Home namma chikmagalur Banagalore ಭದ್ರಾ ಹಿನ್ನೀರಿನ ಪ್ರದೇಶದಲ್ಲಿ ಆನೆಗಳ ಹಿಂಡು ಪ್ರತ್ಯಕ್ಷ
BanagaloreHomeLatest Newsnamma chikmagalur

ಭದ್ರಾ ಹಿನ್ನೀರಿನ ಪ್ರದೇಶದಲ್ಲಿ ಆನೆಗಳ ಹಿಂಡು ಪ್ರತ್ಯಕ್ಷ

Share
Share

ಎನ್.ಆರ್. ಪುರ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ನರಸಿಂಹರಾಜಪುರ ತಾಲೂಕಿನ ಭದ್ರಾ ಹಿನ್ನೀರಿನ ಪ್ರದೇಶದಲ್ಲಿ ಆನೆಗಳ ಹಿಂಡು ಪ್ರತ್ಯಕ್ಷಗೊಂಡಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.

ಲಿಂಗಾಪುರ, ಮುದುಕೂರು ಹಾಗೂ ಚುಂಚನಮನೆ ಸುತ್ತಮುತ್ತಲಿನ ಭಾಗಗಳಲ್ಲಿ ಏಕಕಾಲಕ್ಕೆ ಸುಮಾರು 25ಕ್ಕೂ ಹೆಚ್ಚು ಆನೆಗಳು ಬೀಡುಬಿಟ್ಟಿದ್ದು, ಸಾರ್ವಜನಿಕರು, ರೈತರು ಮತ್ತು ಮೀನುಗಾರರು ಭೀತಿಯಲ್ಲಿ ದಿನ ಕಳೆಯುವಂತಾಗಿದೆ.

ಈ ಬೃಹತ್ ಆನೆಗಳ ಹಿಂಡಿನ ಸಂಚಾರದಿಂದಾಗಿ ತೋಟ ಹಾಗೂ ಗದ್ದೆಗಳಲ್ಲಿನ ಅಪಾರ ಪ್ರಮಾಣದ ಬೆಳೆ ನಾಶವಾಗುವ ಭೀತಿ ಎದುರಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುವ ಆತಂಕದಲ್ಲಿ ರೈತರಿದ್ದಾರೆ. ಜಲಮೂಲಗಳ ಆಸುಪಾಸಿನಲ್ಲಿ ಆನೆಗಳು ಸತತವಾಗಿ ಓಡಾಡುತ್ತಿರುವುದರಿಂದ ದೈನಂದಿನ ಜೀವನಕ್ಕೆ ಭಾರಿ ಅಡಚಣೆಯಾಗಿದ್ದು, ಇಡೀ ಭಾಗದ ಜನರಿಗೆ ದಿಕ್ಕೇ ತೋಚದಂತಾಗಿದೆ.

ಪ್ರಸ್ತುತ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಈ ಭಾಗದ ಸಾರ್ವಜನಿಕರು ಹಾಗೂ ಮೀನುಗಾರರು ತೀರ ಪ್ರದೇಶಗಳಲ್ಲಿ ಓಡಾಡುವಾಗ ಅತ್ಯಂತ ಎಚ್ಚರಿಕೆ ವಹಿಸಬೇಕಾಗಿದೆ. ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣವೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸ್ಥಳಕ್ಕೆ ಸಿಬ್ಬಂದಿಯನ್ನು ನಿಯೋಜಿಸಬೇಕು ಎನ್ನುವ ಒತ್ತಾಯ ಸ್ಥಳೀಯರಿಂದ ಕೇಳಿ ಬಂದಿದೆ.

A herd of elephants was spotted in the Bhadra backwaters area.

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...