Home namma chikmagalur chikamagalur ಕಿಡಿಗೇಡಿಗಳ ಅಟ್ಟಹಾಸಕ್ಕೆ ವಾಹನಗಳ ಗಾಜಿಗೆ ಹಾನಿ
chikamagalurCrime NewsHomeLatest Newsnamma chikmagalur

ಕಿಡಿಗೇಡಿಗಳ ಅಟ್ಟಹಾಸಕ್ಕೆ ವಾಹನಗಳ ಗಾಜಿಗೆ ಹಾನಿ

Share
Share

ಚಿಕ್ಕಮಗಳೂರು:  ನಗರದ ತಮಿಳು ಕಾಲೋನಿಯ ಅಕ್ಸ ಮಸೀದಿ ರಸ್ತೆಯಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಎಂಟಕ್ಕೂ ಹೆಚ್ಚು ವಾಹನಗಳ ಗಾಜುಗಳನ್ನು ಪುಡಿಗೈದು, ಒಳಗಿದ್ದ ನಗದನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ತಮಿಳು ಕಾಲೋನಿಯ ಲಾರಿ ಸ್ಟ್ಯಾಂಡ್ ಸಮೀಪದ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಮಾಲೀಕರು ಮನೆಗೆ ತೆರಳಿದ್ದರು. ಬೆಳಿಗ್ಗೆ ಬಂದು ನೋಡಿದಾಗ ಟಾಟಾ ಏಸ್ ಸೇರಿದಂತೆ ಹಲವು ವಾಹನಗಳ ಮುಂಭಾಗದ ಗಾಜುಗಳು ಜಖಂಗೊಂಡಿರುವುದು ಕಂಡುಬಂದಿದೆ. ಕಿಡಿಗೇಡಿಗಳು ವಾಹನಗಳ ಗಾಜುಗಳನ್ನು ಒಡೆದು ಮಾತ್ರವಲ್ಲದೆ, ಡ್ಯಾಶ್‌ಬೋರ್ಡ್‌ಗಳನ್ನು ಜಖಂಗೊಳಿಸಿ ಒಳಗಿದ್ದ ಹಣವನ್ನು ದೋಚಿರುವ ಆರೋಪ ಕೇಳಿಬಂದಿದೆ.

ಸಂತ್ರಸ್ತ ವಾಹನ ಮಾಲೀಕರೊಬ್ಬರ ಪ್ರಕಾರ, ಟಾಟಾ ಏಸ್ ವಾಹನದಲ್ಲಿದ್ದ ಸುಮಾರು 25 ಸಾವಿರ ರೂ. ವ್ಯಾಪಾರದ ಹಣ ಕಳ್ಳರ ಪಾಲಾಗಿದೆ. ದುಡಿಮೆಯ ಹಣ ಕಳೆದುಕೊಂಡಿರುವ ಚಾಲಕರು ಮತ್ತು ವಾಹನ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರ ಮಾಹಿತಿ ಪ್ರಕಾರ, ಈ ಭಾಗದಲ್ಲಿ ಇಂತಹ ಕೃತ್ಯಗಳು ಹೊಸದಲ್ಲ. ಈ ಹಿಂದೆ ಕೂಡ ಹಲವು ಬಾರಿ ವಾಹನಗಳ ಗಾಜು ಒಡೆಯುವ ಘಟನೆಗಳು ನಡೆದಿದ್ದು, ಕಿಡಿಗೇಡಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಸ್ತೆ ಬದಿಯಲ್ಲಿ ನಿಂತಿರುವ ಗುಜರಿ ಹಾಗೂ ಬಳಕೆಯಲ್ಲಿಲ್ಲದ ವಾಹನಗಳು ಸಮಾಜಘಾತುಕ ಚಟುವಟಿಕೆಗಳಿಗೆ ತಾಣವಾಗಿವೆ ಎಂಬ ಆರೋಪವೂ ಕೇಳಿಬಂದಿದೆ

Vehicle windows damaged due to mischievous behavior

Share

Leave a comment

Leave a Reply

Your email address will not be published. Required fields are marked *

Don't Miss

ನಾಗಲಕ್ಷ್ಮಿ ಚಿತ್ರಮಂದಿರದ ಪ್ರದರ್ಶನ ಸ್ಥಗಿತ

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು ಬಂದ್ ಮಾಡಿಸಿದರು. ಕಂದಾಯ ಇಲಾಖೆ, ಪೊಲೀಸ್, ಅಗ್ನಿಶಾಮಕ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿ ಚಿತ್ರಮಂದಿರದಲ್ಲಿ...

ನಕಲಿ ಛಾಪಕಾಗದ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ವಂಚನೆ

ನರಸಿಂಹರಾಜಪುರ: ನಕಲಿ ಛಾಪಕಾಗದ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ವಂಚಿಸಿದ ಆರೋಪದ ಮೇಲೆ ಡಿಜಿಟಲ್ ಸಂಸ್ಥೆ ಮತ್ತು ಗುತ್ತಿಗೆದಾರನ ವಿರುದ್ಧ ಪೊಲೀಸರು ಎಫ್‌ಐಆ‌ರ್ ದಾಖಲಿಸಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ನರಸಿಂಹರಾಜಪುರ ಉಪವಿಭಾಗದ ವ್ಯಾಪ್ತಿಯಲ್ಲಿ...

Related Articles

ಮಲೆನಾಡಿನಲ್ಲಿ ಮಳೆ – ಬಯಲ ಸೀಮೆಯಲ್ಲಿ ಬರ-ಬರ

ಚಿಕ್ಕಮಗಳೂರು:  ಮಲೆನಾಡು ಪ್ರದೇಶಗಳಲ್ಲಿ ಮಳೆ ಬರುತ್ತಿದೆ ಆದರೆ ಬಯಲು ಪ್ರದೇಶದಲ್ಲಿ ಮಳೆ ಬಾರದೆ ರೈತರು ಮತ್ತು...

ಯುವಕರ ಗುಂಪಿನಿಂದ ನಡುರಸ್ತೆಯಲ್ಲೇ ಪರಸ್ಪರ ಹೊಡೆದಾಟ

ಚಿಕ್ಕಮಗಳೂರು: ಮಧ್ಯರಾತ್ರಿ ಯುವಕರ ಗುಂಪೊಂದು ನಡುರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡಿರುವ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಚಿಕ್ಕಮಗಳೂರು...

ಮಗಳ ಅಶ್ಲೀಲ ಫೋಟೋ – ತಾಯಿಗೇ ಹಣಕ್ಕಾಗಿ ಬ್ಲ್ಯಾಕ್‌ಮೇಲ್

ಚಿಕ್ಕಮಗಳೂರು: ಮಗಳ ಅಶ್ಲೀಲ ಫೋಟೋಗಳನ್ನು ಆಕೆಯ ತಾಯಿಗೇ ಕಳುಹಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಬೆಂಗಳೂರು ಮೂಲದ...

ಬೈಕ್‌ಗೆ ಡಿಕ್ಕಿಯಾಗಿ ತೋಟಕ್ಕೆ ನುಗ್ಗಿದ ಕೆ.ಎಸ್.ಆರ್.ಟಿ.ಸಿ ಬಸ್

ಚಿಕ್ಕಮಗಳೂರು : ಜಿಲ್ಲೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ರಸ್ತೆ ದಾಟುತ್ತಿದ್ದ ನಾಗರಹಾವನ್ನು ಕಂಡು ಬೈಕ್...