Home namma chikmagalur chikamagalur ಗಾಯಗೊಂಡು ಚಿಕಿತ್ಸೆ ಫಲಿಸದೆ ನಿವೃತ್ತ ಸೈನಿಕ ನಿಧನ
chikamagalurCrime NewsHomeLatest Newsnamma chikmagalur

ಗಾಯಗೊಂಡು ಚಿಕಿತ್ಸೆ ಫಲಿಸದೆ ನಿವೃತ್ತ ಸೈನಿಕ ನಿಧನ

Share
Share

ಕಡೂರು: ತಂದೆಯ ನಿಧನದ ಸುದ್ದಿ ಕೇಳಿ ತವರಿಗೆ ಬರುತ್ತಿದ್ದ ನಿವೃತ್ತ ಸೈನಿಕರೊಬ್ಬರು ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಡೂರು ತಾಲ್ಲೂಕಿನ ಬಂಡಿಕೊಪ್ಪಲು ನಿವಾಸಿ, ನಿವೃತ್ತ ಸೈನಿಕ ನಟೇಶ್ (35) ಮೃತಪಟ್ಟ ದುರ್ದೈವಿ. ಕಂಚುಗಾರನಹಳ್ಳಿಯಲ್ಲಿದ್ದ ಇವರ ತಂದೆ ಚನ್ನಬಸಪ್ಪ ಅವರು ವಯೋಸಹಜ ಕಾಯಿಲೆಯಿಂದ ಮೇ 28 ರಂದು ನಿಧನರಾಗಿದ್ದರು.

ಈ ವಿಷಯ ತಿಳಿದ ನಟೇಶ್ ಅಂದು ಮಧ್ಯಾಹ್ನ ಬಂಡಿಕೊಪ್ಪಲಿನಿಂದ ತಮ್ಮ ಬೈಕ್ ನಲ್ಲಿ (KA 66 L-0910) ಜಿಗಣೇಹಳ್ಳಿ ಮಾರ್ಗವಾಗಿ ಬರುತ್ತಿದ್ದರು. ಈ ವೇಳೆ ನಾಗೇನಹಳ್ಳಿ ಸಮೀಪ ರಸ್ತೆಗೆ ಇದ್ದಕ್ಕಿದ್ದಂತೆ ನಾಯಿಯೊಂದು ಅಡ್ಡ ಬಂದಿದೆ.

ಅದನ್ನು ತಪ್ಪಿಸಲು ಹೋಗಿ ನಟೇಶ್ ಜೋರಾಗಿ ಬ್ರೇಕ್ ಹಾಕಿದಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ಅಪಘಾತದ ರಭಸಕ್ಕೆ ತಲೆ ಹಾಗೂ ಹೊಟ್ಟೆಯ ಭಾಗಕ್ಕೆ ತೀವ್ರ ಪೆಟ್ಟಾಗಿದ್ದ ಅವರನ್ನು ತಕ್ಷಣ ಚಿಕ್ಕಮಗಳೂರಿನ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೆನಪೋಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಮೇ 29 ರಂದು ರಾತ್ರಿ 10 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಮೃತರ ಸಹೋದರ ಉಮೇಶ್ ಕೆ.ಸಿ. ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Retired soldier dies after being injured and treatment fails

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...