Home namma chikmagalur chikamagalur ಮೂಡಿಗೆರೆಯಲ್ಲಿ ಅಪ್ರಾಪ್ತ ಮೇಲೆ ಸಾಮೂಹಿಕ ಅತ್ಯಾಚಾರ
chikamagalurCrime NewsHomeLatest Newsnamma chikmagalur

ಮೂಡಿಗೆರೆಯಲ್ಲಿ ಅಪ್ರಾಪ್ತ ಮೇಲೆ ಸಾಮೂಹಿಕ ಅತ್ಯಾಚಾರ

Share
Share

ಚಿಕ್ಕಮಗಳೂರು: ಅಪ್ರಾಪ್ತಯೊಬ್ಬಳ ಫೋಟೋಗಳನ್ನು ಮುಂದಿಟ್ಟುಕೊಂಡು ಐವರು ಯುವಕರು ಆಕೆಯ ಮೇಲೆ ನಿರಂತರವಾಗಿ ಬ್ಲಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಗಂಭೀರ ಆರೋಪವೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಕೇಳಿಬಂದಿದೆ.

ಈ ಘೋರ ದೌರ್ಜನ್ಯದ ಪರಿಣಾಮವಾಗಿ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಕೆಲ ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಹಿನ್ನೆಲೆಯಲ್ಲಿ ಇಡೀ ಪ್ರಕರಣ ಸದ್ಯ ಸಾರ್ವಜನಿಕವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಮೂಡಿಗೆರೆ ತಾಲ್ಲೂಕಿನ ಠಾಣೆಯೊಂದರಲ್ಲಿ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಐವರು ಯುವಕರ ಪೈಕಿ ಕುಶಾ, ನಿತೇಶ್, ಸಚಿನ್ ಮತ್ತು ಚಂದ್ರಶೇಖ‌ರ್ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದೇ ವೇಳೆ ಪ್ರಕರಣದ ಮತ್ತೊಬ್ಬ ಆರೋಪಿ ಸುರೇಶ್ ಎಂಬಾತ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಈ ಪ್ರಕರಣದ ಪ್ರಮುಖ ಆರೋಪಿ ಈ ಹಿಂದೆಯೂ ಪೋಕೋ ಪ್ರಕರಣವೊಂದರಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದ ಎನ್ನುವ ಕರಾಳ ಸತ್ಯ ಬಯಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಜಿತೇಂದ್ರ ಕುಮಾರ್ ದಯಾಮ್ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದಿದ್ದಾರೆ. ಸದ್ಯ ಸರ್ಕಲ್ ಇನ್ಸ್‌ಪೆಕ್ಟರ್ ರಾಜಶೇಖರ್ ಹಾಗೂ ಪಿಎಸ್‌ಐ ಶ್ರೀನಾಥ್ ರೆಡ್ಡಿ ಅವರ ನೇತೃತ್ವದ ಪೊಲೀಸ್ ತಂಡ ಪ್ರಕರಣದ ಆಳವಾದ ತನಿಖೆಯನ್ನು ಕೈಗೆತ್ತಿಕೊಂಡು ಚುರುಕಿನಿಂದ ಮುಂದುವರೆಸಿದ್ದಾರೆ.

Gang rape of a minor

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...