Home namma chikmagalur chikamagalur ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಭನ್ವರ್ ಸಿಂಗ್ ಮೀನಾ ನೇಮಕ
chikamagalurHomeLatest Newsnamma chikmagalur

ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಭನ್ವರ್ ಸಿಂಗ್ ಮೀನಾ ನೇಮಕ

Share
Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಆಡಳಿತದ ಸಾರಥಿ ಬದಲಾಗಿದ್ದು, ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳ ವರ್ಗಾವಣೆಯ ಮಹತ್ವದ ಅದೇಶ ಹೊರಡಿಸಿದೆ. ಜಿಲ್ಲೆಯ ಹಾಲಿ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಕರ್ನಾಟಕ ರಾಜ್ಯ ಏಡ್ಸ್‌ ತಡೆಗಟ್ಟುವಿಕೆ ಸೊಸೈಟಿಯ ಒಂಬುಡ್ಸ್‌ ಮನ್ ಹುದ್ದೆಗೆ ಸ್ಥಾನಪಲ್ಲಟ ಮಾಡಲಾಗಿದ್ದು, ಡಿಪಿಎಆರ್ ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಕಳೆದ ಜನವರಿ ತಿಂಗಳಷ್ಟೇ ಮೀನಾ ನಾಗರಾಜ್ ಅವರಿಂದ ತೆರವಾದ ಸ್ಥಾನಕ್ಕೆ ಹೊಸ ಡಿಸಿಯಾಗಿ ಅಧಿಕಾರ ವಹಿಸಿಕೊಂಡಿದ್ದ 2016ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಎನ್.ಎಂ. ನಾಗರಾಜ್ ಅವರ ಈ ದಿಢೀರ್ ವರ್ಗಾವಣೆಯು ಸಾಕಷ್ಟು ರಾಜಕೀಯ ಹಾಗೂ ಆಡಳಿತಾತ್ಮಕ ಚರ್ಚೆಗಳಿಗೆ ವೇದಿಕೆ ಒದಗಿಸಿದೆ.

ಇನ್ನು ತೆರವಾದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹುದ್ದೆಗೆ ನೂತನ ಸಾರಥಿಯಾಗಿ ಭನ್ವರ್ ಸಿಂಗ್ ಮೀನಾ ಅವರನ್ನು ನೇಮಕ ಮಾಡಲಾಗಿದೆ. ಸದ್ಯ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (ಸಿಇಒ) ಕಾರ್ಯನಿರ್ವಹಿಸುತ್ತಿರುವ 2017ರ ಬ್ಯಾಚ್‌ ನ ಐಎಎಸ್ ಅಧಿಕಾರಿ ಭನ್ವ‌ರ್ ಸಿಂಗ್ ಮೀನಾ ಅವರಿಗೆ ತಕ್ಷಣವೇ ಚಿಕ್ಕಮಗಳೂರಿನ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ.

ಶೃಂಗೇರಿ ಕ್ಷೇತ್ರದ ಮರು ಮತಗಳ ಎಣಿಕೆ ಪ್ರಕರಣದಲ್ಲಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದ ನಾಗರಾಜ್ ಕೇವಲ ಆರು ತಿಂಗಳು ಮಾತ್ರ ಜಿಲ್ಲಾಧಿಕಾರಿ ಯಾಗಿದ್ದರು.

Bhanwar Singh Meena appointed as new District Collector for the district

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...