Home namma chikmagalur chikamagalur ಬಾಲ್ಯ ವಿವಾಹ ತಡೆಯಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ
chikamagalurCrime NewsHomeLatest Newsnamma chikmagalur

ಬಾಲ್ಯ ವಿವಾಹ ತಡೆಯಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ

Share
Share

ಚಿಕ್ಕಮಗಳೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೇನಹಳ್ಳಿ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಬಾಲ್ಯ ವಿವಾಹ ತಡೆಯಲು ಹೋದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಘಟನೆ ನಡೆದಿದೆ.

ಕಾಲೋನಿಯಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಕ್ಕಪಡೆ ಅಧಿಕಾರಿಗಳು ಹಾಗೂ ಮಲ್ಲೇನಹಳ್ಳಿ ಪಿಡಿಒ ಮತ್ತು ಸಿಬ್ಬಂದಿ ವಿವಾಹವನ್ನು ತಡೆಯಲು ಸ್ಥಳಕ್ಕೆ ಧಾವಿಸಿದ್ದರು.

ಈ ವೇಳೆ ಸ್ಥಳದಲ್ಲಿ ಜನಸಮೂಹ ಜಮಾಯಿಸಿ ಗಲಾಟೆಯಾಗುವ ಮುನ್ಸೂಚನೆ ಸಿಕ್ಕ ತಕ್ಷಣ, ಇಲಾಖಾ ವಾಹನದಲ್ಲಿ ಭದ್ರತೆಗೆಂದು ಗ್ರಾಮಾಂತರ ಠಾಣೆಯ ಸಬ್ ಇನ್ಸೆಕ್ಟರ್ ರಘುನಾಥ್ ಎಸ್.ವಿ. ಹಾಗೂ ಜೀಪ್ ಚಾಲಕ ಸುನಿಲ್ ಕುಮಾರ್ (ಸಿಪಿಸಿ-75) ಸ್ಥಳಕ್ಕೆ ತಲುಪಿದ್ದಾರೆ.

ಅಧಿಕಾರಿಗಳು ಸಾರ್ವಜನಿಕರಿಗೆ ಬಾಲ್ಯ ವಿವಾಹದ ಕಾನೂನುಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾಗ, ಅಲ್ಲಿಯೇ ಇದ್ದ ಸಚಿನ್ (29) ಎಂಬಾತ ಏಕಾಏಕಿ ಸಬ್ ಇನ್ಸೆಕ್ಟರ್ ರಘುನಾಥ್ ಅವರನ್ನು ತಡೆದು, ಕರ್ತವ್ಯಕ್ಕೆ ಅಡ್ಡಿಪಡಿಸಿ ದೂಡಿದ್ದಾನೆ. ಇದನ್ನು ತಡೆಯಲು ಮುಂದಾದ ಜೀಪ್ ಚಾಲಕ ಸುನಿಲ್ ಕುಮಾರ್ ಅವರ ಕೆನ್ನೆಗೆ ಹಾಗೂ ಮೈಕೈಗೆ ಹೊಡೆದು ಹಲ್ಲೆ ನಡೆಸಿದ್ದಲ್ಲದೆ, ಅವರು ಧರಿಸಿದ್ದ ಪೊಲೀಸ್ ಸಮವಸ್ತ್ರವನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಹಲ್ಲೆಯ ಬಳಿಕ ಸ್ಥಳದಿಂದ ಓಡಿಹೋಗಲು ಯತ್ನಿಸಿದ ಆರೋಪಿ ಸಚಿನ್, ನಿಯಂತ್ರಣ ತಪ್ಪಿ ಕಾಲು ಜಾರಿ ಕೆಳಗೆ ಬಿದ್ದ ಪರಿಣಾಮ ಆತನ ತಲೆಗೂ ಬಲವಾದ ಗಾಯವಾಗಿದೆ. ಸದ್ಯ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಸುನಿಲ್ ಕುಮಾ‌ರ್ ಅವರನ್ನು ಚಿಕಿತ್ಸೆಗಾಗಿ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು. ಕರ್ತವ್ಯ ನಿರತ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ದರ್ಪ ತೋರಿದ ಸಚಿನ್ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ.

Police personnel attacked while trying to prevent child marriage

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...