Home namma chikmagalur chikamagalur ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆಯಿಂದ ಶಾಸಕ ಸಿ.ಟಿ ರವಿ ಹಲ್ಲೆಗೆ ಯತ್ನ
chikamagalurHomeLatest Newsnamma chikmagalur

ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆಯಿಂದ ಶಾಸಕ ಸಿ.ಟಿ ರವಿ ಹಲ್ಲೆಗೆ ಯತ್ನ

Share
Share

ಚಿಕ್ಕಮಗಳೂರು: ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ವಿಧಾನಪರಿಷತ್ ಶಾಸಕ ಸಿ.ಟಿ ರವಿ ರವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆಗೆ ಮುಂದಾಗಿರುವುದನ್ನು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜ್ ಶೆಟ್ಟಿ ಖಂಡಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರಸ್ತೆ ಕಾಮಗಾರಿಯನ್ನು ಪರಿಶೀಲಿಸುವ ಸಂದರ್ಭದಲ್ಲಿ ಇಂಜಿನಿಯರ್ ಗಳಿಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿ ತೀವ್ರ ವಾಗ್ದಾಳಿ ನೆಡೆಸಿರುವುದನ್ನು ಗಮನಿಸಿದ್ದ ಸಿ.ಟಿ ರವಿ ರವರು ರಸ್ತೆ ಕಾಮಗಾರಿ ವೀಕ್ಷಣೆಗೆ ತೆರಳಿದ್ದರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗವನಹಳ್ಳಿ ವಾರ್ಡ್‌ನ ನಗರಸಭೆ ಸದಸ್ಯ ಪರಮೇಶ್ ರಾಜ್ ಅರಸ್ ಮತ್ತು ಅವರ ತಂಡದವರು ಗೋ-ಬ್ಯಾಕ್ ರವಿ ಎಂದು ಘೋಷಣೆ ಕೂಗಿರುವುದು ಅಕ್ಷಮ್ಯ ಅಪರಾದ ಎಂದು ದೂರಿದ ಅವರು ಈ ಘಟನೆ ನೆಡೆಯದಿದ್ದರೆ ಸಿ.ಟಿ ರವಿ ರವರು ಕಾಮಗಾರಿ ವೀಕ್ಷಣೆ ಮಾಡಿ ವಾಪಸ್ ಆಗುತ್ತಿದ್ದರು ಎಂದು ವಿವರಿಸಿದರು.

ಕಾಲು ನಡಿಗೆಯಲ್ಲೇ ಆದಿಶಕ್ತಿ ನಗರದ ಸರ್ಕಲ್‌ವರೆಗೆ ಸಾಗಿ ಕಾಮಗಾರಿಗೆ ಅನುಕೂಲವಾಗುವಂತೆ ಮರಗಳು ಮತ್ತು ವಿದ್ಯುತ್ ಕಂಬಗಳನ್ನು ತೆರವುಗೊಳಿಸದಿರುವುದನ್ನು ಗಮನಿಸಿದ ರವಿ ರವರು ಸಂಬಂದಪಟ್ಟ ಇಂಜಿನಿಯರ್ ಜೊತೆ ಮಾತುಕತೆ ನೆಡೆಸಿದರು ಎಂದು ತಿಳಿಸಿದರು.

ನಂತರ ವಾಪಸ್ ಆಗುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ ರವಿ ಅವರನ್ನು ಅಡ್ಡಗಟ್ಟಿ ಘೋಷಣೆಗಳನ್ನು ಕೂಗುತ್ತ ಕುರುವಂಗಿ ರಾಜೇಶ್ ಎಂಬುವವರನ್ನು ಮುಂದಿಟ್ಟುಕೊಂಡು ಜಾತಿ ನಿದನೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿದರು.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಜನತೆ ಶಾಂತಿಪ್ರಿಯರಾಗಿದ್ದು ಮುಂದೆ ಇಂತಹ ಘಟನೆಗಳು ನೆಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು, ಕಾಂಗ್ರೆಸ್ ಕುತಂತ್ರಕ್ಕೆ ಬೆಂಬಲವಾಗಿ ದೂರು ದಾಖಲಿಸಿದರೆ ಮುಂದೆ ಬಿಜೆಪಿ ಉಗ್ರ ಹೋರಾಟ ರೂಪಿಸಲಿದೆ ಎಂದು ಎಚ್ಚರಿಸಿದರು.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂದಿಸಿದಂತೆ ಸುಪ್ರೀಂ ಕೋರ್ಟ್ ತೆಗೆದುಕೊಳ್ಳುವ ಯಾವುದೇ ತೀರ್ಮಾನ ಮತ್ತು ಆದೇಶವನ್ನು ಜಿಲ್ಲಾ ಬಿಜೆಪಿ ಸ್ವಾಗತ್ತಿಸುತ್ತದೆ ಎಂದ ಅವರು ಪಕ್ಷದ ಅಭ್ಯರ್ಥಿ ಡಿ.ಎನ್ ಜೀವರಾಜ್ ಪರವಾಗಿ ಫಲಿತಾಂಶ ಬರುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಜನತಾ ಪಾರ್ಟಿ ಉಪಾಧ್ಯಕ್ಷ ಬೀಕನಹಳ್ಳಿ ಸೋಮಶೇಖರ್, ನಗರ ಮಂಡಲ ಅಧ್ಯಕ್ಷ ಕೆ.ಎಸ್ ಪುಷ್ವರಾಜ್, ವಕ್ತಾರ ಹೆಚ್.ಎಸ್ ಪುಟ್ಟಸ್ವಾಮಿ, ಮುಖಂಡರಾದ ಸಚಿನ್, ರಾಜು, ದಿನೇಶ್ ಕೋಟೆ, ಚಮಿನ್ ಇದ್ದರು.

Local MLA’s provocative statement leads to attempt to attack MLA C.T. Ravi

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...