Home namma chikmagalur chikamagalur ರಸ್ತೆ ಕಾಮಗಾರಿ ವಿಚಾರವಾಗಿ ಇಬ್ಬರ ನಡುವೆ ತೀವ್ರ ಬಡಿದಾಟ
chikamagalurHomeLatest Newsnamma chikmagalur

ರಸ್ತೆ ಕಾಮಗಾರಿ ವಿಚಾರವಾಗಿ ಇಬ್ಬರ ನಡುವೆ ತೀವ್ರ ಬಡಿದಾಟ

Share
Share

ಚಿಕ್ಕಮಗಳೂರು: ರಸ್ತೆ ಕಾಮಗಾರಿ ವಿಚಾರವಾಗಿ ಇಬ್ಬರ ನಡುವೆ ತೀವ್ರ ಬಡಿದಾಟ ನಡೆದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ದೋಣುಗೂಡಿಗೆ ಗ್ರಾಮದಲ್ಲಿ ನಡೆದಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಯಾಗಿರುವ ರಾಜೇಶ್ ಎಂಬುವವರು ಊರಿಗೆ ರಸ್ತೆ ಮಾಡಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಿ ಕಾಮಗಾರಿಗೆ ಮುಂದಾಗಿದ್ದರು.

ಆದರೆ ಈ ರಸ್ತೆ ನಿರ್ಮಾಣವಾಗುವ ಜಾಗ ತನಗೆ ಸೇರಿದ್ದು ಎಂದು ವಾದಿಸಿದ ರಮೇಶ್ ಎಂಬುವವರು ರಸ್ತೆ ಕಾಮಗಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಸ್ತೆ ನಿರ್ಮಾಣವಾದರೆ ಗ್ರಾಮದ 20ಕ್ಕೂ ಹೆಚ್ಚು ಕುಟುಂಬಗಳಿಗೆ ಅನುಕೂಲವಾಗುತ್ತದೆ ಎಂದು ರಾಜೇಶ್ ಕಾಮಗಾರಿ ಮುಂದುವರಿಸಲು ಯತ್ನಿಸಿದಾಗ ರಮೇಶ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಮನೆ ಬಾಗಿಲಲ್ಲೇ ಇಬ್ಬರೂ ಒಬ್ಬರ ಮೇಲೊಬ್ಬರು ಬಿದ್ದು ತೀವ್ರವಾಗಿ ಜಗಳವಾಡುತ್ತಿದ್ದರೆ, ರಮೇಶ್ ಅವರ ಪತ್ನಿ ಸೇರಿದಂತೆ ಕುಟುಂಬಸ್ಥರು ಅದನ್ನು ತಡೆಯದೆ ಸುಮ್ಮನೆ ನಿಂತು ನೋಡುತ್ತಿರುವುದು ಕಂಡುಬಂದಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

There was a fierce fight between the two regarding road works

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...