Home Crime News ಹಣ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕ ಕೆರೆಗೆ ಹಾರಿ ಆತ್ಮಹತ್ಯೆ
Crime NewsHomeLatest Newsnamma chikmagalur

ಹಣ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕ ಕೆರೆಗೆ ಹಾರಿ ಆತ್ಮಹತ್ಯೆ

Share
Share

ಚಿಕ್ಕಮಗಳೂರು: ಹಣ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ. ಟಿಂಬರ್ ಸೇರಿದಂತೆ ಇನ್ನಿತರ ಕೆಲಸ ಮಾಡಿಕೊಂಡಿದ್ದ ಬನ್ನೂರಿನ ಪ್ರದೀಪ್ (27) ಮೃತಪಟ್ಟ ದುರ್ದೈವಿ.

ಪ್ರದೀಪ್ ಕಳೆದ ಕೆಲವು ದಿನಗಳಿಂದ ಹಣಕ್ಕಾಗಿ ಪೋಷಕರಲ್ಲಿ ಪಟ್ಟು ಹಿಡಿದಿದ್ದ ಎನ್ನಲಾಗಿದೆ. ಆದರೆ, ಪೋಷಕರು ಹಣ ನೀಡಲು ನಿರಾಕರಿಸಿ, ಸ್ವಂತವಾಗಿ ದುಡಿದು ಸಂಪಾದಿಸುವಂತೆ ಬುದ್ದಿವಾದ ಹೇಳಿದ್ದರು.

ಇದರಿಂದ ಸಮಾಧಾನಗೊಳ್ಳದ ಪ್ರದೀಪ್, ಸಂಘದಿಂದ ತನಗೆ ಸಾಲ ಕೊಡಿಸುವಂತೆ ಮಗದೊಮ್ಮೆ ಪೋಷಕರಲ್ಲಿ ಒತ್ತಾಯಿಸಿದ್ದಾನೆ. ಪೋಷಕರು ಇದಕ್ಕೂ ಒಪ್ಪದಿದ್ದಾಗ ತೀವ್ರ ಬೇಸರಗೊಂಡು ಭಾನುವಾರ ಸಂಜೆ ಮನೆಯವರೊಂದಿಗೆ ಜಗಳವಾಡಿ ಆಕ್ರೋಶದಿಂದ ಹೊರನಡೆದಿದ್ದಾನೆ.

ಮನೆಯಿಂದ ಹೋದವನು ವಾಪಸ್ ಬಾರದಿದ್ದಾಗ ಆತಂಕಗೊಂಡ ಪೋಷಕರು ಆತನ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಪೋಷಕರು ಕೆಲಸ ಮಾಡುವ ಕಾಫಿ ತೋಟದ ಕೆರೆಯ ಬಳಿ ಪ್ರದೀಪ್ ಮೃತದೇಹ ಪತ್ತೆಯಾಗಿದೆ.

ಹಣ ಸಿಗದ ಬೇಸರದಲ್ಲಿ ಆತ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿರುವುದು ಪ್ರಾಥಮಿಕವಾಗಿ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಆಲ್ಲೂರು ಠಾಣೆಯ ಪೊಲೀಸರು, ಸ್ಥಳೀಯ ಈಜುಗಾರರ ಸಹಾಯದಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Young man commits suicide by jumping into lake after not getting money

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ

ಕೊಟ್ಟಿಗೆಹಾರ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ...

ತೀವ್ರಗೊಂಡ ಉದ್ಯಮಿ ಪತ್ನಿಯ ಆತ್ಮಹತ್ಯೆ ಪ್ರಕರಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು ನಗರದ ಉದ್ಯಮಿ ರಾಜೇಶ್ ಅವರ ಪತ್ನಿ ಸುಮ (55) ಆಲೇನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅವರು...

Related Articles

ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ-ದಂಡ

ಚಿಕ್ಕಮಗಳೂರು: ಅಪ್ರಾಪ್ತೆಯೊಬ್ಬಳು ಗರ್ಭಿಣಿಯಾಗಲು ಕಾರಣನಾದ ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ಎಫ್.ಟಿ.ಎಸ್.ಈ-೧ರ...

ನರೇಂದ್ರ ಮೋದಿ ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ

ಚಿಕ್ಕಮಗಳೂರು : ಸಾರ್ವತ್ರಿಕ ಚುನಾವಣೆಗಳ ಮೂಲಕ ಭಾರತದ ಅತಿ ಹೆಚ್ಚುಕಾಲ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ...

ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು

  ಚಿಕ್ಕಮಗಳೂರು : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್ ಅವರ ಅಧಿಕಾರ ಸ್ವೀಕಾರ ಸಮಾರಂಭ...

ವಿದ್ಯುತ್ ಕ್ಷೇತ್ರ ಖಾಸಗಿಕರಣಕ್ಕೆ ರೈತ ಸಂಘ ವಿರೋಧ

ಚಿಕ್ಕಮಗಳೂರು : ವಿದ್ಯುತ್ ಕ್ಷೇತ್ರವನ್ನು ಟಾಟಾ ಪವರ್ ಕಂಪನಿಗೆ ನೀಡುವ ಮೂಲಕ ಖಾಸಗಿಕರಣಗೊಳಿಸುವ ನಿರ್ಧಾರವನ್ನು ಖಂಡಿಸುವುದಾಗಿ...