Home namma chikmagalur chikamagalur ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಜಿಲ್ಲೆಯಲ್ಲಿ ಪೈಪೋಟಿ
chikamagalurHomeLatest Newsnamma chikmagalur

ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಜಿಲ್ಲೆಯಲ್ಲಿ ಪೈಪೋಟಿ

Share
Share

ಚಿಕ್ಕಮಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ, ಹೊಸ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ. ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಈಗ ಪೈಪೋಟಿ ಶುರುವಾಗಿದೆ. ಈ ನಡುವೆ ಮೂರು ವರ್ಷಗಳಿಂದ ಹೊರಗಿನ ಜಿಲ್ಲಾ ಉಸ್ತುವಾರಿ ಸಚಿವರನ್ನು ಕಂಡಿರುವ ಜಿಲ್ಲೆಯ ಜನ, ಈ ಬಾರಿ ಸ್ಥಳೀಯ ಶಾಸಕರಿಗೆ ಅವಕಾಶ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಶಾಸಕರಾಗಿದ್ದಾರೆ. ಮೂಡಿಗೆರೆ ಮೀಸಲು ಕ್ಷೇತ್ರ, ಚಿಕ್ಕಮಗಳೂರು ಮತ್ತು ಕಡೂರು ಕ್ಷೇತ್ರಗಳನ್ನು ಮೊದಲ ಬಾರಿಗೆ ಶಾಸಕರಾದವರು ಪ್ರತಿನಿಧಿಸುತ್ತಿದ್ದರೆ, ಶೃಂಗೇರಿ ಮತ್ತು ತರೀಕೆರೆ ಕ್ಷೇತ್ರಗಳನ್ನು ಎರಡನೇ ಅವಧಿಗೆ ಶಾಸಕರಾದ ಹಿರಿಯರು ಪ್ರತಿನಿಧಿಸುತ್ತಿದ್ದಾರೆ.

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೊರ ಜಿಲ್ಲೆಯ ಉಸ್ತುವಾರಿ ಸಚಿವರನ್ನೇ ಜಿಲ್ಲೆ ಕಂಡಿದೆ. ಎಲ್ಲವೂ ಕೂಡಿ ಬಂದು ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯರಿಗೆ ಅವಕಾಶ ನೀಡುವ ಸಂದರ್ಭ ಬಂದರೆ ಹಲವು ವಿಷಯಗಳು ಚರ್ಚೆಗೆ ಬರಲಿವೆ. ಹಿರಿತನದ ಲೆಕ್ಕಾಚಾರದಲ್ಲಿ ಅವಕಾಶ ಸಿಗುವುದಾದರೆ ಸತತ ಎರಡನೇ ಬಾರಿಗೆ ಶಾಸಕರಾಗಿರುವ ಟಿ.ಡಿ. ರಾಜೇಗೌಡ ಹೆಸರು ಮುನ್ನೆಲೆಗೆ ಬರಲಿದೆ(ಅವರ ಶಾಸಕತ್ವದ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿ ಇದೆ). ಒಕ್ಕಲಿಗರಿಗೆ ಅವಕಾಶ ನೀಡಬೇಕು ಎಂಬ ಸಂದರ್ಭ ಬಂದರೆ ರಾಜೇಗೌಡ ಒಬ್ಬರೇ ಜಿಲ್ಲೆಯ ಒಕ್ಕಲಿಗ ಶಾಸಕ.

ಇನ್ನು ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ಅವರು ಕೂಡ ಎರಡು ಬಾರಿ ಗೆದ್ದಿರುವ ಶಾಸಕ. ಮೊದಲಿಗೆ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾಗಿದ್ದರು. 2018ರಲ್ಲಿ ಕಾಂಗ್ರೆಸ್ ಟಿಕೆಟ್ ದೊರೆಯದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. 2023ರಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದು ಗೆದ್ದಿದ್ದಾರೆ. ಕುರುಬ ಸಮುದಾಯಕ್ಕೆ ಅವಕಾಶ ನೀಡುವ ಸಂದರ್ಭಬಂದರೆ ಹಿರಿತನದಲ್ಲಿ ಶ್ರೀನಿವಾಸ್ ಇದ್ದಾರೆ. ಕಡೂರು ಕ್ಷೇತ್ರ ಕೆ.ಎಸ್. ಆನಂದ್ ಅವರು ಅದೇ ಸಮುದಾಯಕ್ಕೆ ಸೇರಿದವರು. ಇವರು ಡಿ.ಕೆ. ಶಿವಕುಮಾರ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ ಎನ್ನುವ ಮಾತುಗಳಿವೆ.

ಲಿಂಗಾಯತ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕುವ ಅವಕಾಶ ಬಂದರೆ ಚಿಕ್ಕಮಗಳೂರು ಕ್ಷೇತ್ರದ ಎಚ್.ಡಿ. ತಮ್ಮಯ್ಯ ಹೆಸರು ಮುನ್ನೆಲೆಗೆ ಬರಲಿದೆ. ಇವರು ಕೂಡ ಡಿ.ಕೆ. ಶಿವಕುಮಾರ್ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಜಿಲ್ಲೆಗೆ ಸಚಿವ ಸ್ಥಾನ ಈ ಬಾರಿಯಾದರೂ ದೊರಕಬೇಕು. ಎರಡು ಬಾರಿ ಗೆದ್ದಿರುವ ಹಿರಿಯರಿಗೆ ಅವಕಾಶ ಸಿಗಲಿ ಎಂದು ಅವರೇ ಬುಧವಾರ ಹೇಳಿಕೆ ನೀಡಿದ್ದಾರೆ.

ಮತ್ತೊಂದೆಡೆ ದಲಿತ ಸಮುದಾಯ ಮತ್ತು ಮಹಿಳಾ ಕೋಟಾ ಎರಡರ ಮೂಲಕ ಅವಕಾಶ ಸಿಗುವುದಾರೆ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರ ಮುನ್ನೆಲೆಗೆ ಬರಲಿದೆ.

ಮೋಟಮ್ಮ ಅವರು ಕಾಂಗ್ರೆಸ್ ಹಿರಿಯ ನಾಯಕಿ. ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಸಚಿವರಾಗಿ ಕೆಲಸ ಮಾಡಿದವರು. ಎಸ್.ಎಂ. ಕೃಷ್ಣ ಅವರ ಶಿಷ್ಯರಾಗಿರುವ ಡಿ.ಕೆ. ಶಿವಕುಮಾ‌ರ್ ಅವರೊಂದಿಗೆ ಸಂಪರ್ಕ ಚೆನ್ನಾಗಿದೆ. ಶಾಸಕಿ ನಯನಾ ಅವರು ಡಿ.ಕೆ. ಶಿವಕುಮಾರ್ ಬಣದಲ್ಲೇ ಹೆಚ್ಚಾಗಿ ಕಾಣಿಕೊಂಡಿದ್ದರು. ಅವರಿಗೆ ಅವಕಾಶ ಸಿಗುವ ಸಾಧ್ಯತೆಯೂ ಇದೆ ಎಂಬುದು ಕ್ಷೇತ್ರ ಜನರ ನಿರೀಕ್ಷೆ.

Competition in the district for a place in the new cabinet

Share

Leave a comment

Leave a Reply

Your email address will not be published. Required fields are marked *

Don't Miss

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು ನೆರೆಯವರ ತೋಟದ ಮನೆಯ ಹಿಂಭಾಗ ಬೆಂಕಿ ಹಚ್ಚಿಕೊಂಡು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ....

Related Articles

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...

ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವ ನೆಪದಲ್ಲಿ ₹1.59 ಲಕ್ಷ ವಂಚನೆ

ಚಿಕ್ಕಮಗಳೂರು: ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸುವುದಾಗಿ ನಂಬಿಸಿ ಬ್ಯಾಂಕ್ ಅಧಿಕಾರಿಯಂತೆ ನಟಿಸಿದ ಸೈಬರ್ ವಂಚಕರು ವ್ಯಕ್ತಿಯೊಬ್ಬರ...