Home namma chikmagalur chikamagalur ಕಂದಾಯ-ಅರಣ್ಯ ಇಲಾಖೆ ಭೂಮಿ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಧರಣಿ
chikamagalurHomeLatest Newsnamma chikmagalur

ಕಂದಾಯ-ಅರಣ್ಯ ಇಲಾಖೆ ಭೂಮಿ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಧರಣಿ

Share
Share

ಚಿಕ್ಕಮಗಳೂರು: ಕಂದಾಯ ಮತ್ತು ಅರಣ್ಯ ಇಲಾಖೆ ಭೂಮಿ ಸಮಸ್ಯೆ ಶೀಘ್ರ ಪರಿಹರಿಸುವಂತೆ ಒತ್ತಾಯಿಸಿ ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಬುಧವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ಬೆಳೆಗಾರರ ಒಕ್ಕೂಟ, ವಿವಿಧ ಬೆಳೆಗಾರರ ಸಂಘಟನೆಗಳು, ದಲಿತ, ಕನ್ನಡ, ರೈತ ಸಂಘಟನೆಗಳ ನೇತೃತ್ವದಲ್ಲಿ ನಗರದ ತಾಲ್ಲೂಕು ಕಚೇರಿ ಎದುರು ಜಮಾಯಿಸಿದ್ದ ಸಾವಿರಾರು ರೈತರು, ಧರಣಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳ ವಿರುದ್ಧ ಸಾಮೂಹಿಕ ಘೋಷಣೆ ಮೊಳಗಿಸಿದರು.

ಷನಾಗರಿಕ ರೈತ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಎಸ್. ವಿಜಯಕುಮಾರ್ ಮಾತನಾಡಿ, ‘ಜಂಟಿ ಸರ್ವೆಯಲ್ಲಿ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಬಾಕಿ ಇರುವ ಆಶ್ರಯ ನಿವೇಶನದ ಕಡತಗಳ ಪ್ರಕ್ರಿಯೆ ಅಂತಿಮಗೊಳಿಸಿ ಬಡವರಿಗೆ ನಿವೇಶನ ನೀಡಬೇಕು’ ಎಂದು ಆಗ್ರಹಿಸಿದರು.

‘ಈಗಾಗಲೇ ಪರಿಭಾವಿತ ಅರಣ್ಯ ವಿಷಯದಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಜನವಸತಿ, ಶಾಲೆ, ಆಟದ ಮೈದಾನ, ಆಸ್ಪತ್ರೆ ಸೇರಿ ಜನ ಬಳಸುತ್ತಿರುವ ಸ್ಥಳಗಳಿದ್ದರೆ ಅವುಗಳನ್ನು ಪರಿಭಾವಿತ ಅರಣ್ಯ ಪಟ್ಟಿಯಿಂದ ಕೈಬಿಡಬೇಕು. ಈ ಸಂಬಂಧ ಎಸ್‌ಐಟಿ ರಚನೆಯಾಗಿದ್ದರೂ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ’ ಎಂದರು.

ಜನ, ಜನವಸತಿ ಮತ್ತು ರೈತರ ಭೂಮಿಯನ್ನು ತರಾತುರಿಯಲ್ಲಿ ಡೀಮ್ಸ್ ಅರಣ್ಯ ಪಟ್ಟಿ ಮಾಡಿ ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸುವ ಅಪಾಯಗಳು ಹೆಚ್ಚಿವೆ. ಆದ್ದರಿಂದ ಕೂಡಲೇ ಅಧಿಕಾರಿಗಳು ಎಚ್ಚೆತ್ತು ಸಮರ್ಪಕವಾದ ಸರ್ವೆ ಕಾರ್ಯ ನಡೆಸಬೇಕು. ಜನವಸತಿ, ಶಾಲೆ, ಆಸ್ಪತ್ರೆ, ಅಂಗನವಾಡಿ, ಸ್ಮಶಾನ ಮತ್ತಿತರೆ ಸಾರ್ವಜನಿಕ ಉದ್ದೇಶಕ್ಕೆ ಭೂಮಿ ಕಾಯ್ದಿರಿಸಬೇಕು. ಉಳಿದ ಜಾಗವನ್ನು ಬೇಕಿದ್ದರೆ ಪರಿಭಾವಿತ ಅರಣ್ಯಕ್ಕೆ ಸೇರಿಸಿಕೊಳ್ಳಲಿ ಎಂದು ಹೇಳಿದರು.

ಸೆಕ್ಷನ್ 4 ಘೋಷಣೆ ಮಾಡಿರುವ ಜಾಗಗಳ ಗೊಂದಲ ಇತ್ಯರ್ಥಕ್ಕೆ ಅರಣ್ಯ ವ್ಯವಸ್ಥಾಪನಾ ಅಧಿಕಾರಿ (ಎಫ್‌ಎಸ್‌ಒ) ನೇಮಿಸಲಾಗಿದೆ. ಅವರು ನಿರ್ಧಾರ ಕೈಗೊಂಡು ಅಧಿಸೂಚನೆ ಹೊರಡಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಡತ ಸಲ್ಲಿಸಿದ್ದಾರೆ. ಆದರೆ, 5 ವರ್ಷಗಳಿಂದ ಅರಣ್ಯ ಇಲಾಖೆ ಅಧಿಕಾರಿಗಳು ಸಮಸ್ಯೆ ಯಥಾಸ್ಥಿತಿಯಲ್ಲಿ ಇರುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ಸಂಚಾಲಕ ಕೆ.ಕೆ. ರಘು, ಮಹೇಶ್ ಕೆರೆಮಕ್ಕಿ, ಲೋಕೇಶ್, ಕುಮಾರಸ್ವಾಮಿ, ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ, ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ. ರಾಧಾಕೃಷ್ಣ, ಅಲ್ಲೂರು ಸುರೇಶ್, ರತೀಶ್, ಕನ್ನಡ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಸಿ. ರಾಜೇಗೌಡ ಭಾಗವಹಿಸಿದ್ದರು. ತಹಶೀಲ್ದಾ‌ರ್ ರೇಷ್ಮಾ ಶೆಟ್ಟಿ ಅವರಿಗೆ ಮುಖಂಡರು ಮನವಿ ಸಲ್ಲಿಸಿದರು.

Revenue-Forest Department holds protest demanding resolution of land issue

Share

Leave a comment

Leave a Reply

Your email address will not be published. Required fields are marked *

Don't Miss

ಸಾವಿರಾರು ಮಂದಿಯಿಂದ ಬೃಹತ್ ಈದ್‌ಮಿಲಾದ್ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಪೈಗಂಬರ್ ೧೫೦೧ನೇ ಜನ್ಮದಿನದ ಅಂಗವಾಗಿ ಆಚರಿಸಲಾದ ಈದ್‌ಮಿಲಾದ್ ಹಬ್ಬದ ಪ್ರಯುಕ್ತ ನಗರದಲ್ಲಿ ಬುಧವಾರ ಸಾವಿರಾರು ಮಂದಿ ಮುಸ್ಲಿಂ ಬಾಂಧವರು ಬೃಹತ್ ಮೆರವಣಿಗೆ ನಡೆಸಿದರು. ನಗರದ ಅಂಡೇಛತ್ರದಿಂದ ಆರಂಭವಾದ...

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ ಘಟಕವು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ನೂರಾ ರು ಮಹಿಳೆಯರು ಮಂಗಳವಾರ ಪ್ರತಿಭಟಿಸುವ ಮೂಲಕ ಭರವಸೆ...

Related Articles

ಮಾಜಿ ಸರ್ಜನ್  ಕುಮಾರ್ ನಾಯಕ್ ಇನ್ನಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಮಲ್ಲೇಗೌಡ ಜನರಲ್ ಆಸ್ಪತ್ರೆಯ ಮಾಜಿ ಸರ್ಜನ್ ಕುಮಾರ್ ನಾಯಕ್ (67) ರಾತ್ರಿ...

ತಹಸೀಲ್ದಾರ್ ನಿಲುವಿನ ವಿರುದ್ಧ ಮಾಜಿ ಶಾಸಕ ಕುಮಾರಸ್ವಾಮಿ ಅಸಮಾಧಾನ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅವರು ಸಾರ್ವಜನಿಕರೊಂದಿಗೆ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು,...

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಈಜಲು ತೆರಳಿದ್ದ 23 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ...

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕತ್ತು ಹಿಸುಕಿ ಹಾಗೂ ಮೂಗು–ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ...