Home namma chikmagalur chikamagalur ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ
chikamagalurHomeLatest Newsnamma chikmagalur

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

Share
Share

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ.

ಮಧ್ಯರಾತ್ರಿ 1ಗಂಟೆ ಸುಮಾರಿಗೆ ಮಳೆ ಆರಂಭವಾಯಿತು. ಮಳೆಗಿಂತ ಬಿರುಗಾಳಿಯೇ ಜೋರಾಗಿತ್ತು. ಜತೆಗೆ ಗುಡುಗು ಮತ್ತು ಸಿಡಿಲಿನ ಅಬ್ಬರ ಜನರನ್ನು ಆತಂಕಗೊಳಿಸಿತು.

ನಗರದ ಕೋಟೆ ಬಡಾವಣೆ, ಹೊಸಮನೆ, ಜಯನಗರ, ಬೈಪಾಸ್ ರಸ್ತೆ, ಜ್ಯೋತಿನಗರದಲ್ಲಿ ದೊಡ್ಡ ಮರಗಳು ನೆಲಕ್ಕೆ ಉರುಳಿದವು. ಮರಗಳು ಬೀಳುವಾಗ ವಿದ್ಯುತ್ ತಂತಿಗಳು ಸಿಕ್ಕಿಕೊಂಡು ಕಂಬಗಳು ಮುರಿದು ಬಿದ್ದವು. ಅವುಗಳನ್ನು ತೆರವುಗೊಳಿಸುವ ಕಾರ್ಯ ಶನಿವಾರ ಸಂಜೆ ತನಕವೂ ನಡೆಯಿತು.

ಒಂದೇ ಗಂಟೆ ಮಳೆಗೆ ನಗರದಲ್ಲಿ 25 ವಿದ್ಯುತ್ ಕಂಬಗಳು, 16 ಮರಗಳು, 2 ವಿದ್ಯುತ್ ಪರಿವರ್ತಕಗಳು ಧರೆಗೆ ಉರುಳಿದ್ದವು. ನಗರಸಭೆ, ಮೆಸ್ಕಾಂ, ಅರಣ್ಯ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದರು. ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡ, ನಗರಸಭೆ ಅಧ್ಯಕ್ಷೆ ಭವ್ಯಾ ಮಂಜುನಾಥ್, ಆಯುಕ್ತ ಬಿ.ಸಿ. ಬಸವರಾಜ್‌, ತಹಶೀಲ್ದಾರ್ ರೇಷ್ಮಾಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಜಿಲ್ಲಾ ಆಟದ ಮೈದಾನದ ವ್ಯಾಯಾಮ ಶಾಲೆಯ ಮೇಲ್ಬಾಗದ ಕೊಠಡಿಯ ಶೀಟುಗಳು ಹಾರಿ ಹೋಗಿವೆ. ಎಚ್.ಸಿ. ಸುರೇಂದ್ರಗೌಡ ಅವರ ಮನೆಗೆ ಸಿಡಿಲು ಬಡಿದು ಚಾವಣಿಗೆ ಹಾನಿಯಾಗಿದೆ. ಚಾವಣಿಯ ಹೆಂಚು ಮನೆಯ ಮಲಗುವ ಕೋಣೆಯ ತುಂಬಾ ತುಂಬಿಕೊಂಡಿದ್ದವು. ಮಳೆ ಬಂದಾಗ ದಂಪತಿ ಎಚ್ಚರವಾಗಿದ್ದರಿಂದ ಮನೆಯಲ್ಲಿದ್ದವರಿಗೆ ತೊಂದರೆಯಾಗಿಲ್ಲ.

ಜ್ಯೋತಿ ನಗರದಲ್ಲಿರುವ ಕ್ರೀಡಾ ಇಲಾಖೆ ಆವರಣದಲ್ಲಿನ ವಸತಿ ನಿಲಯದ ಪಕ್ಕದ ಮರವೊಂದು ಮನೆಯೊಂದರ ಮೇಲೆ ಬಿದ್ದಿದೆ. ಸ್ಥಳಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಸಿ. ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕಮಗಳೂರು ಕ್ಲಬ್ ಕಾಂಪೌಂಡ್ ಮೇಲೆ ದೊಡ್ಡ ಮರವೊಂದು ಬಿದ್ದು, ಗೋಡೆ ಕುಸಿದಿದೆ. ನಗರದ ಸುತ್ತಮುತ್ತಲ ಗ್ರಾಮಗಳಾದ ಹಿರೇಗೌಜ, ಕೆಂಗನಹಳ್ಳಿ, ಕರಿಸಿದ್ದನಹಳ್ಳಿ ಸೇರಿ ಹಲವೆಡೆ ಮನೆಗಳ ಹೆಂಚು ಹಾರಿ ಹೋಗಿವೆ.

The entire city is shaken by heavy rain and thunder.

Share

Leave a comment

Leave a Reply

Your email address will not be published. Required fields are marked *

Don't Miss

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಹಲವು...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

Related Articles

ವೀರಶೈವ ಲಿಂಗಾಯತ ಸಮಾರಂಭದಲ್ಲಿ “ಕುರ್ಚಿ” ತಿಕ್ಕಾಟ ಹಲವು ಸ್ವಾಮಿಜೀಗಳ ವಿರೋದ

ಚಿಕ್ಕಮಗಳೂರು: ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸ್ವಾಮಿಗಳ ಮಧ್ಯೆ ಕುರ್ಚಿಗಾಗಿ ಪ್ರತಿರೋಧ ಪ್ಯಕ್ತಪಡಿಸಿ ಹೊರ ನಡೆದ ಘಟನೆ...

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...