Home namma chikmagalur chikamagalur ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ಜಟಾಪಟಿ
chikamagalurHomeLatest Newsnamma chikmagalur

ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ಜಟಾಪಟಿ

Share
Share

ಚಿಕ್ಕಮಗಳೂರು: ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಜಟಾಪಟಿ ನಡೆದಿದ್ದು, ಕಾರ್ಯಕರ್ತರು ಗುರುವಾರ ಕೈ ಮಿಲಾಯಿಸಿ ಪರಸ್ಪರ ಧಿಕ್ಕಾರ ಕೂಗಿದರು.

ನಗರದ ಹೊರ ವಲಯದ ರಾಂಪುರ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ ವಿಚಾರದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ನಡುವೆ ಜಟಾಪಟಿ ಆರಂಭವಾಗಿದೆ.

ಗುರುವಾರ ರಸ್ತೆ ಕಾಮಗಾರಿ ವೀಕ್ಷಣೆ ಮಾಡಲು ತೆರಳಿದ್ದ ಸಿ.ಟಿ.ರವಿ ಅವರನ್ನು ಅಡ್ಡಗಟ್ಟಿದ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

’20 ವರ್ಷಗಳಿಂದ ಶಾಸಕರಾಗಿದ್ದ ಅವಧಿಯಲ್ಲಿ ರಸ್ತೆ ಅಭಿವೃದ್ಧಿ ಮಾಡಲಿಲ್ಲ. ಈಗ ಕಾಂಗ್ರೆಸ್ ಶಾಸಕ ಎಚ್.ಡಿ.ತಮ್ಮಯ್ಯ ಆಸಕ್ತಿಯಿಂದ ಕಾಮಗಾರಿ ಕಾರ್ಯಾದೇಶವಾಗಿದೆ. ಈಗಲೂ ಕಾಮಗಾರಿ ಆರಂಭಿಸಲು ವಿಳಂಬ ಮಾಡಲಾಗುತ್ತಿದ್ದು, ಇದಕ್ಕೆ ಸಿ.ಟಿ.ರವಿ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರಂಭವಾಗಲು ವಿಳಂಬ ಆಗುವುದಕ್ಕೆ ಕಾಂಗ್ರೆಸ್ ಕಾರಣ. 2022ರಲ್ಲಿ ಮಂಜೂರಾಗಿದ್ದ ಕಾಮಗಾರಿಗೆ ಈಗ ಕಾರ್ಯಾದೇಶ ನೀಡಲಾಗಿದೆ’ ಎಂದು ಸಿ.ಟಿ.ರವಿ ಹೇಳಿದರು.

ಅಷ್ಟರಲ್ಲಿ ಎರಡೂ ಕಡೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪರಸ್ಪರ ಧಿಕ್ಕಾರ ಕೂಗಿದರು. ನೂಕಾಟ, ತಳ್ಳಾಟ ನಡುವೆ ಕೈ ಕೈ ಮಿಲಾಯಿಸಿದರು. ಸ್ಥಳಕ್ಕೆ ಬಂದ ಪೊಲೀಸರು ಇರಡೂ ಕಡೆಯ ಕಾರ್ಯಕರ್ತರ ನಡುವೆ ನಿಂತು ಪರಿಸ್ಥಿತಿ ನಿಭಾಯಿಸಲು ಪರದಾಡಿದರು.

‘ಮಳೆಗಾಲ ಹತ್ತಿರವಾಗುತ್ತಿದ್ದರೂ ಕಾಮಗಾರಿ ಆರಂಭಿಸಲು ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಊರಿನ ಕಡೆಯಿಂದ ಕಾಮಗಾರಿ ಆರಂಭಿಸದೆ, ಕಾಡಿನ ಕಡೆಯಿಂದ ಕಾಮಗಾರಿ ಆರಂಭಿಸಲಾಗಿತ್ತು. ಸಿ.ಟಿ.ರವಿ ಅವರ ಸಂಬಂಧಿಯೇ ಗುತ್ತಿಗೆದಾರರಾಗಿದ್ದು, ಶಾಸಕ ಎಚ್.ಡಿ.ತಮ್ಮಯ್ಯ ಅವರಿಗೆ ಕೆಟ್ಟ ಹೆಸರು ತರುವುದು ಅವರ ಉದ್ದೇಶ. ಮಳೆ ಆರಂಭವಾಗಿ ಕಾಮಗಾರಿ ಸ್ಥಗಿತವಾದರೆ ಜನ ಶಾಸಕರನ್ನು ಶಪಿಸಲಿ ಎಂದು ಹೀಗೆ ಮಾಡಿದ್ದಾರೆ’ ಎಂಬುದು ಕಾಂಗ್ರೆಸ್ ಕಾರ್ಯಕರ್ತರ ಆರೋಪ.

ನಾಲ್ಕು ದಿನಗಳ ಹಿಂದೆ ಇದೇ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಎಚ್.ಡಿ.ತಮ್ಮಯ್ಯ ಊರಿನ ಕಡೆಯಿಂದಲೇ ಕಾಮಗಾರಿ ಆರಂಭಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳಿಗೆ ತಾಕೀತು ಮಾಡಿದ್ದರು.

Congress-BJP clash over road development

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...