Home namma chikmagalur chikamagalur ನಡು ರಸ್ತೆಯಲ್ಲೇ ಮಚ್ಚು ಹಿಡಿದು ಭೀಕರವಾಗಿ ಜಗಳ
chikamagalurCrime NewsHomeLatest Newsnamma chikmagalur

ನಡು ರಸ್ತೆಯಲ್ಲೇ ಮಚ್ಚು ಹಿಡಿದು ಭೀಕರವಾಗಿ ಜಗಳ

Share
Share

ಚಿಕ್ಕಮಗಳೂರು: ಮನೆ ಮುಂದೆ ನೀರು ಹರಿದ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಕಪಕ್ಕದ ಮನೆಯವರು ನಡು ರಸ್ತೆಯಲ್ಲೇ ಮಚ್ಚು ಹಿಡಿದು ಭೀಕರವಾಗಿ ಜಗಳವಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.

ವಿಶೇಷವೆಂದರೆ, ಗಲಾಟೆ ಮಾಡಿಕೊಂಡ ಇಬ್ಬರ ಹೆಸರೂ ಸತೀಶ್ ಎಂಬುದಾಗಿದೆ. ಮನೆ ಮುಂದೆ ನೀರು ಹರಿಯುವ ಸಣ್ಣ ವಿಷಯಕ್ಕೆ ಶುರುವಾದ ತಕರಾರು ವಿಕೋಪಕ್ಕೆ ತಿರುಗಿದ್ದು, ಇಬ್ಬರೂ ಮಚ್ಚು ಹಿಡಿದು ಬೀದಿಗೆ ಬಿದ್ದಿದ್ದಾರೆ.

ಗಲಾಟೆಯ ತೀವ್ರತೆ ಎಷ್ಟಿತ್ತೆಂದರೆ, ಒಬ್ಬ ಸತೀಶ್ ಮಚ್ಚನ್ನು ಕೈಯಲ್ಲಿ ಅತ್ಯಂತ ಗಟ್ಟಿಯಾಗಿ ಹಿಡಿದಿದ್ದರಿಂದ ಆತನ ಕೈಯಿಂದ ರಕ್ತ ಹರಿದಿದೆ. ಈ ವೇಳೆ ಸ್ಥಳೀಯರು ಮಧ್ಯಪ್ರವೇಶಿಸಿ, ಹರಸಾಹಸಪಟ್ಟು ಆತನ ಕೈಯಲ್ಲಿದ್ದ ಮಚ್ಚನ್ನು ಕಸಿದುಕೊಂಡಿದ್ದಾರೆ. ಆದರೆ ಮಚ್ಚು ಕಿತ್ತುಕೊಂಡ ತಕ್ಷಣವೇ ಮತ್ತೊಬ್ಬ ಸತೀಶ್ ಇಟ್ಟಿಗೆಯನ್ನು ಹಿಡಿದು ಹಲ್ಲೆ ಮಾಡಲು ಮುಂದಾಗಿದ್ದಾನೆ.

ಸದ್ಯ ಈ ಜಗಳದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Prepare a picture of a fierce fight with a machete in the middle of the road.

Share

Leave a comment

Leave a Reply

Your email address will not be published. Required fields are marked *

Don't Miss

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು ನೆರೆಯವರ ತೋಟದ ಮನೆಯ ಹಿಂಭಾಗ ಬೆಂಕಿ ಹಚ್ಚಿಕೊಂಡು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ....

Related Articles

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...

ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವ ನೆಪದಲ್ಲಿ ₹1.59 ಲಕ್ಷ ವಂಚನೆ

ಚಿಕ್ಕಮಗಳೂರು: ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸುವುದಾಗಿ ನಂಬಿಸಿ ಬ್ಯಾಂಕ್ ಅಧಿಕಾರಿಯಂತೆ ನಟಿಸಿದ ಸೈಬರ್ ವಂಚಕರು ವ್ಯಕ್ತಿಯೊಬ್ಬರ...