Home namma chikmagalur chikamagalur ಮೂಡಿಗೆರೆ ಪ.ಪಂ. ಎದುರು ಕಸ ಹಾಕಿ ಪ್ರತಿಭಟನೆ
chikamagalurHomeLatest Newsnamma chikmagalur

ಮೂಡಿಗೆರೆ ಪ.ಪಂ. ಎದುರು ಕಸ ಹಾಕಿ ಪ್ರತಿಭಟನೆ

Share
Share

ಮೂಡಿಗೆರೆ: ಪ.ಪಂ. ಅಧಿಕಾರಿಗಳು ಪಟ್ಟಣದ ಘನತ್ಯಾಜ್ಯ ಸಂಗ್ರಹ, ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲಾಗಿದ್ದಾರೆಂದು ಪಟ್ಟಣದ ನಿವಾಸಿಗಳು ಹಾಗೂ ರೈತ ಮುಖಂಡರು ಸೋಮವಾರ ಪ.ಪಂ. ಎದುರು ಕಸ ಹಾಕಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಆರ್.ದುಗ್ಗಪ್ಪಗೌಡ ಮಾತನಾಡಿ, ಪಟ್ಟಣದಲ್ಲಿ ಜನರು ಎಲ್ಲೆಂದರಲ್ಲಿ ಕಸ ಹಾಕುತ್ತಿದ್ದಾರೆ. ಅಲ್ಲದೇ ಕಸ ಸಂಗ್ರಹ ವಾಹನಗಳು ಬರುತ್ತಿಲ್ಲ. ಅನೇಕ ವರ್ಷದಿಂದ ಈ ಸಮಸ್ಯೆಗೆ ಇಂದಿಗೂ ಪರಿಹಾರ ಕಂಡುಕೊಳ್ಳಲು ಪ.ಪಂ. ಆಡಳಿತಕ್ಕೆ ಸಾಧ್ಯವಾಗಿಲ್ಲ. ರಸ್ತೆ ಬದಿಯಲ್ಲಿ ಜನರು ಕಸ ಹಾಕತ್ತಿದ್ದರಿಂದ ಮಳೆ ಬಂದಾಗ ತ್ಯಾಜ್ಯವೆಲ್ಲಾ ಕೊಚ್ಚಿಕೊಂಡು ಕುಡಿಯುವ ನೀರು ಬಳಸುವ ಹಳ್ಳ ಕೊಳ್ಳಗಳಿಗೆ ಸೇರುತ್ತಿದೆ. ಕಸದ ರಾಶಿಯಿಂದ ಪಟ್ಟಣದ ಸೌಂಧರ್ಯ ಸಂಪೂರ್ಣ ನಾಶವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಎಸ್.ಪಿ.ರಾಜು ಮಾತನಾಡಿ, ಪ.ಪಂ. ನಿರ್ಲಕ್ಷ್ಯದಿಂದ ಪಟ್ಟಣವೇ ಗೊಬ್ಬು ವಾಸನೆಯಿಂದ ಕೂಡಿದೆ. ಈ ಬಗ್ಗೆ ಅನೇಕ ಬಾರಿ ಪ.ಪಂ. ಅಧಿಕಾರಿಗಳು ಹಾಗೂ ಗುತ್ತಿಗೆ ಪಡೆದ ವ್ಯಕ್ತಿಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ರಸ್ತೆ ಬದಿ ಕಸ ಹಾಕುವವರಿಗೆ ದೊಡ್ಡ ಮೊತ್ತದ ದಂಡ ಹಾಕಬೇಕು. ಕಸ ಸಂಗ್ರಹಣೆ ವಾಹನ ಪ್ರತಿನಿತ್ಯ ಎಲ್ಲಾ ವಾರ್ಡ್‌ಗಳಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ಕಸವನ್ನು ಕಚೇರಿಯೊಳಗೆ ಸುರಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೃಷಭ್‌ರಾಜ್, ಜಿಲ್ಲಾ ಸಂಚಾಲಕ ಪಿ.ಕೆ.ನಾಗೇಶ್‌ಗೌಡ, ಚಿಕ್ಕಮಗಳೂರು ತಾಲೂಕು ಅಧ್ಯಕ್ಷ ತುಳಸೇಗೌಡ, ತಾಲೂಕು ಸಂಚಾಲಕ ಡಿ.ಎಸ್.ರಮೇಶ್, ಕೃಷ್ಣ ಕಳಸ, ಪದ್ಮರಾಜ್, ಬಸವರಾಜಪ್ಪ ಮತ್ತಿತರರಿದ್ದರು.

Protest by throwing garbage in front of Mudigere P.P.

Share

Leave a comment

Leave a Reply

Your email address will not be published. Required fields are marked *

Don't Miss

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

Related Articles

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ...

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ...

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ...