Home namma chikmagalur chikamagalur ಬಾರ್ ನಲ್ಲಿ ಕ್ಯಾಶಿಯರ್ ಮೇಲೆ ಹಲ್ಲೆ – ಮದ್ಯ ಹಾನಿ
chikamagalurHomeLatest Newsnamma chikmagalur

ಬಾರ್ ನಲ್ಲಿ ಕ್ಯಾಶಿಯರ್ ಮೇಲೆ ಹಲ್ಲೆ – ಮದ್ಯ ಹಾನಿ

Share
Share

ಅಜ್ಜಂಪುರ: ಅಂತರಘಟ್ಟೆಯ ಶ್ರೀನಿಧಿ ಬಾರ್ ಅಂಡ್‌ ರೆಸ್ಟೋರೆಂಟ್‌ನಲ್ಲಿ ನಡೆದ ಅತಿಕ್ರಮ ಪ್ರವೇಶ ಹಾಗೂ ಧ್ವಂಸ ಪ್ರಕರಣವೊಂದು ಇದೀಗ ಭಾರೀ ಸದ್ದು ಮಾಡುತ್ತಿದೆ. ಮಂಗಳವಾರ ರಾತ್ರಿ ಬಾರ್ ಮುಚ್ಚಿ ಸಿಬ್ಬಂದಿ ಲೆಕ್ಕಾಚಾರದಲ್ಲಿ ನಿರತರಾಗಿದ್ದಾಗ, ಮುಗಳಿ ಗ್ರಾಮದ ಸೂರ್ಯಪ್ರಸಾದ್ ಹಾಗೂ ಅಭಿಷೇಕ ಎಂಬುವವರು ದರ್ಪ ಮೆರೆದಿದ್ದಾರೆ.

ಕೈಯಲ್ಲಿ ಕಬ್ಬಿಣದ ರಾಡ್ ಹಿಡಿದುಕೊಂಡು ಕ್ಯಾಶ್ ಕೌಂಟರ್‌ಗೆ ನುಗ್ಗಿದ ಆರೋಪಿಗಳು, ಕ್ಯಾಶಿಯರ್ ಸುರೇಶ್ ಕುಮಾರ್ ಅವರ ಮೇಲೆ ಅವಾಚ್ಯವಾಗಿ ನಿಂದನೆ ನಡೆಸಿದ್ದಾರೆ. ಸುಮ್ಮನಿರದ ಈ ಕಿಡಿಗೇಡಿಗಳು ಬಾರ್‌ನಲ್ಲಿ ಜೋಡಿಸಿದ್ದ ಮದ್ಯದ ಬಾಟಲಿಗಳನ್ನು ರಾಡ್‌ನಿಂದ ಹೊಡೆದು ಪುಡಿಪುಡಿ ಮಾಡಿದ್ದಾರೆ. ಈ ದಾಳಿಯಲ್ಲಿ ಬರೋಬ್ಬರಿ 52,000 ರೂಪಾಯಿ ಮೌಲ್ಯದ ಮದ್ಯ ಸಂಪೂರ್ಣ ಹಾನಿಯಾಗಿದೆ.

ಅಷ್ಟೇ ಅಲ್ಲದೆ, ಇವತ್ತು ಬದುಕಿದ್ದೀರ ನೋಡಿಕೊಳ್ಳುತ್ತೇವೆ ಎಂದು ಕ್ಯಾಶಿಯರ್‌ಗೆ ಪ್ರಾಣ ಬೆದರಿಕೆ ಹಾಕಿ, ಅಲ್ಲಿಂದ ಪರಾರಿಯಾಗಿದ್ದಾರೆ. ಈ ಕುರಿತು ಬಾರ್ ಮಾಲೀಕರಿಗೆ ವಿಷಯ ತಿಳಿಸಿ, ಸುರೇಶ್ ಕುಮಾರ್ ಅವರು ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳಾದ ಸೂರ್ಯಪ್ರಸಾದ್ ಮತ್ತು ಅಭಿಷೇಕ ಅವರ ವಿರುದ್ಧ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

Cashier attacked at bar – alcohol damaged

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...