Home Crime News ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು
Crime NewsHomeKadurLatest Newsnamma chikmagalur

ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

Share
Share

ಕಡೂರು: ಟಿವಿಎಸ್ ಎಕ್ಸ್ ಹಾಗೂ ಪಿಕಪ್ ವಾಹನದ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ನಾಗಗೊಂಡನಹಳ್ಳಿ ಗೇಟ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಂದ್ರಪ್ಪ (41) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನಾಗಗೊಂಡನಹಳ್ಳಿ ನಿವಾಸಿ ಚಂದ್ರಪ್ಪ ಹಾಗೂ ಅಭಿಷೇಕ್ ಎನ್.ಎಸ್. ಅವರು ತಮ್ಮ ಟಿವಿಎಸ್ ಎಕ್ಸ್‌ಎಲ್ ಮೊಪೇಡ್ ನಲ್ಲಿ ಜಕ್ಕನಹಳ್ಳಿ ಕ್ರಾಸ್‌ನಲ್ಲಿದ್ದ ಜಮೀನಿಗೆ ಹೋಗುತ್ತಿದ್ದಾಗ, ಬಿಸಲೆರೆ ಗೇಟ್ ಕಡೆಯಿಂದ ಬಂದ ಬೊಲೆರೋ ಪಿಕಪ್ (KA-19-AC-9641) ವಾಹನದ ಚಾಲಕ ಜಾರ್ಖಂಡ್ ಮೂಲದ ಬಿರೇಂದ್ರ ಎಂಬಾತ ಅತಿವೇಗವಾಗಿ ಬಂದು ಡಿಕ್ಕಿ ಹೊಡೆಸಿದ್ದಾನೆ.

ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದ ಚಂದ್ರಪ್ಪ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಯಗಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Two-wheeler rider dies on the spot in road accident

Share

Leave a comment

Leave a Reply

Your email address will not be published. Required fields are marked *

Don't Miss

ಬಿಡದಿ ರೈತರ ಹೋರಾಟ ಬೆಂಬಲಿಸಿ ಆ.25ರಂದು ವಿಧಾನಸೌಧ ಚಲೋ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಾಗೂ ರೈತರ ಭೂಮಿ ರಕ್ಷಣೆಗೆ ಆಗ್ರಹಿಸಿ ಆ.25ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು...

ಮುಂಗಾರು ಋತುವಿನಲ್ಲಿ ಜಿಲ್ಲೆಯಲ್ಲಿ ಶೇ.35 ಮಳೆ ಕೊರತೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಋತುವಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೆ ಶೇ.೩೫ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

Related Articles

ಕುದುರೆಮುಖ ಭಾಗದಲ್ಲಿ ವಾಸಿಗರ ವಿಶೇಷ ಗಮನ ಸೆಳೆದ ನೀಲಕುರಿಂಜಿ

ಚಿಕ್ಕಮಗಳೂರು:  ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯಕ್ಕೆ ಮತ್ತೊಂದು ವಿಶೇಷ ಮೆರುಗು ನೀಡುವಂತೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ...

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ...

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ...

ಅಜ್ಜಂಪುರ ಸುತ್ತಮುತ್ತ ಕರಡಿ ಹಾವಳಿ

ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ...