Home namma chikmagalur chikamagalur ಕಾಮೇನಹಳ್ಳಿ ಮೀಸಲು ಅರಣ್ಯದಲ್ಲಿ ಕ್ಯಾಮೆರಾ ಕಳವು
chikamagalurHomeLatest Newsnamma chikmagalur

ಕಾಮೇನಹಳ್ಳಿ ಮೀಸಲು ಅರಣ್ಯದಲ್ಲಿ ಕ್ಯಾಮೆರಾ ಕಳವು

Share
Share

ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳ ಮೇಲೆ ಕಣ್ಣಿಡಲು ಅಳವಡಿಸಲಾಗಿದ್ದ ಅತ್ಯಾಧುನಿಕ ಕ್ಯಾಮೆರಾಗಳನ್ನೇ ಖದೀಮರು ಹೊತ್ತೊಯ್ದಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿ ಶಾಖೆಯ ಪಾದಮನೆ ಗಸ್ತು ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಹುಲಿ ಗಣತಿಯ ಅತ್ಯಂತ ಪ್ರಮುಖ ಕಾರ್ಯಾಚರಣೆಗಾಗಿ ಅರಣ್ಯ ಇಲಾಖೆಯಿಂದ ಒಟ್ಟು ನಾಲ್ಕು ಕ್ಯಾಮೆರಾ ಟ್ರ್ಯಾಪ್‌ಗಳನ್ನು ನೀಡಲಾಗಿತ್ತು. ಈ ಪೈಕಿ ಕಾಮೇನಹಳ್ಳಿ ಮೀಸಲು ಅರಣ್ಯದ ಸರ್ವೆ ನಂಬರ್ 1ರ ವಲಯದಲ್ಲಿ ಅಳವಡಿಸಲಾಗಿದ್ದ ಎರಡು ದುಬಾರಿ ಕ್ಯಾಮೆರಾಗಳನ್ನು ದುಷ್ಕರ್ಮಿಗಳು ಕಳ್ಳತನ ಮಾಡಿದ್ದಾರೆ.

ಗಸ್ತು ಅರಣ್ಯ ಪಾಲಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗೀತಾ ಬಿ.ಎಸ್. ಅವರು ಕ್ಯಾಮೆರಾಗಳನ್ನು ಪರಿಶೀಲಿಸಲು ತೆರಳಿದಾಗ ಈ ಕಳ್ಳತನ ನಡೆದಿರುವುದು ಸ್ಪಷ್ಟವಾಗಿದೆ. ಕಾಣೆಯಾದ ಕ್ಯಾಮೆರಾಗಳಿಗಾಗಿ ಅರಣ್ಯ ಸಿಬ್ಬಂದಿ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿಲ್ಲ.

ಕಳವಾಗಿರುವ ಎರಡು ಕ್ಯಾಮೆರಾಗಳ ಒಟ್ಟು ಮೌಲ್ಯ ಸುಮಾರು 40,000 ರೂಪಾಯಿಗಳಾಗಿದ್ದು, ಈ ಕುರಿತು ಅರಣ್ಯ ಪಾಲಕಿ ಸಖರಾಯಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮೀಸಲು ಅರಣ್ಯದೊಳಗೆ ನುಗ್ಗಿ ಇಲಾಖೆಯ ಕ್ಯಾಮೆರಾಗಳನ್ನೇ ಕದ್ದ ಕಳ್ಳರ ಪತ್ತೆಗಾಗಿ ಜಾಲ ಬೀಸಿದ್ದಾರೆ.

Camera stolen in Kamenahalli reserve forest

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...