Home namma chikmagalur chikamagalur ಎಚ್‌ಡಿಎಫ್‌ಸಿ ಬ್ಯಾಂಕ್ ಎದುರು ಪ್ರತಿಭಟನೆ ನಿರತರ ಬಂಧನ
chikamagalurHomeLatest Newsnamma chikmagalur

ಎಚ್‌ಡಿಎಫ್‌ಸಿ ಬ್ಯಾಂಕ್ ಎದುರು ಪ್ರತಿಭಟನೆ ನಿರತರ ಬಂಧನ

Share
Share

ಚಿಕ್ಕಮಗಳೂರು: ರೈತನಿಗೆ ನೋಟಿಸ್ ಕೂಡ ನೀಡದೆ ಜೆಸಿಬಿ ವಶಕ್ಕೆ ಪಡೆದು ಹರಾಜು ಮಾಡಲಾಗಿದೆ ಎಂದು ಆರೋಪಿಸಿ ಎಚ್‌ಡಿಎಫ್‌ಸಿ ಬ್ಯಾಂಕ್ ಎದುರು ನಡೆಯುತ್ತಿರುವ ಪ್ರತಿಭಟನೆಗೆ ಮೂರು ತಿಂಗಳು ಪೂರ್ಣಗೊಂಡಿದ್ದು, ರೈತ ಮತ್ತು ದಲಿತ ಸಂಘಟನೆಗಳ ಮುಖಂಡರು ಬುಧವಾರ ಬ್ಯಾಂಕ್ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಮಂಜುನಾಥ್ ಕುಟುಂಬ ನಿರಂತರವಾಗಿ ಧರಣಿ ನಡೆಸಿದ್ದು, ಗುರುವಾರ ದಲಿತ ಮತ್ತು ರೈತ ಸಂಘಟನೆಗಳ ಮುಖಂಡರು ಬೆಂಬಲ ನೀಡಿ ಜಾಥಾ ನಡೆಸಿದರು. ನಗರದ ಹನುಮಂತಪ್ಪ ವೃತ್ತದಿಂದ ಎಚ್‌ಡಿಎಫ್‌ಸಿ ಬ್ಯಾಂಕ್ ತನಕ ಮೆರವಣಿಗೆ ನಡೆಸಿ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕಿನ ಗೌಡನಹಳ್ಳಿ ವಾಸಿ ಮಂಜುನಾಥ್ ಅವರು ಜೆಸಿಬಿ ಖರೀದಿಸಲು ನಗರದ ಎಂ.ಜಿ. ರಸ್ತೆಯಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ 2023ರ ಡಿ. 12ರಂದು ₹29 ಲಕ್ಷ ಸಾಲ ಪಡೆದಿದ್ದರು. ಒಟ್ಟು ₹36 ಲಕ್ಷ ಬಂಡವಾಳ ಹೂಡಿದ್ದರು. ಸಾಲದ ಕಂತು 58 ತಿಂಗಳು ಇದ್ದು, ಪ್ರತಿ ತಿಂಗಳು ₹65,065 ಪಾವತಿಸಲು ಒಪ್ಪಿಸಿದ್ದರು. ಅದರಂತೆ ಸಾಲದ ಕಂತು ₹17.50 ಲಕ್ಷ ಪಾವತಿಸಿದ್ದಾರೆ. ಆದರೆ, ಸಮಯಕ್ಕೆ ಸರಿಯಾಗಿ ಕಂತು ತೀರಿಸಲು ಸಾಧ್ಯವಾಗಿಲ್ಲ ಎಂಬ ನೆಪದಲ್ಲಿ ಜೆಸಿಬಿಯನ್ನು ಜಪ್ತಿ ಮಾಡಿದ್ದಾರೆ ಎಂದು ದೂರಿದರು.

ಬ್ಯಾಂಕಿಗೆ ಹೋಗಿ ವಿಚಾರಿಸಿದರೆ ₹50 ಲಕ್ಷ ಪಾವತಿಸಿದರೆ ಜೆಸಿಬಿ ವಾಪಸ್ಸು ಕೊಡುವುದಾಗಿ ತಿಳಿಸಿದ್ದಾರೆ. ಖಾಸಗಿ ಸಾಲ ಪಡೆದು ₹50 ಲಕ್ಷ ಹೊಂದಿಸಿ ಬ್ಯಾಂಕಿಗೆ ಪಾವತಿಸಲು ಮುಂದಾಗಿದ್ದು, ಅಧಿಕಾರಿಗಳು ಜೆಸಿಬಿ ಎಲ್ಲಿದೆ ಎಂಬುದನ್ನು ತಿಳಿಸಲಿಲ್ಲ ಎಂದು ಹೇಳಿದರು.

ಜೆಸಿಬಿ ಹರಾಜು ಮಾಡಿ ಸಾಲದ ಮೊತ್ತಕ್ಕೆ ಜಮೆ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಸಾಲ ಮರುಪಾವತಿಗೆ ರೈತ ಸಿದ್ದವಿದ್ದರೂ ಅಧಿಕಾರಿಗಳು ಹರಾಜು ಮಾಡಿದ್ದಾರೆ. ಇದರಿಂದ ಮಂಜುನಾಥ್ ಕುಟುಂಬಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಮೂರು ತಿಂಗಳಿಂದ ಮಂಜುನಾಥ್ ಕುಟುಂಬ ಬ್ಯಾಂಕ್ ಎದುರು ಧರಣಿ ನಡೆಸುತ್ತಿದೆ. ಆದರೆ, ಬ್ಯಾಂಕ್ ಅಧಿಕಾರಿಗಳಾಗಲಿ, ಜಿಲ್ಲಾಧಿಕಾರಿಯಾಗಲಿ, ಜಿಲ್ಲೆಯ ಯಾವುದೇ ಜನಪ್ರತಿನಿಧಿಯಾಗಲಿ ಮಂಜುನಾಥ್ ಅವರಿಗೆ ಆಗಿರುವ ಅನ್ಯಾಯ ಕೇಳಲಿಲ್ಲ. ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ್ಯಾಯ ಸಿಗುವ ತನಕ ಧರಣಿ ಬಿಡುವುದಿಲ್ಲ ಎಂದು ಮಂಜುನಾಥ್ ಕುಟುಂಬ ಹೇಳುತ್ತಿದೆ. ಅವರಿಗೆ ನ್ಯಾಯ ದೊರಕಿಸುವ ಪ್ರಯತ್ನವನ್ನು ಜಿಲ್ಲಾಧಿಕಾರಿ, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಮಾಡಬೇಕು ಎಂದು ಆಗ್ರಹಿಸಿದರು.

ದಲಿತ ಮುಖಂಡರಾದ ಮರ್ಲೆ ಅಣ್ಣಯ್ಯ, ದಂಟರಮಕ್ಕಿ ಶ್ರೀನಿವಾಸ್, ಸುನಿಲ್‌ಕುಮಾರ್, ಉದ್ದೇಗೌಡ, ಕೃಷ್ಣಮೂರ್ತಿ, ಛಲವಾದಿ ರಘು, ಕೆಂಪಮ್ಮ, ರಾಕೇಶ್ ಭಾಗವಹಿಸಿದ್ದರು.

Protesters arrested in front of HDFC Bank

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...