Home namma chikmagalur chikamagalur ಚಿಕಿತ್ಸೆ ಸಿಗದೆ 24 ಗಂಟೆಗಳ ಕಾಲ ಆಂಬುಲೆನ್ಸ್‌ನಲ್ಲೇ ನರಕಯಾತನೆ
chikamagalurHomeLatest Newsnamma chikmagalur

ಚಿಕಿತ್ಸೆ ಸಿಗದೆ 24 ಗಂಟೆಗಳ ಕಾಲ ಆಂಬುಲೆನ್ಸ್‌ನಲ್ಲೇ ನರಕಯಾತನೆ

Share
Share

ಚಿಕ್ಕಮಗಳೂರು: ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಹಾಗೂ ಅತ್ಯಂತ ಕರುಣಾಜನಕ ಘಟನೆಯೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನಿಗೆ ವಿವಿಧ ಆಸ್ಪತ್ರೆಗಳಲ್ಲಿ ಬೆಡ್ ಮತ್ತು ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಬರೋಬ್ಬರಿ 24 ಗಂಟೆಗಳ ಕಾಲ ಆಂಬುಲೆನ್ಸ್‌ನಲ್ಲೇ ನರಕಯಾತನೆ ಅನುಭವಿಸಿದ್ದಾನೆ.

ಆಲ್ಲೂರು ಪಟ್ಟಣದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರವಿ, ಅರೆನೂರು ಗ್ರಾಮದ ಬಳಿ ಸೋಮವಾರ ಬೈಕ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣ ಆತನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿನ ವೈದ್ಯರು ಮಂಗಳೂರಿಗೆ ರೆಫರ್ ಮಾಡಿದ್ರು. ಆದರೆ ಮಂಗಳೂರಿನ ಫಾದರ್ ಮುಲ್ಲರ್ ಹಾಗೂ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲಿ ಐಸಿಯು ಬೆಡ್ ಹಾಗೂ ವೈದ್ಯರು ಇಲ್ಲ ಎಂಬ ಕಾರಣ ನೀಡಿ ಕೈತೊಳೆದುಕೊಳ್ಳಲಾಗಿದೆ.

ಅಲ್ಲಿಂದ ಮಂಗಳೂರಿನ ಮುಕ್ಕಾದಲ್ಲಿರುವ ಶ್ರೀನಿವಾಸ ಆಸ್ಪತ್ರೆಗೆ ಕರೆದೊಯ್ದರೆ, ಅಲ್ಲಿನ ಸಿಬ್ಬಂದಿ ಮೊದಲು 80 ಸಾವಿರ ರೂಪಾಯಿ ಹಣ ಕಟ್ಟಿ, ನಂತರ ಚಿಕಿತ್ಸೆ ಆರಂಭಿಸುವ ಷರತ್ತು ವಿಧಿಸಿದ್ದಾರೆ ಬಡ ಕುಟುಂಬದ ಬಳಿ ಅಷ್ಟು ದೊಡ್ಡ ಮೊತ್ತದ ಹಣವಿಲ್ಲದ ಕಾರಣ, ಅನಿವಾರ್ಯವಾಗಿ ಆಂಬುಲೆನ್ಸ್ ನಲ್ಲಿ ಗಾಯಾಳು ಯುವಕನನ್ನು ಮತ್ತೆ ಆಲ್ಲೂರಿಗೆ ವಾಪಸ್ ಕರೆ ತರಲಾಗಿದೆ.

ಮಂಗಳೂರಿನಲ್ಲಿ ಅತ್ಯುತ್ತಮ ಚಿಕಿತ್ಸೆ ಸಿಗುತ್ತದೆ ಎಂದು ಬರೋಬ್ಬರಿ 150 ಕಿಲೋಮೀಟರ್ ತೆರಳಿದ್ರು ಅತ್ತ ಚಿಕಿತ್ಸೆಯೂ ಸಿಗದೆ, ಇತ್ತ ಆಸ್ಪತ್ರೆಗಳಲ್ಲಿ ಬೆಡ್‌ಗಳೂ ಇಲ್ಲದೆ ಗಾಯಾಳು ಯುವಕ ಆಂಬುಲೆನ್ಸ್‌ನಲ್ಲೇ ನೋವು ಅನುಭವಿಸುತ್ತಿರುವುದನ್ನು ಕಂಡು ಇಡೀ ಬಡ ಕುಟುಂಬ ಅಸಹಾಯಕರಾಗಿ ಕಣ್ಣೀರು ಹಾಕುತ್ತಿತ್ತು. ಇಡೀ ರಾತ್ರಿ ಮತ್ತು ಹಗಲು ಆಂಬುಲೆನ್ಸ್‌ನಲ್ಲಿ ನರಕಯಾತನೆ ಅನುಭವಿಸಿದ ಆ ಜೀವ, ಇಂದಿನ ನಾಗರಿಕ ಸಮಾಜ ಮತ್ತು ವೈದ್ಯಕೀಯ ಲೋಕದ ಅಮಾನವೀಯತೆಗೆ ಹಿಡಿದ ಕನ್ನಡಿಯಾಗಿದೆ.

24 hours of hell in an ambulance without treatment

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...