Home namma chikmagalur chikamagalur ಲಾರಿ ಪಂಚರ್ ಹಾಕುತ್ತಿದ್ದ ಕಾರ್ಮಿಕ ಸ್ಥಳದಲ್ಲೇ ಸಾವು
chikamagalurCrime NewsHomeLatest Newsnamma chikmagalur

ಲಾರಿ ಪಂಚರ್ ಹಾಕುತ್ತಿದ್ದ ಕಾರ್ಮಿಕ ಸ್ಥಳದಲ್ಲೇ ಸಾವು

Share
Share

ಚಿಕ್ಕಮಗಳೂರು: ನಗರದ 60 ಅಡಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಲಾರಿಗೆ ಪಂಚರ್ ಹಾಕುತ್ತಿದ್ದ ಗ್ಯಾರೇಜ್ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೊಹಮ್ಮದ್ ಹಿಮರೂಜ್ (47) ಎಂಬುವರೇ ದುರ್ಮರಣಕ್ಕೀಡಾದ ದುರದೃಷ್ಟಕರ ವ್ಯಕ್ತಿ. ಹಿಮರೂಜ್ ಅವರು ಎಂದಿನಂತೆ ತಮ್ಮ ಪಂಚರ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಗ್ಯಾರೇಜ್‌ಗೆ ಬಂದ ಭಾರತ್ ಬೆಂಜ್ ಲಾರಿಯೊಂದಕ್ಕೆ ಅವರು ಪಂಚರ್ ಹಾಕುತ್ತಾ ನಿಂತಿದ್ದರು.

ಇದೇ ಸಮಯದಲ್ಲಿ ಮಹೀಂದ್ರಾ ಪಿಕ್‌ಅಪ್ (KA 15 7330) ವಾಹನದ ಚಾಲಕ ನಯಾಜ್ ಎಂಬಾತ ತನ್ನ ವಾಹನವನ್ನು ತೀವ್ರ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ರಿವರ್ಸ್ ತೆಗೆದಿದ್ದಾನೆ. ಪರಿಣಾಮ, ಲಾರಿಯ ಹಿಂಭಾಗದಲ್ಲಿ ಕೆಲಸ ಮಾಡುತ್ತಿದ್ದ ಹಿಮರೂಜ್ ಅವರಿಗೆ ಪಿಕ್ಅಪ್ ವಾಹನವು ಜೋರಾಗಿ ಡಿಕ್ಕಿ ಹೊಡೆದು, ಅವರ ಮೇಲೆಯೇ ಹರಿದಿದೆ.

ಅಪಘಾತದಿಂದ ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಹಿಮರೂಜ್ ಅವರನ್ನು ತಕ್ಷಣವೇ ಅಲ್ಲಿದ್ದ ಲಾರಿ ಚಾಲಕ ಹಾಗೂ ಸ್ಥಳೀಯ ಸಾರ್ವಜನಿಕರು ಆಟೋ ಒಂದರಲ್ಲಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಹಿಮರೂಜ್ ಕೊನೆಯುಸಿರೆಳೆದಿದ್ದು, ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ದುರ್ಘಟನೆಗೆ ಕಾರಣವಾದ ಪಿಕ್‌ಅಪ್ ವಾಹನ ಹಾಗೂ ಅದರ ಬೇಜವಾಬ್ದಾರಿ ಚಾಲಕ ನಯಾಜ್ ವಿರುದ್ಧ ಮೃತರ ಪತ್ನಿ ಶಾಬಿನಾ ನಾಜ್ ಸಂಚಾರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Worker who was fixing a lorry puncture dies on the spot

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...