Home namma chikmagalur chikamagalur ಎರಡು ದೇವಸ್ಥಾನಗಳ ಬೀಗ ಒಡೆದು ಚಿನ್ನಾಭರಣ ಕಳವು
chikamagalurCrime NewsHomeLatest Newsnamma chikmagalur

ಎರಡು ದೇವಸ್ಥಾನಗಳ ಬೀಗ ಒಡೆದು ಚಿನ್ನಾಭರಣ ಕಳವು

Share
Share

ಚಿಕ್ಕಮಗಳೂರು: ಒಂದೇ ದಿನ ಎರಡು ದೇವಸ್ಥಾನಗಳ ಬೀಗ ಒಡೆದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಭೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪ್ರಸಿದ್ದ ಶ್ರೀ ಚನ್ನಬಸವೇಶ್ವರ ದೇವಸ್ಥಾನ ಹಾಗೂ ಶ್ರೀ ಕಾಳಿಕಾಂಬ ದೇವಸ್ಥಾನಗಳಲ್ಲಿ ಈ ಸರಣಿ ಕಳ್ಳತನ ಸಂಭವಿಸಿದೆ. ಬುಧವಾರ ಎಂದಿನಂತೆ ಪೂಜಾ ಕಾರ್ಯಗಳನ್ನು ಮುಗಿಸಿ ಅರ್ಚಕರು ದೇವಸ್ಥಾನದ ಬಾಗಿಲು ಹಾಕಿಕೊಂಡು ಮನೆಗೆ ತೆರಳಿದ್ದರು.

ಮರುದಿನ ಮುಂಜಾನೆ 6-00 ಗಂಟೆಯ ಸಮಯದಲ್ಲಿ ಗ್ರಾಮದ ಮಹಿಳೆಯರು ದೇವಸ್ಥಾನದ ಮುಂಭಾಗ ಸ್ವಚ್ಛಗೊಳಿಸಲು ಹೋದಾಗ ಬಾಗಿಲಿನ ಬೀಗ ಮುರಿದಿರುವುದು ಮತ್ತು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಖದೀಮರು ಮೊದಲು ಚನ್ನಬಸವೇಶ್ವರ ದೇವಸ್ಥಾನದ ಒಳನುಗ್ಗಿ ಅಲ್ಲಿದ್ದ ಕಬ್ಬಿಣದ ಹುಂಡಿಯನ್ನು ಎಗರಿಸಿದ್ದಾರೆ. ಈ ಹುಂಡಿಯಲ್ಲಿ ಅಂದಾಜು 8,000 ರೂ. ಕಾಣಿಕೆ ಹಣವಿತ್ತು ಎನ್ನಲಾಗಿದೆ.

ನಂತರ ಪಕ್ಕದಲ್ಲೇ ಇದ್ದ ಶ್ರೀ ಕಾಳಿಕಾಂಬ ದೇವಸ್ಥಾನದ ಬಾಗಿಲಿನ ಬೀಗ ಒಡೆದು ಒಳಪ್ರವೇಶಿಸಿದ ಕಳ್ಳರು, ದೇವಿಯ ಮೂರ್ತಿಯ ಮೇಲಿದ್ದ ಅಂದಾಜು 30,000 ರೂ. ಮೌಲ್ಯದ 6ಗ್ರಾಂ ತೂಕದ ಮೂರು ಬಂಗಾರದ ತಾಳಿಗಳನ್ನು ಕಳವು ಮಾಡಿದ್ದಾರೆ. ಅಲ್ಲದೆ ಅಲ್ಲಿದ್ದ ಕಬ್ಬಿಣದ ಹುಂಡಿಯನ್ನು ಒಡೆದು ಅದರಲ್ಲಿದ್ದ ಸುಮಾರು 25,000 ರೂ. ನಗದನ್ನು ದೋಚಿದ್ದಾರೆ.

ದೇವಸ್ಥಾನದ ಬಾಗಿಲುಗಳಿಗೆ ಹಾನಿ ಮಾಡಿರುವ ಕಳ್ಳರು ಒಟ್ಟು 63,000 ರೂ. ಮೌಲ್ಯದ ಸ್ವತ್ತನ್ನು ಲೂಟಿ ಮಾಡಿದ್ದಾರೆ. ಎರಡೂ ದೇವಸ್ಥಾನಗಳ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಶಾಂತಮೂರ್ತಿ ಎಸ್.ಬಿ. ಅವರು ಈ ಕುರಿತು ಅಜ್ಜಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ.

Locks of two temples broken gold ornaments stolen

Share

Leave a comment

Leave a Reply

Your email address will not be published. Required fields are marked *

Don't Miss

ಕೇಂದ್ರ ಶಿಕ್ಷಣ ಸಚಿವರ ವಜಾಕ್ಕೆ ಆಗ್ರಹಿಸಿ ಸಿಪಿಐ(ಎಂ.ಎಲ್)ರೆಡ್‌ಸ್ಟಾರ್ ಪ್ರತಿಭಟನೆ

ಚಿಕ್ಕಮಗಳೂರು: ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಪ್ರಹಾರವನ್ನು ಖಂಡಿಸಿರುವ ಸಿಪಿಐ(ಎಂ.ಎಲ್)ರೆಡ್‌ಸ್ಟಾರ್ ಪಕ್ಷವು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಕೇಂದ್ರದ ಶಿಕ್ಷಣ ಸಚಿವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ...

ಕಾಫಿ ತೋಟದ ಮಾಲೀಕ ಹಾರಿಸಿದ ಗುಂಡೇಟಿನಿಂದ ಬಾಲಕನಿಗೆ ಗಾಯ

ಮೂಡಿಗೆರೆ: ಕೂಲಿ ಹಣದ ವಿಚಾರವಾಗಿ ಕಾಫಿ ತೋಟದ ಮಾಲೀಕ ಹಾಗೂ ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದಾಗ, ತೋಟದ ಮಾಲೀಕ ಹಾರಿಸಿದ ಗುಂಡು 4 ವರ್ಷದ ಬಾಲಕನ ತಲೆಗೆ ತಾಗಿದ ಘಟನೆ...

Related Articles

ತಾಕತ್ತಿದ್ದರೆ ಸಿ.ಟಿ. ರವಿಯನ್ನು ತಡೆಯಿರಿ

  ಚಿಕ್ಕಮಗಳೂರು, ಜು.30: ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಸಿ.ಟಿ. ರವಿ...

ಜಲಯೋಗ ಸಾಧನೆಯಲ್ಲಿ ವಕೀಲ ವಿ.ಕೆ.ರಘು ವಿಶ್ವ ದಾಖಲೆ

ಚಿಕ್ಕಮಗಳೂರು: ನಗರದ ವಕೀಲ ವಿ.ಕೆ.ರಘು ಅವರು ಜಲಯೋಗ ಸಾಧನೆಯಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಬಾರಿಯ...

ಬ್ಯಾಂಕ್ ಸಾಲದಿಂದ ಮುಕ್ತಿ ಹೊಂದಲು ಕ್ಯಾನ್ ಅದಾಲತ್

ಚಿಕ್ಕಮಗಳೂರು: ಬ್ಯಾಂಕ್ ಸುಸ್ತಿದಾರ ಬೆಳೆಗಾರರ ಅನುಕೂಲಕ್ಕಾಗಿ ಕೆನರಾ ಬ್ಯಾಂಕ್ ಕಾಫಿ ಬೆಳೆಯುವ ಜಿಲ್ಲೆಗಳ ಆಯ್ದ ಕೆಲವು...

ರಾಜ್ಯ ಮಟ್ಟದ ಕಬಡ್ಡಿಯಲ್ಲಿ ಚಿಕ್ಕಮಗಳೂರು ಮಹಿಳಾ ತಂಡಕ್ಕೆ ಚಾಂಪಿಯನ್ ಪಟ್ಟ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ಶ್ರೀ ಬೈರತಿ ಸುರೇಶ್ ಅವರ ನೇತೃತ್ವದಲ್ಲಿ ಜುಲೈ 27ರಿಂದ...