Home namma chikmagalur chikamagalur ಸಾರ್ವಜನಿಕ ರಸ್ತೆ ಬದಿಯಲ್ಲಿ ಮೂಟೆ ತುಂಬಿದ ಗೋಮಾಂಸ ಪತ್ತೆ
chikamagalurHomeLatest Newsnamma chikmagalur

ಸಾರ್ವಜನಿಕ ರಸ್ತೆ ಬದಿಯಲ್ಲಿ ಮೂಟೆ ತುಂಬಿದ ಗೋಮಾಂಸ ಪತ್ತೆ

Share
Share

ಚಿಕ್ಕಮಗಳೂರು: ಸಾರ್ವಜನಿಕ ರಸ್ತೆ ಬದಿಯಲ್ಲಿ ಮೂಟೆ ತುಂಬಿದ ಗೋಮಾಂಸ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಮಾಂಸ ಇದ್ದ ಚೀಲವನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಮಧುವನ ಲೇಔಟ್‌ನಿಂದ ಅಯ್ಯಪ್ಪ ನಗರದ ಕಡೆಗೆ ಹೋಗುವ ರಸ್ತೆಯ ಬದಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿದ್ದ ಮಾಂಸದ ತುಂಡುಗಳನ್ನು ಬೀದಿ ನಾಯಿಗಳು ಎಳೆದಾಡುತ್ತಿರುವುದನ್ನು ನಗರ ಪೊಲೀಸ್ ಠಾಣೆಯ ಪಿಎಸ್‌ಐ ಸುನೀತಾ ಕೆ.ಆರ್. ಅವರು ತಮ್ಮ ಸಿಬ್ಬಂದಿಯೊಂದಿಗೆ ಗಸ್ತಿನಲ್ಲಿದ್ದಾಗ ಗಮನಿಸಿದ್ದಾರೆ.

ಇದನ್ನು ಪರಿಶೀಲಿಸಿದಾಗ, ಯಾರೋ ಅಪರಿಚಿತ ಕಿಡಿಗೇಡಿಗಳು ಪ್ರಾಣಿಯೊಂದನ್ನು ಕೊಯ್ದು ಅದರ ಮೂಳೆ ಮತ್ತು ಮಾಂಸದ ತುಂಡುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ರಸ್ತೆ ಬದಿಯಲ್ಲಿ ಎಸೆದು ಹೋಗಿರುವುದು ಪತ್ತೆಯಾಗಿದೆ.

ಈ ಮಾಂಸದ ತುಂಡುಗಳು ಮತ್ತು ಮೂಳೆಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ಇವು ಮೇಲ್ನೋಟಕ್ಕೆ ಗೋಮಾಂಸ ಎಂದು ದೃಢಪಟ್ಟಿದೆ. ಮುಂದಿನ ಕಾನೂನು ಕ್ರಮ ಜರುಗಿಸುವ ಸಲುವಾಗಿ ಪೊಲೀಸರು ಸುಮಾರು 30 ಕೆ.ಜಿ ತೂಕದ ಗೋಮಾಂಸವನ್ನು ಸ್ಥಳದಲ್ಲೇ ಜಪ್ತಿ ಮಾಡಿದ್ದು, ಸಾರ್ವಜನಿಕ ಸ್ಥಳದಲ್ಲಿ ಇಂತಹ ಕೃತ್ಯ ಎಸಗಿದ ಕಿಡಿಗೇಡಿಗಳ ಪತ್ತೆಗಾಗಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

A bag full of beef was found on the side of a public road.

Share

Leave a comment

Leave a Reply

Your email address will not be published. Required fields are marked *

Don't Miss

ನೀಟ್ ವಿದ್ಯಾರ್ಥಿಗಳ ಹಲ್ಲೆ ಖಂಡಿಸಿ ಸಿಪಿಐನಿಂದ ಪ್ರತಿಭಟನೆ

ಚಿಕ್ಕಮಗಳೂರು:  ನೀಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಸಿಪಿಐ ತಾಲ್ಲೂಕು ಘಟಕದಿಂದ ಗುರುವಾರ ನಗರದ ಆಜಾದ್‌ಪಾರ್ಕ್ ವೃತ್ತ ದಲ್ಲಿ ಮುಖಂಡರುಗಳು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ...

ಮಳೆಗಾಗಿ ಅಯ್ಯನಕೆರೆ, ಮದಗದಕೆರೆ ತಪ್ಪಲಿನಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಆತಂಕಗೊಂಡಿರುವ ಕಡೂರು ತಾಲೂಕಿನ ಅಯ್ಯನಕೆರೆ ಹಾಗೂ ಮದಗದಕೆರೆ ತಪ್ಪಲಿನ ಗ್ರಾಮಸ್ಥರು ಉತ್ತಮ ಮಳೆಯಾಗಿ ಕೆರೆಗಳು ತುಂಬಲಿ ಎಂಬ ಆಶಯದೊಂದಿಗೆ ವಿಶೇಷ ಪೂಜೆ ನೆರವೇರಿಸಿದರು. ಸುಮಾರು 1,300 ಹೆಕ್ಟೇರ್...

Related Articles

ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ

ಚಿಕ್ಕಮಗಳೂರು: ಸಮಾನತೆಯ ಆಶಯ ದೊಂದಿಗೆ ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ...

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ಶೃಂಗೇರಿ : ತಾಲೂಕಿನ ನೆಮ್ಮಾರ್ ಸರ್ಕಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ...

ಶಂಕರ ಭಾರತಿ ಗೋಶಾಲೆಗೆ ₹10 ಲಕ್ಷ ವೆಚ್ಚದ ನೂತನ ಗೋಶೆಡ್ ನಿರ್ಮಾಣ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸ್ಟೇಟ್...

ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ...