Home namma chikmagalur chikamagalur ನಗರಸಭೆ ಪ್ರಭಾರಿ ಅಧ್ಯಕ್ಷರಾಗಿ ಲಲಿತಾ ರವಿನಾಯ್ಕ್ ಅಧಿಕಾರ ಸ್ವೀಕಾರ
chikamagalurHomeLatest Newsnamma chikmagalur

ನಗರಸಭೆ ಪ್ರಭಾರಿ ಅಧ್ಯಕ್ಷರಾಗಿ ಲಲಿತಾ ರವಿನಾಯ್ಕ್ ಅಧಿಕಾರ ಸ್ವೀಕಾರ

Share
Share

ಚಿಕ್ಕಮಗಳೂರು:ನಗರಸಭೆ ಪ್ರಭಾರಿ ಅಧ್ಯಕ್ಷರಾಗಿ ಲಲಿತಾ ರವಿನಾಯ್ಕ್ ಶುಕ್ರವಾ ರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷೆ ಶೀಲಾ ದಿನೇಶ್ ರಾಜೀನಾಮೆ ಅಂಗೀಕಾರದ ಹಿನ್ನೆಲೆ ಪ್ರಭಾರಿ ಅಧ್ಯಕ್ಷರಾಗಿ ಲಲಿತಾ ನಾಯ್ಕ್ ಅಧಿಕಾರ ವಹಿಸಿಕೊಂಡರು.

ಅಭಿನಂದನೆ ಸಲ್ಲಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಿಜೆಪಿ ಮತ್ತು ಜೆಡಿಎಸ್ ಮೈ ತ್ರಿಯಿಂದ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ಮುಂದಿನ ೧೦ ತಿಂಗಳ ಅವಧಿಗೆ ಎರಡು ಪಕ್ಷಗಳ ವರಿಷ್ಟರ ತೀರ್ಮಾನದಿಂದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಮಾತನಾಡಿ ಅಧಿಕಾರ ಶಾಶ್ವತವಲ್ಲ, ಅಧಿಕಾರದಲ್ಲಿದ್ದಾಗ ಎ? ಒಳ್ಳೆ ಕೆಲಸ ಮಾಡುತ್ತೇವೆ ಎಂಬುದು ಮುಖ್ಯ, ನೂತನವಾಗಿ ಆಯ್ಕೆಯಾಗಿರುವ ನಗರಸಭೆ ಪ್ರಭಾರಿ ಅಧ್ಯಕ್ಷರು ಸಿಕ್ಕಿರುವ ಕಡಿಮೆ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್, ನಗರಸಭೆ ಸದಸ್ಯರಾದ ಕವಿತಾ ಶೇಖರ್, ಮಾಜಿ ಉಪಾಧ್ಯಕ್ಷ ಕಾಯಿರವಿ, ಬಿಜೆಪಿ ಮುಖಂಡ ಹೆಚ್.ಕೆ.ಕೇಶವಮೂರ್ತಿ, ಕಾರ್ಯಕರ್ತರು, ಸಂಘ ಸಂಸ್ಥೆಯ ವರು ಉಪಸ್ಥಿತರಿದ್ದರು.

Lalita Ravinaik assumes office as acting president of the Municipal Council

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...