Home namma chikmagalur chikamagalur ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು
chikamagalurCrime NewsHomeLatest Newsnamma chikmagalur

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

Share
Share

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯ ಮೂವರು ನಾಗರಿಕರು ನಾಪತ್ತೆಯಾಗಿರುವುದು ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ. ನಾಪತ್ತೆಯಾದವರ ಪತ್ತೆಗಾಗಿ ಪೊಲೀಸರು ಹಾಗೂ ಕುಟುಂಬದವರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಚಿಕಿತ್ಸೆ ಪಡೆಯುತ್ತಿದ್ದ 77 ವರ್ಷದ ವೃದ್ಧ ನಾಪತ್ತೆ:

ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಪ್ಪ (77 ವರ್ಷ) ಎಂಬ ವೃದ್ಧರೊಬ್ಬರು ಕಾಣೆಯಾಗಿದ್ದಾರೆ. ಈ ಹಿಂದೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಇವರಿಗೆ ಶಿವಮೊಗ್ಗದ ಚಂದ್ರಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಎಂದಿನಂತೆ ವಾಕಿಂಗ್ ಮುಗಿಸಿಕೊಂಡು ಬರುತ್ತಾರೆಂದು ಕಾಯುತ್ತಿದ್ದ ಕುಟುಂಬಸ್ಥರಿಗೆ ರಾತ್ರಿಯಾದರೂ ಇವರು ಮನೆಗೆ ಮರಳಿ ಬಾರದೇ ಇದ್ದಾಗ ಆತಂಕ ಶುರುವಾಗಿದೆ. ಸುತ್ತಮುತ್ತಲಿನ ಹಳ್ಳಿಗಳು ಹಾಗೂ ರಕ್ತಸಂಬಂಧಿಕರ ಮನೆಗಳಲ್ಲಿ ಹುಡುಕಾಡಿದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ, ಕಾಣೆಯಾದ ತಂದೆಯನ್ನು ಹುಡುಕಿಕೊಡುವಂತೆ ಮಗ ಬೀರೂರು ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ.

ಮನೆ ಕೆಲಸ ಮುಗಿಸಿಹೆಂಡತಿ ನಾಪತ್ತೆ:

ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಉಡೇವಾ ಗ್ರಾಮದ ನಿವಾಸಿ ಹೇಮಾವತಿ ಕೆ.ಟಿ. (34 ವರ್ಷ) ಎಂಬ ಗೃಹಿಣಿ ಮನೆಯಿಂದ ಯಾರಿಗೂ ಹೇಳದೆ ಕೇಳದೆ ನಾಪತ್ತೆಯಾಗಿದ್ದಾರೆ. ಸುಮಾರು 18 ವರ್ಷಗಳ ಹಿಂದೆ ಮದುವೆಯಾಗಿದ್ದ ಇವರಿಗೆ 15 ವರ್ಷದ ಮಗಳು ಹಾಗೂ 13 ವರ್ಷದ ಮಗನಿದ್ದಾನೆ. ಅನ್ನೋನ್ಯವಾಗಿದ್ದ ಸಂಸಾರದಲ್ಲಿ ಜೂನ್ 2 ರಂದು ಮಧ್ಯಾಹ್ನ ಪತಿ ಟಿವಿ ನೋಡುತ್ತಾ ಮಲಗಿದ್ದ ಸಮಯದಲ್ಲಿ ಮನೆ ಕೆಲಸ ಮುಗಿಸಿ ಹೋದ ಹೇಮಾವತಿ ರಾತ್ರಿಯಾದರೂ ಮನೆಗೆ ಬಂದಿಲ್ಲ. ತರೀಕೆರೆ, ಲಿಂಗದಹಳ್ಳಿ ಸುತ್ತಮುತ್ತ ಹಾಗೂ ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ಕಾರಣ ಪತಿ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಗುವನ್ನು ತಾಯಿಯ ಬಳಿ ಬಿಟ್ಟು ಹೋದ ಯುವತಿ:

ಕಡೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮಮ್ಮ ಎಂಬುವರ ಮಗಳು ಸಿಂಚನ (20 ವರ್ಷ) ನಾಪತ್ತೆಯಾಗಿರುವ ಮತ್ತೊಂದು ಪ್ರಕರಣ ಲಿಂಗದಹಳ್ಳಿ ಠಾಣೆಯಲ್ಲಿ ದಾಖಲಾಗಿದೆ. ಎರಡು ವರ್ಷಗಳ ಹಿಂದೆ ತುಮಕೂರು ಜಿಲ್ಲೆಯ ಮಂಜು ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದ ಸಿಂಚನಾಗೆ ಒಂದು ವರ್ಷದ ಗಂಡು ಮಗುವಿದೆ. ಕಳೆದ ಮೂರು ತಿಂಗಳಿನಿಂದ ತಾಯಿ ಮನೆಯಲ್ಲಿದ್ದ ಆಕೆ, ಮೇ 25 ರಂದು ಬೆಳಗ್ಗೆ ಗಂಡನ ಮನೆಗೆ ಹೋಗಿ ಬರುವುದಾಗಿ ಹೇಳಿ, ಮಗುವನ್ನು ತಾಯಿಯ ಬಳಿ ಬಿಟ್ಟು ಹೋಗಿದ್ದಾರೆ.

ಆದರೆ ಸಂಜೆ ವೇಳೆಗೆ ಪತಿ ಮಂಜುಗೆ ಕರೆ ಮಾಡಿ ವಿಚಾರಿಸಿದಾಗ ಆಕೆ ಅಲ್ಲಿಗೂ ತಲುಪಿಲ್ಲ ಎಂಬ ಆಘಾತಕಾರಿ ವಿಷಯ ತಿಳಿದುಬಂದಿದೆ. ತಾಯಿ ಮತ್ತು ಗಂಡ ಇಬ್ಬರೂ ಸೇರಿ ಬೆಂಗಳೂರು, ತುಮಕೂರು, ಕಡೂರು, ಅರಸೀಕೆರೆ ಸೇರಿದಂತೆ ಪ್ರಮುಖ ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಹುಡುಕಾಡಿದರೂ ಯುವತಿಯ ಸುಳಿವು ಸಿಕ್ಕಿಲ್ಲ. ಈ ಸಂಬಂಧ ಲಿಂಗದಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Increased number of missing cases in the district

Share

Leave a comment

Leave a Reply

Your email address will not be published. Required fields are marked *

Don't Miss

ನೀಟ್ ವಿದ್ಯಾರ್ಥಿಗಳ ಹಲ್ಲೆ ಖಂಡಿಸಿ ಸಿಪಿಐನಿಂದ ಪ್ರತಿಭಟನೆ

ಚಿಕ್ಕಮಗಳೂರು:  ನೀಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಸಿಪಿಐ ತಾಲ್ಲೂಕು ಘಟಕದಿಂದ ಗುರುವಾರ ನಗರದ ಆಜಾದ್‌ಪಾರ್ಕ್ ವೃತ್ತ ದಲ್ಲಿ ಮುಖಂಡರುಗಳು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ...

ಮಳೆಗಾಗಿ ಅಯ್ಯನಕೆರೆ, ಮದಗದಕೆರೆ ತಪ್ಪಲಿನಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಆತಂಕಗೊಂಡಿರುವ ಕಡೂರು ತಾಲೂಕಿನ ಅಯ್ಯನಕೆರೆ ಹಾಗೂ ಮದಗದಕೆರೆ ತಪ್ಪಲಿನ ಗ್ರಾಮಸ್ಥರು ಉತ್ತಮ ಮಳೆಯಾಗಿ ಕೆರೆಗಳು ತುಂಬಲಿ ಎಂಬ ಆಶಯದೊಂದಿಗೆ ವಿಶೇಷ ಪೂಜೆ ನೆರವೇರಿಸಿದರು. ಸುಮಾರು 1,300 ಹೆಕ್ಟೇರ್...

Related Articles

ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ

ಚಿಕ್ಕಮಗಳೂರು: ಸಮಾನತೆಯ ಆಶಯ ದೊಂದಿಗೆ ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ...

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ಶೃಂಗೇರಿ : ತಾಲೂಕಿನ ನೆಮ್ಮಾರ್ ಸರ್ಕಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ...

ಶಂಕರ ಭಾರತಿ ಗೋಶಾಲೆಗೆ ₹10 ಲಕ್ಷ ವೆಚ್ಚದ ನೂತನ ಗೋಶೆಡ್ ನಿರ್ಮಾಣ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸ್ಟೇಟ್...

ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ...