Home namma chikmagalur chikamagalur ಅರಣ್ಯದಲ್ಲಿ ಅಪರಿಚಿತ ವೃದ್ಧನ ಶವ ಪತ್ತೆ 
chikamagalurCrime NewsHomeLatest Newsnamma chikmagalur

ಅರಣ್ಯದಲ್ಲಿ ಅಪರಿಚಿತ ವೃದ್ಧನ ಶವ ಪತ್ತೆ 

Share
Share
ಕೊಟ್ಟಿಗೆಹಾರ : ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಅರಣ್ಯ ಪ್ರದೇಶದಲ್ಲಿ ಸುಮಾರು 65 ರಿಂದ 70 ವರ್ಷದೊಳಗಿನ ಅಪರಿಚಿತ ವೃದ್ಧನ ಶವ ಪತ್ತೆಯಾಗಿದೆ.
ಕಳೆದ ಮೂರು–ನಾಲ್ಕು ದಿನಗಳಿಂದ ರಸ್ತೆ ಬದಿಯ ಅಂಗಡಿಗಳ ಬಳಿ ಈ ವೃದ್ಧ ಅಲೆದಾಡುತ್ತಿದ್ದು, ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದನೆಂದು ಸ್ಥಳೀಯರು ತಿಳಿಸಿದ್ದಾರೆ. ಊರು ಯಾವುದು ಎಂದು ಕೇಳಿದಾಗ “ಮಂಡ್ಯ” ಎಂದು ಹೇಳುತ್ತಿದ್ದನೆಂದು ಅಂಗಡಿ ಯುವಕರು ಮಾಹಿತಿ ನೀಡಿದ್ದಾರೆ.
ಗ್ರಾಮ ಪಂಚಾಯಿತಿ ತ್ಯಾಜ್ಯ ವಿಲೇವಾರಿ ಸ್ಥಳದ ಬಳಿ ಬೇಲಿ ನಿರ್ಮಾಣ ಕಾರ್ಯ ನಡೆಸುತ್ತಿದ್ದ ಸ್ಥಳೀಯರು ಅರಣ್ಯದ ಒಳಭಾಗದಲ್ಲಿ ಶವವನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ಐ ದಿಲೀಪ್ ಕುಮಾರ್ ಪರಿಶೀಲನೆ ನಡೆಸಿದರು.
ಪ್ರಾಥಮಿಕ ತನಿಖೆಯಲ್ಲಿ ಮೃತದೇಹದ ಮೇಲೆ ಯಾವುದೇ ಹಲ್ಲೆ ಅಥವಾ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಸಮಾಜ ಸೇವಕ ಆರಿಫ್ ಅವರ ಆಂಬುಲೆನ್ಸ್ ಮೂಲಕ ಶವವನ್ನು ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ಹಾಗೂ ಗುರುತು ಪತ್ತೆ ಕಾರ್ಯ ಕೈಗೊಳ್ಳಲಾಗಿದೆ.
ಈ ನಡುವೆ, ಅರಣ್ಯದ ಒಳಭಾಗದಿಂದ ರಸ್ತೆವರೆಗೆ ಶವವನ್ನು ಸ್ವತಃ ಹೊತ್ತು ತಂದ ಪಿಎಸ್ಐ ದಿಲೀಪ್ ಕುಮಾರ್ ಅವರ ಮಾನವೀಯ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಕುರಿತು ಬಣಕಲ್ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.
Body of unidentified elderly man found in forest
Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...