Home namma chikmagalur chikamagalur ತೀವ್ರಗೊಂಡ ಉದ್ಯಮಿ ಪತ್ನಿಯ ಆತ್ಮಹತ್ಯೆ ಪ್ರಕರಣ
chikamagalurCrime NewsHomeLatest Newsnamma chikmagalur

ತೀವ್ರಗೊಂಡ ಉದ್ಯಮಿ ಪತ್ನಿಯ ಆತ್ಮಹತ್ಯೆ ಪ್ರಕರಣ

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು ನಗರದ ಉದ್ಯಮಿ ರಾಜೇಶ್ ಅವರ ಪತ್ನಿ ಸುಮ (55) ಆಲೇನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಶ್ರೀಮಂತ ಕುಟುಂಬದ ಗೃಹಿಣಿಯ ಈ ದಿಢೀರ್ ಸಾವು ತೀವ್ರ ಆಘಾತ ಮತ್ತು ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳನ್ನು ಮೂಡಿಸಿದೆ.

ಘಟನಾ ಸ್ಥಳದಲ್ಲಿ ಸುಮ ಅವರು ಬರೆದಿದ್ದಾರೆನ್ನಲಾದ ಡೆತ್‌ನೋಟ್ ಪತ್ತೆಯಾಗಿದ್ದು, ಸಾವಿನ ಹಿಂದಿರುವ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರಿಗೆ ಇದು ಪ್ರಮುಖ ಸಾಕ್ಷಿಯಾಗಿದೆ. ಆದರೆ, ಆ ಪತ್ರದಲ್ಲಿರುವ ಅಂಶಗಳನ್ನು ಪೊಲೀಸರು ಸದ್ಯಕ್ಕೆ ಗೌಪ್ಯವಾಗಿಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಬಸವನಹಳ್ಳಿ ಠಾಣೆಯ ಪೊಲೀಸರು, ಸೋಕೋ (SOCO) ತಂಡ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ರಿವಾಲ್ವ‌ರ್ ಮತ್ತು ಡೆತ್‌ ನೋಟ್ ಸೇರಿದಂತೆ ಪ್ರಮುಖ ಸಾಕ್ಷ್ಯಾಧಾರಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮೃತರ ಪುತ್ರ ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೇಲ್ನೋಟಕ್ಕೆ ಇದು ಪಿಸ್ತೂಲಿನಿಂದ ಮಾಡಿಕೊಂಡ ಆತ್ಮಹತ್ಯೆಯಂತೆ ಕಂಡುಬರುತ್ತಿದೆ ಎಂದು ತಿಳಿಸಿದ್ದು ತನಿಖೆಯ ನಂತರವಷ್ಟೇ ಈ ನಿಗೂಢ ಸಾವಿನ ಹಿಂದಿನ ನಿಜವಾದ ಸತ್ಯಾಂಶ ಹೊರಬರಬೇಕಿದೆ.

Suicide case of businessman’s wife escalated

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...