Home namma chikmagalur ajjampura ಬಿಜೆಪಿ ಮುಖಂಡನಿಂದ ಯುವಕನ ಮೇಲೆ ರಾಡ್‌ನಿಂದ ಹಲ್ಲೆ
ajjampuraCrime NewsHomeLatest Newsnamma chikmagalur

ಬಿಜೆಪಿ ಮುಖಂಡನಿಂದ ಯುವಕನ ಮೇಲೆ ರಾಡ್‌ನಿಂದ ಹಲ್ಲೆ

Share
Share

ಅಜ್ಜಂಪುರ : ಬೈಕ್ ವೇಗವಾಗಿ ಚಲಾಯಿಸಿದ್ದಾನೆ ಎಂಬ ಕಾರಣಕ್ಕೆ ಯುವಕನ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಆರೋಪ ಅಜ್ಜಂಪುರ ಪಟ್ಟಣದಲ್ಲಿ ಕೇಳಿಬಂದಿದೆ.

ಘಟನೆಯ ಬಳಿಕ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಅಜ್ಜಂಪುರ ನಿವಾಸಿ ಮಹಮದ್ ಜೈದ್ ಎಂಬ ಯುವಕ ಹಲ್ಲೆಗೆ ಒಳಗಾಗಿದ್ದು, ಕೈ ಮುರಿತ ಸೇರಿದಂತೆ ದೇಹದ ಹಲವು ಭಾಗಗಳಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಸೋಮವಾರ ಸಂಜೆ ತಮ್ಮನನ್ನು ಶಾಲೆಯಿಂದ ಕರೆತರಲು ಸ್ಕೂಟಿಯಲ್ಲಿ ತೆರಳಿದ್ದ ಜೈದ್, ಶಾಲೆ ಬಿಡುವ ಸಮಯವಾಗದ ಕಾರಣ ಕೆಲ ಬಾರಿ ಶಾಲೆಯ ಸುತ್ತಮುತ್ತ ಓಡಾಡಿದ್ದಾನೆ ಎನ್ನಲಾಗಿದೆ.

ಈ ವೇಳೆ “ಬೈಕ್ ಅನ್ನು ವೇಗವಾಗಿ ಓಡಿಸುತ್ತೀಯಾ” ಎಂಬ ವಿಚಾರವಾಗಿ ಮಾತಿನ ಚಕಮಕಿ ಆರಂಭವಾಗಿ, ಬಳಿಕ ಬಿಜೆಪಿ ಮುಖಂಡ ಸಂತೋಷ್ ಮಾಳೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಜೈದ್ ರಕ್ತದ ಮಡುವಿನಲ್ಲಿ ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆಯ ಸುದ್ದಿ ಹರಡುತ್ತಿದ್ದಂತೆ ನೂರಾರು ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರು ಅಜ್ಜಂಪುರ ಪೊಲೀಸ್ ಠಾಣೆ ಬಳಿ ಜಮಾಯಿಸಿ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ತಡರಾತ್ರಿವರೆಗೂ ಠಾಣೆ ಆವರಣದಲ್ಲಿ ಜನರು ನೆರೆದಿದ್ದರು.

ಆರೋಪಿತ ಸಂತೋಷ್ ಮಾಳೆ ವಿರುದ್ಧ ಅಜ್ಜಂಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದಾರೆ. ಆರೋಪಿಯ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

BJP leader attacks youth with rod

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...