Home namma chikmagalur chikamagalur ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ-ವೃದ್ಧ ಸಾವು
chikamagalurHomeLatest Newsnamma chikmagalur

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ-ವೃದ್ಧ ಸಾವು

Share
Share

ಕಡೂರು: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕಡೂರು ತಾಲೂಕಿನ ನಾರಾಯಣಪುರ ಗ್ರಾಮದ ನಾಗರಾಜಪ್ಪ (65) ಮೃತಪಟ್ಟವರು.

ಮೇ 28 ರಂದು ಮಧ್ಯಾಹ್ನ ತಮ್ಮ ಟಿವಿಎಸ್ ಎಕ್ಸ್‌ಎಲ್ ಮೊಪೆಡ್‌ನಲ್ಲಿ ಕಡೂರಿನ ಸಂಬಂಧಿಕರ ಮನೆಗೆ ಹೋಗಿ ಬರುತ್ತಿದ್ದಾಗ, ಕರೆಕಲ್ ಹೊಳೆ ಗೇಟ್ ಸಮೀಪ ಎದುರಿನಿಂದ ಬಂದ ಯಮಹಾ ಆರ್15 ಬೈಕ್ ಸವಾರ ರುದ್ರೇಶ ಎಂಬಾತ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದಾನೆ.

ಅಪಘಾತದಲ್ಲಿ ನಾಗರಾಜಪ್ಪ ಅವರ ತಲೆ ಹಾಗೂ ಎದೆಗೆ ತೀವ್ರ ಪೆಟ್ಟಾಗಿತ್ತು. ಹಾಗೆಯೇ ಬೈಕ್ ಸವಾರ ರುದ್ರೇಶ ಹಾಗೂ ಹಿಂಬದಿ ಸವಾರ ಭರತ್‌ಗೂ ಗಾಯಗಳಾಗಿದ್ದವು. ನಾಗರಾಜಪ್ಪ ಅವರನ್ನು ಕಡೂರು ಹಾಗೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ನಂತರ ಬೆಂಗಳೂರಿಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Head-on collision between two bikes – elderly man dies

Share

Leave a comment

Leave a Reply

Your email address will not be published. Required fields are marked *

Don't Miss

ಟಿಪ್ಪು ಸುಲ್ತಾನ್ ಕಟೌಟ್ ಗೆ ದೇಶದ್ರೋಹಿ ಹಾಡು-7 ಜನ ಪೊಲೀಸರ ವಶಕ್ಕೆ

ಚಿಕ್ಕಮಗಳೂರು: ಕಾಫಿನಾಡಲ್ಲಿ ಪಾಕ್ ಪ್ರೇಮಿಗಳು ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಈದ್ ಮಿಲಾದ್ ಆಚರಣೆಗೆ ಟಿಪ್ಪು ಸುಲ್ತಾನ್ ಕಟೌಟ್ ಹಾಕಿರುವ ಯುವಕರು, ಕಟೌಟ್ ಬ್ಯಾಕ್ ಗ್ರೌಂಡ್ ಗೆ ದೇಶದ್ರೋಹಿ ಸಾಂಗ್ ಹಾಕಿ ವಿವಾದ...

ಕಾಫಿಕಿಂಗ್ ಸಿದ್ಧಾರ್ಥಹೆಗ್ಗಡೆ ಹೆಸರು ಶಾಶ್ವತವಾಗಿ ಉಳಿಸುವ ಕಾರ್ಯ ಮಾಡಬೇಕಿದೆ

ಮೂಡಿಗೆರೆ: ಕಾಫಿ ಡೇ ಮಾಲೀಕ ದಿವಂಗತ ವಿ.ಜಿ.ಸಿದ್ಧಾರ್ಥ ಹೆಗ್ಗಡೆ ಅವರು ತಮ್ಮ ಸಂಪೂರ್ಣ ಜೀವನವನ್ನು ಕಾಫಿ ಬೆಳೆಗಾರರ ಮತ್ತು ಕಾರ್ಮಿಕರ ಹಿತಕ್ಕಾಗಿ ಸವಿಸಿದ್ದಾರೆಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಹೇಳಿದರು. ಅವರು ಭಾನುವಾರ...

Related Articles

ಅಜ್ಜಂಪುರ ಸುತ್ತಮುತ್ತ ಕರಡಿ ಹಾವಳಿ

ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ...

ಚಿಕ್ಕಮಗಳೂರಿನಲ್ಲಿ 30 ಕೆ.ಜಿಗೂ ಅಧಿಕ ನಕಲಿ ನಾಟಿ ತುಪ್ಪ ಪತ್ತೆ

ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು...

ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ಯವಕ ಸಾವು

ಚಿಕ್ಕಮಗಳೂರು: ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ತಲೆ ಬಂಡೆಗೆ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ...

ಮನ್ ಕಿ ಬಾತ್‌ನಲ್ಲಿ ಚಿಕ್ಕಮಗಳೂರು ರೈತರ ಕೃಷಿ ವೈವಿಧ್ಯತೆಗೆ ಪ್ರಧಾನಿ ಮೋದಿ ಮೆಚ್ಚುಗೆ

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 137ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ರೈತರ...