ಶೃಂಗೇರಿ: ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಯುವಕನೊಬ್ಬನನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ.
ಪಟ್ಟಣದಲ್ಲಿ ಕುಷನ್ ಅಂಗಡಿ ನಡೆಸುತ್ತಿದ್ದ ಶಬೀರ್ ಎಂಬಾತ ತನ್ನ ಅಂಗಡಿ ಬಳಿ ಬಂದಿದ್ದ ಅಪ್ರಾಪ್ತ ಬಾಲಕಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.
ಘಟನೆಯ ಬಳಿಕ ಮನೆಗೆ ತೆರಳಿದ ಬಾಲಕಿ ತನ್ನ ತಾಯಿಗೆ ನಡೆದ ಘಟನೆ ಕುರಿತು ಮಾಹಿತಿ ನೀಡಿದ್ದಾಳೆ. ಇದರಿಂದ ಆಘಾತಗೊಂಡ ಬಾಲಕಿಯ ತಾಯಿ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.
ದೂರಿನ ಅನ್ವಯ ತಕ್ಷಣ ಕಾರ್ಯಪ್ರವೃತ್ತರಾದ ಶೃಂಗೇರಿ ಪೊಲೀಸರು ಆರೋಪಿಯನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ.
ಆರೋಪಿಯ ವಿರುದ್ಧ ಪೊಕ್ಸೊ (POCSO) ಕಾಯ್ದೆ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಬಾಲಕಿಯರ ಸುರಕ್ಷತೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
Youth arrested for indecent behavior with minor girl
Leave a comment