Home namma chikmagalur chikamagalur ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ
chikamagalurHomeLatest Newsnamma chikmagalur

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Share
Share

ಚಿಕ್ಕಮಗಳೂರು: ರೈತರು ಎದುರಿಸುತ್ತಿರುವ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆಯಿಂದ ಆಜಾದ್ ವೃತ್ತದಲ್ಲಿ ಪ್ರತಿಭಟನೆ ನೆಡೆಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿರವರಿಗೆ ಮನವಿ ಸಲ್ಲಿಸಲಾಯಿತು.

ಇಂದು ಬೆಳಿಗ್ಗೆ ರೈತ ಸಂಘದ ಪದಾಧಿಕಾರಿಗಳು ಆಜಾದ್ ವೃತ್ತದಲ್ಲಿ ಸಮಾವೇಶಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸಗೊಬ್ಬರ, ಡೀಸೆಲ್, ಪೆಟ್ರೋಲ್‌ಬೆಲೆ ಏರಿಕೆಯನ್ನು ತಕ್ಷಣ ವಾಪಸ್ ಪಡೆಯುವಂತೆ ಒತ್ತಾಯಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ರೈತ ಸಂಘದ ಜಿಲ್ಲಾಧ್ಯಕ್ಷ ಡಿ. ಮಹೇಶ್ ಮಾತನಾಡಿ ರಾಜ್ಯದಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಕೃಷಿ ಭೂಮಿಯನ್ನು ಅಸನುಮಾಡಿಕೊಂಡು ಸಿದ್ಧತೆ ನೆಡೆಸುತ್ತಿರುವ ರೈತರಿಗೆ ರಸಗೊಬ್ಬರ ಮತ್ತು ಡೀಸೆಲ್ ಬೆಲೆ ಏರಿಕೆ ತೀವ್ರ ಆಘಾತವನ್ನು ಉಂಟುಮಾಡಿದೆ ಎಂದು ಆರೋಪಿಸಿದರು.

ಕಳೆದ ಕೆಲವು ತಿಂಗಳುಗಳಿಂದ ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ ಇದರಿಂದಾಗಿ ಟ್ರ್ಯಾಕ್ಟರ್ ಉಳುಮೆ, ನೀರಾವರಿ ಪಂಪ್‌ಸೆಟ್ ಬಳಕೆ ಮತ್ತು ಬೆಳೆ ಸಾಗಾಣಿಕ ವೆಚ್ಚವು ದುಪ್ಪಟ್ಟಾಗಿದ್ದು ಜೊತೆಗೆ ರಸಗೊಬ್ಬರಗಳ ಬೆಲೆಯೂ ಗಗನಕ್ಕೇರಿರುವುದರಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರು ಬಿತ್ತನೆ ಮಾಡುವುದೇ ದುಸ್ತರವಾಗಿದೆ ಎಂದು ತಿಳಿಸಿದರು.

ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆಸಿಗದೆ ನಷ್ಟ ಅನುಭವಿಸುತ್ತಿರುವ ಈ ಸಂದರ್ಭದಲ್ಲಿ ಕೃಷಿ ವೆಚ್ಚದ ಈ ಹೊರೆ ರೈತರ ಬೆನ್ನುಮೂಳೆ ಮುರಿದಂತಾಗಿದೆ, ಕೂಡಲೇ ರಸಗೊಬ್ಬರಗಳ ಬೆಲೆಯನ್ನು ಇಳಿಸಬೇಕು, ರೈತರಿಗೆ ನೇರ ನಗದು ವರ್ಗಾವಣೆ ಮೂಲಕ ಹೆಚ್ಚುವರಿ ಸಹಾಯಧನ ಒದಗಿಸಬೇಕು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಡೀಸೆಲನ್ನು ರಿಯಾಯಿತಿ ದರದಲ್ಲಿ ಕಾರ್ಡ್‌ಗಳ ಮೂಲಕ ವಿತರಿಸಬೇಕು ಎಂದು ಒತ್ತಾಯಿಸಿದರು.

ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸ್ಸಿನ ವರದಿಯಂತೆ ವೈಜ್ಞಾನಿಕ ಬೆಂಬಲ ಬೆಲೆಯನ್ನು ನಿಗದಿಪಡಿಸಬೇಕು, ಉಳುಮೆ, ಬಿತ್ತನೆ, ಬೆಳೆ ಸಾಗಾಣಿಕೆಗೆ ಡೀಸೆಲ್ ಅಗತ್ಯವಾಗಿದ್ದು ಈ ಬೆಲೆ ಏರಿಕೆಯಿಂದಾಗಿ ರೈತರು ಸಾಲದ ಸುಳಿಗೆ ಸಿಲುಕುತ್ತಿದ್ದಾರೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಬಸವರಾಜ್, ದೇವರಾಜೇಗೌಡ, ಉಮೇಶ್, ಕುಮಾರ್ ನಾಯ್ಕ, ವನಶ್ರೀ, ಮೀನಾಕ್ಷಮ್ಮ, ಜಗಧೀಶ್, ಮಧು.ಕೆ.ಆರ್ ಮತ್ತಿತರರು ಉಪಸ್ಥಿತರಿದ್ದರು.

Farmers’ association protests demanding fulfillment of various demands

Share

Leave a comment

Leave a Reply

Your email address will not be published. Required fields are marked *

Don't Miss

ಸಾವಿರಾರು ಮಂದಿಯಿಂದ ಬೃಹತ್ ಈದ್‌ಮಿಲಾದ್ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಪೈಗಂಬರ್ ೧೫೦೧ನೇ ಜನ್ಮದಿನದ ಅಂಗವಾಗಿ ಆಚರಿಸಲಾದ ಈದ್‌ಮಿಲಾದ್ ಹಬ್ಬದ ಪ್ರಯುಕ್ತ ನಗರದಲ್ಲಿ ಬುಧವಾರ ಸಾವಿರಾರು ಮಂದಿ ಮುಸ್ಲಿಂ ಬಾಂಧವರು ಬೃಹತ್ ಮೆರವಣಿಗೆ ನಡೆಸಿದರು. ನಗರದ ಅಂಡೇಛತ್ರದಿಂದ ಆರಂಭವಾದ...

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ ಘಟಕವು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ನೂರಾ ರು ಮಹಿಳೆಯರು ಮಂಗಳವಾರ ಪ್ರತಿಭಟಿಸುವ ಮೂಲಕ ಭರವಸೆ...

Related Articles

ಮಾಜಿ ಸರ್ಜನ್  ಕುಮಾರ್ ನಾಯಕ್ ಇನ್ನಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಮಲ್ಲೇಗೌಡ ಜನರಲ್ ಆಸ್ಪತ್ರೆಯ ಮಾಜಿ ಸರ್ಜನ್ ಕುಮಾರ್ ನಾಯಕ್ (67) ರಾತ್ರಿ...

ತಹಸೀಲ್ದಾರ್ ನಿಲುವಿನ ವಿರುದ್ಧ ಮಾಜಿ ಶಾಸಕ ಕುಮಾರಸ್ವಾಮಿ ಅಸಮಾಧಾನ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅವರು ಸಾರ್ವಜನಿಕರೊಂದಿಗೆ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು,...

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಈಜಲು ತೆರಳಿದ್ದ 23 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ...

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕತ್ತು ಹಿಸುಕಿ ಹಾಗೂ ಮೂಗು–ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ...