Home namma chikmagalur chikamagalur ಧಾರಾಕಾರ ಮಳೆಗೆ ಕಾಫಿಸಿಟಿ ಫುಲ್ ಕೂಲ್
chikamagalurHomeLatest Newsnamma chikmagalur

ಧಾರಾಕಾರ ಮಳೆಗೆ ಕಾಫಿಸಿಟಿ ಫುಲ್ ಕೂಲ್

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು ಕಾಫಿ ಸಿಟಿ ಈಗ ಫುಲ್ ಕೂಲ್ ಆಗಿದೆ.

ಪ್ರಸಿದ್ಧ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಹಾಗೂ ದತ್ತಪೀಠದ ಸುತ್ತಮುತ್ತಲೂ ಭಾರಿ ಮಳೆಯಾಗಿದ್ದು ಗಿರಿಪ್ರದೇಶ ಧೋ ಎಂದು ಸುರಿದ ಮಳೆಗೆ ಮಿಂದೆದ್ದಿದೆ ವಾರಂತ್ಯದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಹಾಗೂ ಗಿರಿಪ್ರದೇಶಗಳಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ದಂಡು ಹರಿದುಬಂದಿದೆ.

ಆದರೆ, ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿದ್ದು ರಸ್ತೆ ಸರಿಯಾಗಿ ಕಾಣಿಸದೆ, ವಾಹನಗಳನ್ನು ಚಾಲನೆ ಮಾಡಲು ಸಾಧ್ಯವಾಗದೆ ಚಾಲಕರು ರಸ್ತೆ ಬದಿಯಲ್ಲೇ ನಿಲ್ಲಿಸುವಂತಾಗಿತ್ತು.

ಧಾರಾಕಾರ ಮಳೆಯ ನಡುವೆಯೂ ಚುಮುಚುಮು ಚಳಿ ಹಾಗೂ ಬೆಳ್ಳನೆಯ ಮಂಜಿನ ಹನಿಗಳ ಅದ್ಭುತ ವಾತಾವರಣಕ್ಕೆ ಪ್ರವಾಸಿಗರು ಮನಸೋತಿದ್ದಾರೆ. ಸುರಿಯುವ ಮಳೆಯ ಸಿಂಚನವನ್ನು ಆಸ್ವಾದಿಸುತ್ತಲೇ ಮಲೆನಾಡಿನ ನೈಸರ್ಗಿಕ ಸೌಂದರ್ಯವನ್ನು ಸವಿಯುತ್ತಿರುವ ಪ್ರವಾಸಿಗರು, ಈ ಪ್ರಕೃತಿಯ ವಿಸ್ಮಯಕ್ಕೆ ಹಾಗೂ ಹಸಿರ ಸಿರಿಯ ಅಂದಕ್ಕೆ ಫಿದಾ ಆಗಿದ್ದಾರೆ.

Coffee City completely cools down due to torrential rain

Share

Leave a comment

Leave a Reply

Your email address will not be published. Required fields are marked *

Don't Miss

ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ

ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಳ್ಳಿ ರಸ್ತೆಯ...

ಸಖರಾಯಪಟ್ಟಣದಲ್ಲಿ ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ

ಕಡೂರು: ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದ ಎಂದು ಭಾವಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ ಮಾಡಿರುವುದನ್ನು ಸಖರಾಯಪಟ್ಟಣ ಪೊಲೀಸರು ಪತ್ತೆ ಮಾಡಿದ್ದಾರೆ. ಜೂನ್ 13ರ ರಾತ್ರಿ ಸಖರಾಯಪಟ್ಟಣ ಪೊಲೀಸ್...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ರೂಬೆನ್ ಮೊಸಸ್ ಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ 

ಚಿಕ್ಕಮಗಳೂರು: ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರೂಬೆನ್ ಮೊಸಸ್ ರವರಿಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ ದೊರೆತಿದೆ....

ಹಿರಿಯ ನಾಗರಿಕರಿಗೆ ಪಿಂಚಣಿ ಸೌಲಭ್ಯ ನೀಡಲು ಮನವಿ

ಚಿಕ್ಕಮಗಳೂರು:  ಹಿರಿಯ ನಾಗರೀಕರಿಗೆ ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲ ವೇತನವನ್ನು ಒದಗಿಸಿಕೊಡಬೇಕು ಎಂದು ಆಗ್ರಹಿಸಿ...

ಜಲಾಶಯದ ನೀರು ಕುಡಿಯುವ ನೀರಿಗೆ ಬಳಕೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕ್ಷೀಣಿಸುತ್ತಿದ್ದು,...