Home namma chikmagalur chikamagalur ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ
chikamagalurHomeLatest Newsnamma chikmagalur

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ

Share
Share

ಕಳಸ: ಸರ್ಕಾರದ ಬೇಜವಾಬ್ದಾರಿತನ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶದ ತೊಡೆ ತಟ್ಟಿದ್ದಾರೆ.

ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಕೋಡು ಕುಗ್ರಾಮದ ಜನರಿಗೆ ಮಾತ್ರ ಇದುವರೆಗೂ ರಸ್ತೆ ಭಾಗ್ಯ ಸಿಕ್ಕಿಲ್ಲ. ಈ ಕುರಿತು ಹತ್ತಾರು ಬಾರಿ ಸರ್ಕಾರ ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿ ಸಾಕಾದ ಗ್ರಾಮಸ್ಥರು, ಕೊನೆಗೆ ತಾವೇ ರಸ್ತೆ ದುರಸ್ತಿಗೆ ಇಳಿಯುವ ಮೂಲಕ ವ್ಯವಸ್ಥೆಗೆ ಚಾಟಿ ಬೀಸಿದ್ದಾರೆ.

ಕಳಸದಿಂದ ಐದಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರಸ್ತೆ ಹಳ್ಳಿಗರ ದೈನಂದಿನ ಬದುಕಿಗೆ ಅತ್ಯಂತ ಅನಿವಾರ್ಯವಾಗಿದೆ. ಆದರೆ ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿನಿತ್ಯ 8 ರಿಂದ 10 ಕಿಲೋಮೀಟರ್ ನಡೆದುಕೊಂಡೇ ಬರಬೇಕಾದ ದುಸ್ಥಿತಿ ಇದೆ.

ಅದರಲ್ಲೂ ಮಳೆಗಾಲದಲ್ಲಿ ದಾಖಲೆ ಮಳೆ ಬೀಳುವ ಕಳಸ ತಾಲೂಕಿನಲ್ಲಿ ಈ ಭಾಗದ ಪರಿಸ್ಥಿತಿ ಮತ್ತಷ್ಟು ಭೀಕರವಾಗುತ್ತದೆ. ತುರ್ತು ಸಂದರ್ಭ ಎದುರಾದರೆ ಗ್ರಾಮಕ್ಕೆ ಬರಲು ಯಾವುದೇ ವಾಹನ ಸವಾರರು ಸಿದ್ಧರಿರುವುದಿಲ್ಲ. ಇಷ್ಟೇ ಅಲ್ಲದೆ, ವಿದ್ಯುತ್ ಇಲ್ಲದ ಸಮಯದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಯಾರಿಗಾದರೂ ಕರೆ ಮಾಡೋಣ ಎಂದರೆ ನೆಟ್ವರ್ಕ್‌ ಕೂಡ ಸಿಗುವುದಿಲ್ಲ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿ ವರ್ಷ ಜನಪ್ರತಿನಿಧಿಗಳಿಗೆ ಮನವಿ ಮಾಡಿ ಸುಸ್ತಾಗಿರುವ ಮಲೆನಾಡಿಗರು, ಪ್ರತಿ ಮಳೆಗಾಲದಲ್ಲೂ ತಾವೇ ರಸ್ತೆಯನ್ನು ದುರಸ್ತಿ ಮಾಡಿಕೊಳ್ಳುತ್ತಾ ಬಂದಿದ್ದಾರೆ. ಈ ಬಾರಿಯೂ ವ್ಯವಸ್ಥೆಯನ್ನು ನಂಬಿ ಪ್ರಯೋಜನವಿಲ್ಲ ಎಂದು ಅರಿತು, ಇಡೀ ಹಳ್ಳಿಗರೆಲ್ಲ ಒಟ್ಟಾಗಿ ಸೇರಿ ರಸ್ತೆಯ ಗುಂಡಿಗಳನ್ನು ಮುಚ್ಚಿ ಸಂಚಾರ ಯೋಗ್ಯವಾಗಿ ಮಾಡಿಕೊಂಡಿದ್ದಾರೆ.

Malnadi residents outraged by government negligence

Share

Leave a comment

Leave a Reply

Your email address will not be published. Required fields are marked *

Don't Miss

ತೆಂಗಿನಕಾಯಿ ಕದ್ದ ಆರೋಪ: ಮಹಿಳೆ ಮೇಲೆ ಮೂವರಿಂದ ಹಲ್ಲೆ

ಕಡೂರು: ತೆಂಗಿನಕಾಯಿ ಕದ್ದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರ ಮೇಲೆ ಮೂವರು ಪುರುಷರು ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಪಾತೇನಗಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು...

ಸಾಲು ಸಾಲು ರಸ್ತೆ ಅಪಘಾತ – 12ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಂಭವಿಸಿದ ಸಾಲು ಸಾಲು ರಸ್ತೆ ಅಪಘಾತಗಳಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ಗೆ ಓಮಿನಿ ಕಾರು ಡಿಕ್ಕಿ: ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ...

Related Articles

ಶಂಕರ ಭಾರತಿ ಗೋಶಾಲೆಗೆ ₹10 ಲಕ್ಷ ವೆಚ್ಚದ ನೂತನ ಗೋಶೆಡ್ ನಿರ್ಮಾಣ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸ್ಟೇಟ್...

ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ...

ಕಡೂರು ತಾಲ್ಲೂಕು ಬರಪೀಡಿತ ತಾಲ್ಲೂಕು ಘೋಷಣೆಗೆ ವೈ.ಎಸ್.ವಿ.ದತ್ತ ಒತ್ತಾಯ

ಚಿಕ್ಕಮಗಳೂರು: ತೀವ್ರ ಬರಗಾಲಕ್ಕೆ ತುತ್ತಾಗಿರುವ ಕಡೂರು ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಿಸಬೇಕು. ತುರ್ತು...

ಸೊಪ್ಪು ಕಡಿಯಲು ಮರ ಹತ್ತಿದ್ದ ವ್ಯಕ್ತಿ ಕೆಳಗೆ ಬಿದ್ದು ಸಾವು

ಎನ್.ಆ‌ರ್. ಪುರ: ಸೊಪ್ಪು ಕಡಿಯಲು ಮರ ಹತ್ತಿದ್ದ ವೇಳೆ ಒಣಗಿದ ಕೊಂಬೆ ಮುರಿದು ಕೆಳಗೆ ಬಿದ್ದು...