Home namma chikmagalur chikamagalur ಸೀತಾಳಯ್ಯನಗಿರಿ ರಸ್ತೆಯಲ್ಲಿ ಕಂದಕಕ್ಕೆ ಉರುಳಿದ ಟೆಂಪೋ ಟ್ರಾವೆಲರ್
chikamagalurCrime NewsHomeLatest Newsnamma chikmagalur

ಸೀತಾಳಯ್ಯನಗಿರಿ ರಸ್ತೆಯಲ್ಲಿ ಕಂದಕಕ್ಕೆ ಉರುಳಿದ ಟೆಂಪೋ ಟ್ರಾವೆಲರ್

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಪ್ರಸಿದ್ಧ ಪ್ರವಾಸಿ ತಾಣವಾದ ಸೀತಾಳಯ್ಯನಗಿರಿ ರಸ್ತೆಯಲ್ಲಿ ಚಾಲಕನ ಸಣ್ಣದೊಂದು ಎಡವಟ್ಟಿನಿಂದಾಗಿ ಟೆಂಪೋ ಟ್ರಾವೆಲರ್ ವಾಹನವೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಆದರೆ ಚಾಲಕನ ಸಮಯಪ್ರಜ್ಞೆ ಮತ್ತು ಅದೃಷ್ಟವಶಾತ್ ವಾಹನದಲ್ಲಿದ್ದ ಬೆಂಗಳೂರು ಮೂಲದ ೧೩ ಮಂದಿ ಪ್ರವಾಸಿಗರು ಯಾವುದೇ ಪ್ರಾಣಾಪಾಯವಿಲ್ಲದೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಬೆಂಗಳೂರಿನಿಂದ ಚಿಕ್ಕಮಗಳೂರಿನ ಗಿರಿಪ್ರದೇಶಗಳಿಗೆ ಪ್ರವಾಸಕ್ಕೆ ಬಂದಿದ್ದ ತಂಡ ಮುಳ್ಳಯ್ಯನಗಿರಿ ವೀಕ್ಷಣೆ ಮುಗಿಸಿ ವಾಪಸ್ ಇಳಿಜಾರಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಮಾಣಿಕ್ಯಾಧಾರ ಮತ್ತು ಸೀತಾಳಯ್ಯನಗಿರಿ ನಡುವಿನ ಕಡಿದಾದ ಇಳಿಜಾರಿನಲ್ಲಿ ವಾಹನ ಚಲಿಸುತ್ತಿದ್ದಾಗ, ಹಿಂಭಾಗದ ಸೀಟಿನಲ್ಲಿದ್ದ ಪ್ರಯಾಣಿಕರೊಬ್ಬರ ಪಾದರಕ್ಷೆ ಜಾರಿ ಮುಂಭಾಗದ ಚಾಲಕನ ಸೀಟಿನ ಬಳಿ ಬಂದು ಬಿದ್ದಿದೆ. ಇಳಿಜಾರಿನ ರಸ್ತೆಯಾದ್ದರಿಂದ ಈ ಚಪ್ಪಲಿ ಎಲ್ಲಿ ಬ್ರೇಕ್ ಮತ್ತು ಎಕ್ಸಲೇಟರ್ ಪೆಡಲ್‌ಗಳ ಮಧ್ಯೆ ಸಿಲುಕಿಕೊಳ್ಳುತ್ತದೆಯೋ ಎಂಬ ಆತಂಕ ಚಾಲಕನಿಗೆ ಎದುರಾಗಿದೆ.

ಆತ ತಕ್ಷಣವೇ ಚಲಿಸುತ್ತಿದ್ದ ವಾಹನದಲ್ಲೇ ಬಾಗಿ ಆ ಚಪ್ಪಲಿಯನ್ನು ತೆಗೆಯಲು ಪ್ರಯತ್ನಿಸಿದ್ದಾನೆ. ಈ ಸಂದರ್ಭ ವಾಹನದ ಗೇರ್ ಲಿವರ್ ನ್ಯೂಟ್ರಲ್ ಸ್ಥಿತಿಗೆ ಬಿದ್ದಿದೆ. ಇಳಿಜಾರಿನ ರಸ್ತೆಯಾಗಿದ್ದರಿಂದ ಗೇರ್ ಇಲ್ಲದ ಟೆಂಪೋ ಒಮ್ಮಿಂದೊಮ್ಮೆಗೆ ಅತಿ ವೇಗವಾಗಿ ಮುಂದಕ್ಕೆ ನುಗ್ಗಿದೆ. ಚಾಲಕ ಬ್ರೇಕ್ ಹಾಕುವಷ್ಟರಲ್ಲೇ ವಾಹನವು ರಸ್ತೆ ಬದಿಯ ರಕ್ಷಣಾ ಗೋಡೆಯನ್ನು ದಾಟಿ ಕಂದಕದ ಕಡೆಗೆ ಇಳಿದಿದೆ.

ವಾಹನ ಕಂದಕಕ್ಕೆ ಇಳಿಯುತ್ತಿದ್ದಂತೆ ಒಳಗಿದ್ದ ಪ್ರಯಾಣಿಕರು ಜೋರಾಗಿ ಕಿರುಚಾಡಿದ್ದಾರೆ. ಅದೃಷ್ಟವಶಾತ್ ಟೆಂಪೋ ಕಂದಕದ ಆರಂಭದಲ್ಲೇ ಸಿಲುಕಿ ನಿಂತಿದ್ದರಿಂದ ಭೀಕರ ದುರಂತವೊಂದು ತಪ್ಪಿದಂತಾಗಿದೆ. ವಾಹನದಲ್ಲಿದ್ದ ಎಲ್ಲಾ ೧೩ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಿರಿಪ್ರದೇಶಗಳ ತಿರುವು ರಸ್ತೆಯಲ್ಲಿ ಚಾಲನೆ ಮಾಡುವಾಗ ಚಾಲಕರು ಎಷ್ಟು ಜಾಗರೂಕರಾಗಿರಬೇಕೆಂಬುದಕ್ಕೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ.

Tempo Traveler fell into a ditch on Seethalaiyanagiri Road

Share

Leave a comment

Leave a Reply

Your email address will not be published. Required fields are marked *

Don't Miss

ರೈಲ್ವೆ ಕಾಮಗಾರಿಗೆ ಜಮೀನು ಬಳಕೆ: ಪರಿಹಾರ ನೀಡುವಂತೆ ರೈತ ಸಂಘ ಒತ್ತಾಯ

ಚಿಕ್ಕಮಗಳೂರು: ರೈಲ್ವೆ ಕಾಮಗಾರಿಗಾಗಿ ರೈತರ ಜಮೀನು ಹಾಗೂ ವಾಸದ ಮನೆಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಪರಿಹಾರ ನೀಡುವವರೆಗೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ...

ಬಿಎಫ್‌ಐಎಲ್‌ ಸಂಸ್ಥೆಯಲ್ಲಿ ₹5.50 ಲಕ್ಷ ದುರುಪಯೋಗ: ಇಬ್ಬರು ಸಿಬ್ಬಂದಿ ವಿರುದ್ಧ ಪ್ರಕರಣ

ನರಸಿಂಹರಾಜಪುರ: ಭಾರತ್ ಫೈನಾನ್ಸಿಯಲ್ ಇನ್‌ಕ್ಲೂಶನ್ ಲಿಮಿಟೆಡ್‌ (ಬಿಎಫ್‌ಐಎಲ್‌) ಸಂಸ್ಥೆಯ ಸೇಫ್‌ ಲಾಕರ್‌ನಲ್ಲಿದ್ದ ಚೆಕ್‌ಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ಬಾರದಂತೆ ತೆಗೆದುಕೊಂಡು ₹5.50 ಲಕ್ಷ ಹಣವನ್ನು ಬಿಡಿಸಿಕೊಂಡು ದುರುಪಯೋಗಪಡಿಸಿಕೊಂಡ ಆರೋಪದಡಿ ಇಬ್ಬರು ಸಿಬ್ಬಂದಿ ವಿರುದ್ಧ...

Related Articles

ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯಿಂದ ಪ್ರತಿಭಟನೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕಡೂರು ಹಾಗೂ ಚಿಕ್ಕಮಗಳೂರು ತಾಲ್ಲೂಕುಗಳನ್ನು...

ಆನ್‌ಲೈನ್ ಟ್ರೇಡಿಂಗ್ ಹೂಡಿಕೆ ಹೆಸರಿನಲ್ಲಿ ವಿದ್ಯಾರ್ಥಿನಿಗೆ ₹4.77 ಲಕ್ಷ ವಂಚನೆ

ಚಿಕ್ಕಮಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಕೆಲವೇ ನಿಮಿಷಗಳಲ್ಲಿ ಭಾರಿ ಲಾಭ ನೀಡುವುದಾಗಿ ನಂಬಿಸಿ...

ಯುವತಿ ಮೇಲೆ ಅತ್ಯಾಚಾರ-ಕೊಲೆ ಬೆದರಿಕೆ ಆರೋಪ

ಚಿಕ್ಕಮಗಳೂರು: ಯುವತಿಗೆ ಅತ್ಯಾಚಾರ ಎಸಗಿದ ಆರೋಪ ಹಾಗೂ ಬಳಿಕ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಪಂಚನಹಳ್ಳಿ...

ಮನೆಯ ಹಿಂಭಾಗದಲ್ಲಿ ಬೆಳೆದಿದ್ದ 12.250 ಕೆ.ಜಿ. ಹಸಿ ಗಾಂಜಾ ವಶ

ತರೀಕೆರೆ: ತಾಲ್ಲೂಕಿನ ಬೆಟ್ಟತಾವರೆಕೆರೆ ಗ್ರಾಮದ ನಿವಾಸಿ ದಿನೇಶ್ ಎಂಬುವವರು ತಮ್ಮ ಮನೆಯ ಹಿಂಭಾಗದಲ್ಲಿ ಬೆಳೆದಿದ್ದ ಸುಮಾರು...