Home namma chikmagalur chikamagalur ಗೋಲಿ ಆಟವಾಡಲು ಅವಕಾಶ ನೀಡದಕ್ಕೆ ಯುವಕ ಮೇಲೆ ಹಲ್ಲೆ
chikamagalurHomeLatest Newsnamma chikmagalur

ಗೋಲಿ ಆಟವಾಡಲು ಅವಕಾಶ ನೀಡದಕ್ಕೆ ಯುವಕ ಮೇಲೆ ಹಲ್ಲೆ

Share
Share

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಆಶ್ರಯ ಬಡಾವಣೆಯ ಸಮುದಾಯ ಭವನದ ಮೈದಾನದಲ್ಲಿ ನಡೆದಿದೆ.

ಮೈದಾನದಲ್ಲಿ ಅರುಣ, ಮಣಿಕಂಠ ಹಾಗೂ ಯತೀಶ್ ಎಂಬುವವರು ಗೋಲಿ ಆಟವಾಡುತ್ತಿದ್ದು, ಅದನ್ನು ನೋಡಿದ ಸೋಮಶೇಖರ್ ಎಂಬ ಯುವಕ ತನಗೂ ಒಂದು ಆಟ ಆಡಲು ಅವಕಾಶ ನೀಡುವಂತೆ ಕೇಳಿದ್ದಾನೆ.

ಈ ಮಾತಿಗೆ ತೀವ್ರವಾಗಿ ಕೆರಳಿದ ಅರುಣ ಹಾಗೂ ಆತನ ಸ್ನೇಹಿತರು ಸೋಮಶೇಖರ್‌ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಏಕಾಏಕಿ ಕುತ್ತಿಗೆ ಪಟ್ಟಿ ಹಿಡಿದು ಅಲ್ಲೇ ಇದ್ದ ಜಲ್ಲಿಕಲ್ಲಿನ ಮೇಲೆ ತಳ್ಳಿ ಹಾಕಿದ್ದಾರೆ.

ಅಷ್ಟಕ್ಕೇ ನಿಲ್ಲಿಸದೆ ಕೆಳಗೆ ಬಿದ್ದಿದ್ದ ಯುವಕನನ್ನು ಕಾಲಿನಿಂದ ಮನಬಂದಂತೆ ಒದ್ದು ತೀವ್ರವಾಗಿ ಗಾಯಗೊಳಿಸಿದ್ದಾರೆ.

ಗಲಾಟೆಯ ಸದ್ದು ಕೇಳಿ ಓಡಿಬಂದ ಸ್ಥಳೀಯರು ತಕ್ಷಣವೇ ಜಗಳವನ್ನು ಬಿಡಿಸಿದ್ದು, ಸದ್ಯ ಗಾಯಾಳು ಸೋಮಶೇಖ‌ರ್ ಸರ್ಕಾರಿ ಮಲ್ಲೇಗೌಡ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆ ನಡೆಸಿದ ಮೂವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Young man attacked for not allowing him to play goalie

Share

Leave a comment

Leave a Reply

Your email address will not be published. Required fields are marked *

Don't Miss

ನೀಟ್ ವಿದ್ಯಾರ್ಥಿಗಳ ಹಲ್ಲೆ ಖಂಡಿಸಿ ಸಿಪಿಐನಿಂದ ಪ್ರತಿಭಟನೆ

ಚಿಕ್ಕಮಗಳೂರು:  ನೀಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಸಿಪಿಐ ತಾಲ್ಲೂಕು ಘಟಕದಿಂದ ಗುರುವಾರ ನಗರದ ಆಜಾದ್‌ಪಾರ್ಕ್ ವೃತ್ತ ದಲ್ಲಿ ಮುಖಂಡರುಗಳು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ...

ಮಳೆಗಾಗಿ ಅಯ್ಯನಕೆರೆ, ಮದಗದಕೆರೆ ತಪ್ಪಲಿನಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಆತಂಕಗೊಂಡಿರುವ ಕಡೂರು ತಾಲೂಕಿನ ಅಯ್ಯನಕೆರೆ ಹಾಗೂ ಮದಗದಕೆರೆ ತಪ್ಪಲಿನ ಗ್ರಾಮಸ್ಥರು ಉತ್ತಮ ಮಳೆಯಾಗಿ ಕೆರೆಗಳು ತುಂಬಲಿ ಎಂಬ ಆಶಯದೊಂದಿಗೆ ವಿಶೇಷ ಪೂಜೆ ನೆರವೇರಿಸಿದರು. ಸುಮಾರು 1,300 ಹೆಕ್ಟೇರ್...

Related Articles

ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ

ಚಿಕ್ಕಮಗಳೂರು: ಸಮಾನತೆಯ ಆಶಯ ದೊಂದಿಗೆ ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ...

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ಶೃಂಗೇರಿ : ತಾಲೂಕಿನ ನೆಮ್ಮಾರ್ ಸರ್ಕಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ...

ಶಂಕರ ಭಾರತಿ ಗೋಶಾಲೆಗೆ ₹10 ಲಕ್ಷ ವೆಚ್ಚದ ನೂತನ ಗೋಶೆಡ್ ನಿರ್ಮಾಣ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸ್ಟೇಟ್...

ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ...