Home namma chikmagalur chikamagalur ವಿಳಾಸ ಕೇಳುವ ನೆಪದಲ್ಲಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ ಕಳವು
chikamagalurCrime NewsHomeLatest Newsnamma chikmagalur

ವಿಳಾಸ ಕೇಳುವ ನೆಪದಲ್ಲಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ ಕಳವು

Share
Share

ಚಿಕ್ಕಮಗಳೂರು: ವಿಳಾಸ ಕೇಳುವ ನೆಪದಲ್ಲಿ ಗಮನ ಬೇರೆಡೆಗೆ ಸೆಳೆದು ಬರೋಬ್ಬರಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ನ್ನು ಕಿತ್ತುಕೊಂಡು ಇನ್ನೋವಾ ಕಾರಿನಲ್ಲಿ ಪರಾರಿಯಾಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದ ನಿವಾಸಿ ರವಿಕುಮಾರ್ ಶೆಟ್ಟಿ ಹಾಗೂ ಅವರ ಸ್ನೇಹಿತರಾದ ನಾಗೇಶ್, ಹರ್ಷ ಶೆಟ್ಟಿ ಮತ್ತು ಸುಧಾಕರ್ ಚಾರ್ಯ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಿಕ್ಕಮಗಳೂರು ತಾಲೂಕಿನ ಕೈಮರ ಸರ್ಕಲ್ ಸಮೀಪ ಮೂತ್ರ ವಿಸರ್ಜನೆಗಾಗಿ ಗಾಡಿ ನಿಲ್ಲಿಸಿದಾಗ ಈ ಘಟನೆ ಸಂಭವಿಸಿದೆ.

ಈ ವೇಳೆ ಬಿಳಿ ಬಣ್ಣದ ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ (ನಂಬರ್ KA56M7886) ಬಂದ ಅಪರಿಚಿತ ಚಾಲಕನು ವಿಳಾಸ ಕೇಳಿದ್ದಾನೆ. ಸುಧಾಕರ್ ಅವರು ವಿಳಾಸ ಹೇಳುತ್ತಿದ್ದಾಗ, ಚಾಲಕನು ತಕ್ಷಣವೇ ಅವರ ಬಳಿ ಇದ್ದ ಎಂಟು ಲಕ್ಷ ರೂಪಾಯಿ ನಗದನ್ನು ಒಳಗೊಂಡಿದ್ದ ಬ್ಯಾಗ್‌ನ್ನು ಬಲವಂತವಾಗಿ ಕಿತ್ತುಕೊಂಡು ಕಾರಿನೊಂದಿಗೆ ಸ್ಥಳದಿಂದ ವೇಗವಾಗಿ ಪರಾರಿಯಾಗಿದ್ದಾನೆ.

ಸಂತ್ರಸ್ತ ರವಿಕುಮಾರ್ ಶೆಟ್ಟಿ ಅವರು ನೀಡಿದ ದೂರಿನನ್ವಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Bag containing Rs 8 lakh stolen on pretext of asking for address

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...