Home namma chikmagalur chikamagalur ಘನತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿ ಜಿಲ್ಲೆಯಾಗಿ ಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
chikamagalurHomeLatest Newsnamma chikmagalur

ಘನತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿ ಜಿಲ್ಲೆಯಾಗಿ ಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

Share
Share

ಚಿಕ್ಕಮಗಳೂರು: ಘನತ್ಯಾಜ್ಯ ನಿರ್ವಹಣೆಯಲ್ಲಿ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚಿಸಿದರು.

ಘನತ್ಯಾಜ್ಯ ನಿರ್ವಹಣಾ ನಿಯಮಗಳು ೨೦೨೬ರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಮತ್ತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಘನತ್ಯಾಜ್ಯ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮನೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸರಿಯಾಗಿ ನಿರ್ವಹಿಸದಿದ್ದಲ್ಲಿ ಅದು ಹಳೆಯ ತ್ಯಾಜ್ಯವಾಗಿ ಮಾರ್ಪಟ್ಟು ಪರಿಸರಕ್ಕೆ ಹಾನಿಯುಂಟು ಮಾಡುತ್ತದೆ. ಆದ್ದರಿಂದ ಮನೆ ಮನೆ ಕಸ ಸಂಗ್ರಹಣೆಗೆ ಹೊಸ ನಿಯಮಗಳ ಪ್ರಕಾರ ನಾಲ್ಕು ರೀತಿಯ ವಿಂಗಡಣೆಗಳನ್ನು ಜಾರಿಗೆ ತರಬೇಕು. ವಿಂಗಡಿಸಿದ ಕಸವನ್ನು ಪ್ರತ್ಯೇಕವಾಗಿ ಸಂಸ್ಕರಣಾ ಘಟಕಗಳಿಗೆ ತಲುಪಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಮಗ್ರ ಮೇಲ್ವಿಚಾರಣಾ ತಂತ್ರಜ್ಞಾನ ಹಾಗೂ ಮ್ಯಾಪಿಂಗ್ ವ್ಯವಸ್ಥೆ ರೂಪಿಸಬೇಕೆಂದು ಹೇಳಿದರು.

ಈಗಾಗಲೇ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಚತಾ ವಾಹಿನಿಗಳ ಮೂಲಕ ಕಸವನ್ನು ವಿಲೇವಾರಿ ನಿರ್ವಹಿಸಲಾಗುತ್ತಿದ್ದು, ಕಸ ವಿಲೇವಾರಿ ಮಾಡುವವರಿಗೆ ಘನತ್ಯಾಜ್ಯ ನಿರ್ವಹಣೆ ನಿಯಮಗಳ ಬಗ್ಗೆ ಸೂಕ್ತ ತರಬೇತಿ ನೀಡಬೇಕು. ಎಲ್ಲ ಬೃಹತ್ ಪ್ರಮಾಣದ ತ್ಯಾಜ್ಯ ಉತ್ಪಾದಕರನ್ನು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಬೇಕು. ಅವರು ಎಷ್ಟು ತ್ಯಾಜ್ಯ ಸಂಗ್ರಹಣೆ ಹಾಗೂ ಸಂಸ್ಕರಣೆ ಮಾಡುತ್ತಿದ್ದಾರೆ ಹಾಗೂ ಎಷ್ಟು ಬಾಕಿ ಉಳಿದಿದೆ ಎಂಬ ಬಗ್ಗೆ ಸ್ಪಷ್ಟ ತಿಳುವಳಿಕೆ ನೀಡಬೇಕು. ಹೆಚ್ಚು ತ್ಯಾಜ್ಯ ಉತ್ಪತ್ತಿಯಾಗುವ ಸ್ಥಳಗಳಲ್ಲಿ ವೈಜ್ಞಾನಿಕ ಕಸ ವಿಂಗಡಣೆಗೆ ಆದ್ಯತೆ ನೀಡಬೇಕು ಎಂದರು.

ಪ್ಲಾಸ್ಟಿಕ್ ಬಾಟಲಿ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಮತ್ತು ಬಯೋಮೆಡಿಕಲ್ ತ್ಯಾಜ್ಯಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಎಂಪಾನಲ್  ಆಗಿರುವ ಅಧಿಕೃತ ಏಜೆನ್ಸಿಗಳ ಮೂಲಕ ಸಮರ್ಪಕ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.

ಪರಿಸರಕ್ಕೆ ಮಾರಕವಾಗಿರುವ ವಸ್ತುಗಳ ಬಳಕೆಯನ್ನು ಕಡಿಮೆ ಮಾಡಲು ಪರ್ಯಾಯ ಹಸಿರು ಉತ್ಪನ್ನಗಳನ್ನು ಉತ್ಪಾದಿಸುವ ಉದ್ದಿಮೆಗಳನ್ನು ಪ್ರೋತ್ಸಾಹಿಸಬೇಕು. ಮಾರುಕಟ್ಟೆಯಲ್ಲಿ ಪರಿಸರ ಸ್ನೇಹಿ ಉತ್ಪನ್ನಗಳು ಸುಲಭವಾಗಿ ದೊರೆಯುವಂತೆ ಮಾಡಬೇಕು ಎಂದ ಅವರು, ಈ ಕುರಿತು ಸಾರ್ವಜನಿಕ ಜಾಗೃತಿ ಮತ್ತು ಶಾಲಾ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಘನತ್ಯಾಜ್ಯ ನಿರ್ವಹಣಾ ನಿಯಮಗಳ ಅನುಸಾರ ಕಾರ್ಯ ನಿರ್ವಹಿಸುವ ಸಲುವಾಗಿ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಡನೆ ಮಾಲಿನ್ಯ ನಿಯಂತ್ರಣ ಮಂಡಳಿಯವರು ಸೂಕ್ತ ಸಹಕಾರ ನೀಡಲು ಸೂಚಿಸಿದ ಅವರು, ಎಂ.ಆರ್.ಎಫ್ ಘಟಕಗಳ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ನಿರ್ವಹಣಾ ನಿಯಮಗಳು-೨೦೨೬ ರ ಪರಿಣಾಮಕಾರಿ ಅನುಷ್ಠಾನದ ಕುರಿತು ಅಗತ್ಯ ತರಬೇತಿ ನೀಡಬೇಕು. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳು ತಮ್ಮ ಸುತ್ತಮುತ್ತಲಿನ ಘನತ್ಯಾಜ್ಯ ವಿಲೇವಾರಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಪ್ರವಾಸೋದ್ಯಮ ಇಲಾಖೆ ಜಿಲ್ಲೆಯ ಪ್ರವಾಸಿ ಹಾಗೂ ಪ್ರೇಕ್ಷಣೀಯ ಸ್ಥಳಗಳಲ್ಲಿ ಘನತ್ಯಾಜ್ಯ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಗೌರವ ಕುಮಾರ್ ಶೆಟ್ಟಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗೋಪಾಲ್ ಜಾಧವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ನಗರಸಭೆಯ ಪೌರಾಯುಕ್ತ ಬಿ.ಸಿ.ಬಸವರಾಜು, ಅಜ್ಜಂಪುರ ತಹಸೀಲ್ದಾರ್ ವಿನಾಯಕ ಸಾಗರ್, ಕಡೂರು ತಹಸೀಲ್ದಾರ್ ಪೂರ್ಣಿಮಾ ಮುಂತಾದವರು ಇದ್ದರು.

DC instructs Salu officials to be a model district in solid waste management

Share

Leave a comment

Leave a Reply

Your email address will not be published. Required fields are marked *

Don't Miss

5.50 ಕೋಟಿಯ ಟಿಂಬರ್ ವ್ಯವಹಾರದಲ್ಲಿ ವಂಚನೆ

ಚಿಕ್ಕಮಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಂಬರ್ ವ್ಯವಹಾರಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ವಂಚನೆ, ಜಗಳ ಹಾಗೂ ಕೊಲೆ ಬೆದರಿಕೆ ಪ್ರಕರಣವೊಂದು ಆಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಗೋಣಿಕೊಪ್ಪ...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್ ಮಾತು ಕೇಳಿದ ಮೇಲೆ ರಾಜೀನಾಮೆ ಕೊಟ್ಟಿದ್ದು ,ಯಾವ ಕಿತ್ತಾಟವೂ ನಡೆಯಲಿಲ್ಲಾ ಅಷ್ಟೊಂದು ತಣ್ಣಗೆ ಪ್ರತಿಕ್ರಿಯೆ...

Related Articles

ಬೆಲೆಏರಿಕೆ ಖಂಡಿಸಿ ನಗರದಲ್ಲಿ ಬ್ಲಾಕ್‌ಕಾಂಗ್ರೆಸ್ ವಿನೂತನ ಪ್ರತಿಭಟನೆ

ಚಿಕ್ಕಮಗಳೂರು : ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಚಿಕ್ಕಮಗಳೂರು ಹಾಗೂ ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್...

ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿದ ಯುವಕ ಬಂಧನ

ಚಿಕ್ಕಮಗಳೂರು: ಸರ್ಕಾರಿ ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್‌ಗೆ ಮಧ್ಯರಾತ್ರಿ ನುಗ್ಗಿ ಯುವಕಮೋರ್ವ ಓಡಾಟ ನಡೆಸಿರುವ ಘಟನೆ...

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ

ಕೊಟ್ಟಿಗೆಹಾರ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ...

ತೀವ್ರಗೊಂಡ ಉದ್ಯಮಿ ಪತ್ನಿಯ ಆತ್ಮಹತ್ಯೆ ಪ್ರಕರಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು ನಗರದ ಉದ್ಯಮಿ ರಾಜೇಶ್ ಅವರ ಪತ್ನಿ ಸುಮ (55)...