Home namma chikmagalur chikamagalur ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
chikamagalurCrime NewsHomeLatest Newsnamma chikmagalur

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Share
Share

ಚಿಕ್ಕಮಗಳೂರು: ತರಾತುರಿಯಲ್ಲಿ ಮನೆಗೆ ಬೀಗ ಹಾಕದೆ ಹೊರಟ ದಂಪತಿಯ ನಿರ್ಲಕ್ಷ್ಯವನ್ನು ಬಂಡವಾಳ ಮಾಡಿಕೊಂಡ ಕಳ್ಳರು, ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂತವೇರಿಯಲ್ಲಿ ನಡೆದಿದೆ.

ಸಂತವೇರಿ ನಿವಾಸಿ ಚಂದ್ರಪ್ಪ ಹಾಗೂ ಅವರ ಹೆಂಡತಿ ಇತ್ತೀಚೆಗಷ್ಟೇ ಚಿಕ್ಕಮಗಳೂರಿನ ಆಭರಣ ಜ್ಯುವೆಲರ್ಸ್‌ನಲ್ಲಿ 6,35,344 ರೂಪಾಯಿ ಮೌಲ್ಯದ 27.090 ಗ್ರಾಂ ತೂಕದ ಒಂದು ಚಿನ್ನದ ನೆಕ್ಲಿಸ್ ಹಾಗೂ 10.24 ಗ್ರಾಂ ತೂಕದ ಚಿನ್ನದ ಕಿವಿ ಓಲೆಯನ್ನು ಖರೀದಿಸಿದ್ದರು. ಆ ಒಡವೆಗಳನ್ನು ಮನೆಯ ನಡುಬಟ್ಟೆಯ ಟೀಪಾಯಿ ಮೇಲಿದ್ದ ಬಟ್ಟೆಯೊಂದರ ಅಡಿಯಲ್ಲಿ ಬಚ್ಚಿಟ್ಟಿದ್ದರು.

ಮಗನನ್ನು ಶಾಲೆಗೆ ಸೇರಿಸಲು ದಂಪತಿ ಬೈಕ್‌ನಲ್ಲಿ ದೇವರಹಳ್ಳಿಗೆ ಹೊರಟಾಗ, ಅವರ ಹೆಂಡತಿ ಅವಸರದಲ್ಲಿ ಮನೆಗೆ ಬೀಗ ಹಾಕಲು ಮರೆತಿದ್ದಾರೆ. ಹೊಸಗಂಗೂರು ಘಾಟಿಯಲ್ಲಿ ಹೋಗುವಾಗ ಈ ವಿಷಯ ನೆನಪಿಗೆ ಬಂದು, ಎದುರು ಮನೆಯ ಕಾಂಚನ ಎಂಬುವರಿಗೆ ಫೋನ್ ಮಾಡಿ ಬೀಗ ಹಾಕಲು ತಿಳಿಸಿದ್ದಾರೆ.

ಕಾಂಚನ ಅವರು ಮನೆಗೆ ಹೋಗಿ ನೋಡಿದಾಗ ಒಳಗಿನ ಬಟ್ಟೆ ಮತ್ತು ಬ್ಯಾಗ್‌ಗಳು ಚಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ. ಅನುಮಾನಗೊಂಡು ಒಡವೆ ಇಟ್ಟಿದ್ದ ಜಾಗವನ್ನು ಪರಿಶೀಲಿಸಿದಾಗ ಚಿನ್ನದ ನೆಕ್ಲಿಸ್ ಹಾಗೂ ಕಿವಿ ಓಲೆ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಚಂದ್ರಪ್ಪ ಅವರು ಲಿಂಗದಹಳ್ಳಿ ಠಾಣೆಗೆ ದೂರು ನೀಡಿದ್ದು, ಪೊಲೀಸರು ಕಳ್ಳರ ಪತ್ತೆಗೆ ಜಾಲ ಬೀಸಿದ್ದಾರೆ.

Jewellery worth lakhs of rupees stolen

Share

Leave a comment

Leave a Reply

Your email address will not be published. Required fields are marked *

Don't Miss

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

Related Articles

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ...

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ...

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ...