Home namma chikmagalur chikamagalur ಸಂವಿಧಾನ ವಿರೋಧಿ ಎಸ್.ಐ.ಆರ್ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ಸಂವಿಧಾನ ವಿರೋಧಿ ಎಸ್.ಐ.ಆರ್ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ಸಂವಿಧಾನ, ಪ್ರಜಾತಂತ್ರ, ಜನವಿರೋಧಿ ಆಗಿರುವ ಸರ್ವಾಧಿಕಾರಿ ಗುಣವಿರುವ ಎಸ್.ಐ.ಆರ್ ರದ್ಧಾಗಬೇಕು ಸಂವಿಧಾನ ಬದ್ಧವಾದ, ಜನಸ್ನೇಹಿಯಾದ ಐ.ಆರ್ ತೀವ್ರ ಪರಿಷ್ಕರಣೆ ಮೂಲಕ ಜಾರಿಗೆ ತರಬೇಕು ಎಂದು ಆಗ್ರಹಿಸಿ ಇಂದು ಪ್ರಗತಿ ಸಂಘಟನೆಗಳ ಹಾಗೂ ಜಾತ್ಯಾತೀತ ಪಕ್ಷಗಳ ಒಕ್ಕೂಟ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನಾ ಸತ್ಯಾಗ್ರಹ ನೆಡೆಸಿದರು.

ಇಂದು ಬೆಳಿಗ್ಗೆ ಆಜಾದ್ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಎಸ್.ಐ.ಆರ್ ಎಂಬ ಅಸಂವಿಧಾನಿಕ, ಅವೈಜ್ಞಾನಿಕ, ದೋಷಪೂರಿತ ಮತ್ತು ದುರುದ್ದೇಶಪೂರಿತ ಮತದಾರರ ಪಟ್ಟಿಯ ಪರಿಷ್ಕರಣಾ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಆಗ್ರಹಿಸಿದರು,

ಭಾರತದ ಪ್ರತಿಯೊಬ್ಬ ನಾಗರೀಕನನ್ನು ಮುಕ್ತವಾಗಿ ಹಾಗೂ ಪಾರದರ್ಶಕವಾಗಿ ಒಳಗೊಳ್ಳುವ ರೀತಿಯಲ್ಲಿ ನೆಡೆಸಬೇಕು, ಇಡೀ ಚುನಾವಣಾ ಪ್ರಕ್ರಿಯೆಯನ್ನೇ ಅಪಹರಿಸಲು ಮುಂದಾಗಿರುವ ಇ.ಸಿ.ಐ ಆಯ್ಕೆ ವಿಧಾನ, ವಿ.ವಿ.ಎಂ ಮುಂತಾದ ಕಬಂಧ ಬಾಹುಗಳಿಂದ ಮುಕ್ತಿ ದೊರಕಬೇಕು ಎಂದು ಒತ್ತಾಯಿಸಿದರು.

ಈ ಪ್ರಕ್ರಿಯೆಯನ್ನು ವ್ಯವದಾನದ ಜೊತೆ ನೆಡೆಸಬೇಕು ಕನಿಷ್ಠ ೧ ವರ್ಷದ ಅವಧಿ ನಿಗದಿಮಾಡಬೇಕು, ೬ ತಿಂಗಳು ಮನೆ-ಮನೆಗೆ ಹೋಗಿ ಮತದಾರರ ಪಟ್ಟಿ ಪರಿಷ್ಕರಣೆ ನೆಡೆಸಬೇಕು, ಕರಡುಪಟ್ಟಿ ತಯಾರಾದ ಮೇಲೆ ತಿದ್ದುಪಡಿ ಸಲ್ಲಿಸಲು ಜನರಿಗೆ ಕನಿಷ್ಠ ೬ ತಿಂಗಳ ಸಮಯಾವಕಾಶ ನೀಡಬೇಕೆಂಬ ಬೇಡಿಕೆಯು ಸೇರಿದಂತೆ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಗೆ ಕನಿಷ್ಠ ೭ ಅಂಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಪ್ರತಿಭಟನೆಯಲ್ಲಿ ಎದ್ದೇಳು ಕರ್ನಾಟಕದ ಜಿಲ್ಲಾಧ್ಯಕ್ಷ ಟಿ.ಎಲ್ ಗಣೇಶ್, ರಾಜ್ಯ ಸಂಚಾಲಕ ಗೌಸ್ ಮೊಹಿದ್ದೀನ್, ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಯೂಸುಫ್‌ಹಾದಿ, ಮಂಜು, ಉಪಸ್ಥಿತರಿದ್ದರು.

Protest demanding repeal of unconstitutional SIR

Share

Leave a comment

Leave a Reply

Your email address will not be published. Required fields are marked *

Don't Miss

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು ನೆರೆಯವರ ತೋಟದ ಮನೆಯ ಹಿಂಭಾಗ ಬೆಂಕಿ ಹಚ್ಚಿಕೊಂಡು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ....

Related Articles

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...

ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವ ನೆಪದಲ್ಲಿ ₹1.59 ಲಕ್ಷ ವಂಚನೆ

ಚಿಕ್ಕಮಗಳೂರು: ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸುವುದಾಗಿ ನಂಬಿಸಿ ಬ್ಯಾಂಕ್ ಅಧಿಕಾರಿಯಂತೆ ನಟಿಸಿದ ಸೈಬರ್ ವಂಚಕರು ವ್ಯಕ್ತಿಯೊಬ್ಬರ...