Home namma chikmagalur chikamagalur ಜನಪ್ರತಿನಿಧಿ ನಿರ್ಲಕ್ಷ್ಯಕ್ಕೆ ಬೇಸತ್ತು ದಂಪತಿ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ
chikamagalurLatest Newsnamma chikmagalur

ಜನಪ್ರತಿನಿಧಿ ನಿರ್ಲಕ್ಷ್ಯಕ್ಕೆ ಬೇಸತ್ತು ದಂಪತಿ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ

Share
Share

ಮೂಡಿಗೆರೆ: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ದಂಪತಿ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕಡಿದಾಳು ಗ್ರಾಮದ ಸುಧಾ ಮತ್ತು ರಘುಪತಿ ದಂಪತಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಈ ಕಾರ್ಯಕ್ಕೆ ಈಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕಡಿದಾಳು ಗ್ರಾಮದ ಮುಖ್ಯ ರಸ್ತೆಯು ಸುಮಾರು ಎರಡು ಕಿಲೋಮೀಟರ್‌ವರೆಗೂ ಸಂಪೂರ್ಣವಾಗಿ ಗುಂಡಿಬಿದ್ದಿದ್ದು, ವಾಹನ ಸವಾರರು ದಿನನಿತ್ಯ ಪ್ರಾಣದ ಹಂಗು ತೊರೆದು ಸಂಚರಿಸುವಂತಾಗಿದೆ. ಹಲವು ವರ್ಷಗಳಿಂದ ಕಾಡುತ್ತಿರುವ ಈ ಸಮಸ್ಯೆಯ ಕುರಿತು ಸ್ಥಳೀಯರು ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ತಮ್ಮ ಮನೆಯ ಮುಂಭಾಗದ ರಸ್ತೆಯ ಗುಂಡಿಗಳಲ್ಲಿ ಬಿದ್ದು ಸಾಕಷ್ಟು ಜನರು ಗಾಯಗೊಂಡಿರುವುದನ್ನು ಕಂಡ ರಘುಪತಿ ಅವರು, ವ್ಯವಸ್ಥೆಯ ವಿರುದ್ಧ ಆಕ್ರೋಶಗೊಂಡು ತಾವೇ ರಸ್ತೆ ಸರಿಪಡಿಸಲು ನಿರ್ಧರಿಸಿದ್ದಾರೆ. ಕಳೆದ ನವೆಂಬರ್ ತಿಂಗಳಿನಲ್ಲಿಯೇ ತಮ್ಮ ವೈಯಕ್ತಿಕ ಹಣದಿಂದ 28 ಲೋಡ್ ಮಣ್ಣು ತಂದು ರಸ್ತೆಯ ಗುಂಡಿಗಳನ್ನು ಮುಚ್ಚಿದ್ದ ರಘುಪತಿ ಅವರಿಗೆ ಈಗ ಮತ್ತೆ ಮಳೆ ಪ್ರಾರಂಭವಾಗಿರುವುದು ಆತಂಕ ತಂದಿದೆ.

ಮಳೆಗೆ ಮಣ್ಣು ಕೊಚ್ಚಿಹೋಗಿ ವಾಹನಗಳು ಜಾರುತ್ತಿರುವುದರಿಂದ, ಪ್ರಸ್ತುತ ಸ್ವಂತ ಖರ್ಚಿನಲ್ಲಿ ಒಂದು ಲಕ್ಷ ರೂಪಾಯಿ ವೆಚ್ಚ ಮಾಡಿ ಜಲ್ಲಿಕಲ್ಲುಗಳನ್ನು ತರಿಸಿ ರಸ್ತೆ ದುರಸ್ತಿ ಮಾಡುತ್ತಿದ್ದಾರೆ. ಈ ರಸ್ತೆಯ ದುಃಸ್ಥಿತಿಯಿಂದಾಗಿ ಶಾಲಾ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

Couple fed up with public representative’s negligence repairs road at their own expense

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...