋಪ ಹೊರಸಿ ಕಾಂಗ್ರೆಸ್ ಮುಖಂಡರು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಹೊರಟಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ 135 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ನಂತರ ಶೃಂಗೇರಿ ವಿಧಾ‌ನಸಭಾ ಕ್ಷೇತ್ರದ ಅಂಚೆ‌ ಮತಗಳ ಎಣಿಕೆ ವೇಳೆ 170 ತಿದ್ದಿರುವ ಮತಗಳ ಕಟ್ಟನ್ನು ರಾಜೇಗೌಡರ ಬಾಕ್ಸ್ ನಲ್ಲಿ ಏಕೆ ಹಾಕಿರಬಾರದು?. ಮೂರು ವರ್ಷದಿಂದಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದರೂ ಈಗ ಕಾಂಗ್ರೆಸ್ಸಿಗರು ತನಿಖೆಯ ನಾಟಕವಾಡುತ್ತಿದ್ದಾರೆ. ನೀವು ಯಾವ ತನಿಖೆ ಮಾಡಿದರೂ ನಾವು ಸಿದ್ಧರಿದ್ದೇವೆ. ಸತ್ಯ ಎಂದಿದ್ದರೂ ಸತ್ಯವಾಗಿಯೇ ಇರುತ್ತದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಹಿರೇಮಗಳೂರು ಪುಟ್ಟಸ್ವಾಮಿ, ಕುರುವಂಗಿ ವೆಂಕಟೇಶ್, ನರೇಂದ್ರ, ಈಶ್ವರಹಳ್ಳಿ ಮಹೇಶ್ ಮತ್ತಿತರರಿದ್ದರು.

The CM is killing the spirit of the Constitution.

Share

Leave a comment

Leave a Reply

Your email address will not be published. Required fields are marked *

Don't Miss

ಮತ ಎಣಿಕೆ ವಿಳಂಬ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಚಿಕ್ಕಮಗಳುರು: ರಾಜ್ಯ ಸರ್ಕಾರ ತಮ್ಮ ಶಾಸಕನ ಸೋಲಿನ ಭಯದಲ್ಲಿ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಸ್ಥಗಿತ ಗೊಳಿಸಿರುವ ಅನುಮಾನವಿದೆ. ಇದೇ ಕಾರಣದಿಂದಲೇ 1,822 ಮತಗಳ ಎಣಿಕೆಗೆ 12 ತಾಸು ಆದರೂ ಮುಗಿದಿಲ್ಲ...

ಕಗ್ಗಂಟಾಗಿ ಉಳಿದ ಅಂಚೆ ಮತಗಳ ಎಣಿಕೆ ಕಾರ್ಯ

ಚಿಕ್ಕಮಗಳೂರು: ಹೈಕೋರ್ಟ್ ನಿರ್ದೇಶನದಂತೆ ಶನಿವಾರ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ಕಾರ್ಯ ಪೂರ್ಣಗೊಳ್ಳದೆ. ತಡರಾತ್ರಿವರೆಗೂ ಕಗ್ಗಂಟಾಗಿ ಉಳಿದಿತ್ತು. 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ 201 ಮತಗಳಿಂದ ಜಯ...

Related Articles

ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ಗಳನ್ನು ಸಾಕ್ಷಿಯಾಗಿ ಪರಿಗಣಿಸಬೇಕು

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನೆಡೆದಿರುವ ಚುನಾವಣಾ ಅಕ್ರಮ ದೇಶದ ಇತಿಹಾಸದಲ್ಲಿ ಹಾಗೂ ಭವಿಷ್ಯದಲ್ಲಿ ಹಿಂದೆಂದಿಗೂ...

ಹುಲಿ ಗಣತಿಗಾಗಿ ಅಳವಡಿಸಲಾಗಿದ್ದ ಕ್ಯಾಮೆರಾ ಟ್ರ್ಯಾಪ್‌ ಕಳವು

ಚಿಕ್ಕಮಗಳೂರು: ಮುತ್ತೋಡಿ ಅರಣ್ಯ ವಲಯದ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆಗೆ ಶಾಕ್ ನೀಡುವಂತಹ...

ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಆಣೆ-ಪ್ರಮಾಣ

ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ತೀವ್ರ...

ಮೇಲ್ಮನವಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು...