Home namma chikmagalur chikamagalur ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ
chikamagalurHomeLatest Newsnamma chikmagalur

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ

Share
Share
ಕೊಟ್ಟಿಗೆಹಾರ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ ವ್ಯಕ್ತವಾಗಿದೆ.
ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಗೆ ಒಳಪಡುವ ಘಾಟಿ ರಸ್ತೆಯ ತಡೆಗೋಡೆಯ ಸಮೀಪ ಚಿರತೆ ಕಾಣಿಸಿಕೊಂಡಿದೆ. ಈ ಮಾರ್ಗದಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಮಳೆಗಾಲ ಆರಂಭವಾಗಿರುವುದರಿಂದ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ.
ಮಳೆ ಹಾಗೂ ದಟ್ಟ ಮಂಜಿನಿಂದ ದೃಶ್ಯತೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಬದಿ ಅಥವಾ ಅರಣ್ಯ ಪ್ರದೇಶದ ಸಮೀಪ ಕಾಡುಪ್ರಾಣಿಗಳ ಚಲನೆ ತಕ್ಷಣ ಗಮನಕ್ಕೆ ಬಾರದಿರುವ ಸಾಧ್ಯತೆ ಇದೆ. ಇಂತಹ ಸಂದರ್ಭಗಳಲ್ಲಿ ಫೋಟೋ ಅಥವಾ ಸೆಲ್ಫಿ ಪಡೆಯಲು ವಾಹನದಿಂದ ಇಳಿಯುವ ಪ್ರವಾಸಿಗರು ಹೆಚ್ಚಿನ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.
ಚಾರ್ಮಾಡಿ ಘಾಟಿ ಸಂಪೂರ್ಣ ಅರಣ್ಯ ವಲಯವಾಗಿರುವುದರಿಂದ ಕಾಡುಪ್ರಾಣಿಗಳ ಸಂಚಾರ ಸಹಜ. ಆದರೆ ಮಾನವ ಚಟುವಟಿಕೆ ಹೆಚ್ಚಿರುವ ರಸ್ತೆಯ ಸಮೀಪ ಅವು ಕಾಣಿಸಿಕೊಂಡಿರುವುದು ಗಮನಾರ್ಹವಾಗಿದೆ. ಹೀಗಾಗಿ ವಾಹನ ನಿಲ್ಲಿಸುವಾಗ ಸುರಕ್ಷ ಸ್ಥಳ ಆಯ್ಕೆ ಮಾಡುವುದು, ಗುಂಪಾಗಿ ರಸ್ತೆ ಅಂಚಿಗೆ ತೆರಳುವುದು ಹಾಗೂ ಕಾಡುಪ್ರಾಣಿಗಳ ಹತ್ತಿರ ಹೋಗಲು ಯತ್ನಿಸುವುದನ್ನು ತಪ್ಪಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
Leopard sighted at Charmadi Ghat
Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...