Home namma chikmagalur chikamagalur ನಗರಠಾಣೆಯಲ್ಲಿ ಸ್ವಯಂಪ್ರೇರಿತವಾಗಿ (ಸುಮೋಟೊ) ಪ್ರಕರಣ
chikamagalurCrime NewsHomeLatest Newsnamma chikmagalur

ನಗರಠಾಣೆಯಲ್ಲಿ ಸ್ವಯಂಪ್ರೇರಿತವಾಗಿ (ಸುಮೋಟೊ) ಪ್ರಕರಣ

Share
Share

ಚಿಕ್ಕಮಗಳೂರು: ನಗರದಲ್ಲಿ ರಾಜಕೀಯ ಮುಖಂಡರ ಬೆಂಬಲಿಗರ ನಡುವಿನ ಪ್ರತಿಷ್ಠೆಯ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಾಜಿ ಸಚಿವ ಸಿ.ಟಿ. ರವಿ ಹಾಗೂ ಶಾಸಕ ಎಚ್.ಡಿ. ತಮ್ಮಯ್ಯ ಅವರ ಬೆಂಬಲಿಗರು ಸಾರ್ವಜನಿಕ ರಸ್ತೆಯಲ್ಲೇ ಪರಸ್ಪರ ಹೊಡೆದಾಟ ನಡೆಸಿದ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ (ಸುಮೋಟೊ) ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡಿದ ಆರೋಪದ ಅಡಿಯಲ್ಲಿ ಪೊಲೀಸರು ಒಟ್ಟು ನಾಲ್ವರ ವಿರುದ್ಧ ಎಫ್‌ಐಆ‌ರ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಈ ಪೈಕಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಸೇರಿದಂತೆ ರಾಜೇಶ್ ಹಾಗೂ ಹೇಮಂತ್ ಎಂಬುವವರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿದ್ದ ನಗರ ಪೊಲೀಸ್ ಠಾಣೆಯ ಮುಖ್ಯ ಪೇದೆ ಪ್ರವೀಣ್ ಕುಮಾರ್ ಅವರು ನೀಡಿದ ಅಧಿಕೃತ ದೂರಿನ ಆಧಾರದ ಮೇಲೆ ಈ ಕಾನೂನು ಕ್ರಮ ಜರುಗಿಸಲಾಗಿದೆ. ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ನಡೆದ ಈ ಹಲ್ಲೆ ಮತ್ತು ಗದ್ದಲದ ದೃಶ್ಯಗಳು ಸ್ಥಳೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ತಡೆಯಲು ಪೊಲೀಸರು ಬಿಗಿ ಕ್ರಮಗಳನ್ನು ಕೈಗೊಂಡಿದ್ದಾರೆ.

The city police station has registered a case suo motu (su moto).

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...