ಚಿಕ್ಕಮಗಳೂರು: ಪ್ರವಾಸಕ್ಕೆಂದು ಬಂದಿದ್ದ ಬೀದರ್ ಮೂಲದ ಬೈಕ್ ಸವಾರನಿಗೆ ಕಾರೊಂದು ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಸಂಭವಿಸಿದ್ದು. ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ಗ್ರಾಮಾಂತರ ಠಾಣೆಯ ಪೊಲೀಸರು ಹಾಗೂ ‘ಪ್ರವಾಸಿ ಮಿತ್ರ’ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಗಾಯಾಳಿಗೆ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದು ಬಳಿಕ ಆಂಬುಲೆನ್ಸ್ ಮೂಲಕ ಗಾಯಾಳುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಸದ್ಯ ಮುಂಗಾರು ಮಳೆ ಆರಂಭವಾಗಿರುವುದರಿಂದ ಗಿರಿಶಿಖರಗಳತ್ತ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು, ಮಂಜು ಮುಸುಕಿದ ವಾತಾವರಣ ಮತ್ತು ಕಡಿದಾದ ತಿರುವುಗಳಲ್ಲಿ ವಾಹನ ಚಾಲಕರು ಅತಿ ಹೆಚ್ಚು ಜಾಗರೂಕರಾಗಿರಬೇಕಾದ ಅಗತ್ಯವಿದ್ದು ಪ್ರಕೃತಿ ಸೌಂದರ್ಯವನ್ನು ಸವಿಯಲು ಮುಂಗಾರು ಮಳೆಯಲ್ಲಿ ಕಾಫಿ ನಾಡಿಗೆ ಲಗ್ಗೆ ಇಡುತ್ತಿರುವ ಪ್ರವಾಸಿಗರಿಗೆ ಇದೊಂದು ಎಚ್ಚರಿಕೆಯಾಗಿದೆ.
Bike-Car head-on collision: Driver seriously injured
Leave a comment