ಮೂಡಿಗೆರೆ: ಅತಿ ವೇಗದಲ್ಲಿ ಬಂದ ಟಿಪ್ಪರ್ ಬೈಕ್ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಚರ್ಚ್ ಬಳಿ ನಡೆದಿದೆ.
ಮೃತ ಯುವಕ ಆಂಧ್ರಪ್ರದೇಶ ಮೂಲದವನಾಗಿದ್ದು, ಬೈಕ್ನಲ್ಲಿ ಬೆಡ್ಶೀಟ್, ರಗ್ಗು ಹಾಗೂ ಟವಲ್ಗಳನ್ನು ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿದ್ದ ಎನ್ನಲಾಗಿದೆ.
ವ್ಯಾಪಾರಕ್ಕಾಗಿ ಸಂಚರಿಸುತ್ತಿದ್ದ ವೇಳೆ ಸಂಭವಿಸಿದ ಈ ಭೀಕರ ಅಪಘಾತದಿಂದಾಗಿ ಯುವಕನ ದೇಹ ಛಿದ್ರಗೊಂಡು ರಸ್ತೆಯಲ್ಲೇ ಪ್ರಾಣಬಿಟ್ಟಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಗೋಣಿಬೀಡು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ಟಿಪ್ಪರ್ ಚಾಲಕನ ವಿರುದ್ಧ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Biker dies on the spot after tipper hits bike
Leave a comment